ಶಿಕ್ಷಣದ ಜೊತೆ ಸಂಸ್ಕೃತಿ, ಸಂಸ್ಕಾರ, ಮಾನವೀಯ ಮೌಲ್ಯ ಬೆಳೆಸಬೇಕು
ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದು ಗದಗ – ಶಿವಮೊಗ್ಗ – ದಾವಣಗೆರೆ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜನವರು ಕರೆ ನೀಡಿದರು.
ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕೃತಿ, ಸಂಸ್ಕಾರ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸಬೇಕು ಎಂದು ಗದಗ – ಶಿವಮೊಗ್ಗ – ದಾವಣಗೆರೆ ವೀರೇಶ್ವರ ಪುಣ್ಯಾಶ್ರಮದ ಪೀಠಾಧಿಪತಿ ಶ್ರೀ ಕಲ್ಲಯ್ಯಜ್ಜನವರು ಕರೆ ನೀಡಿದರು.
ಇದೇ ಜ.5 ಹಾಗೂ 6 ರಂದು ರಾಜ್ಯ ಮಟ್ಟದ ಯುವ ಜನೋತ್ಸವವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಮಾಜದ ಹಿರಿಯರಾದ ಶಾಮನೂರು ಶಿವಶಂಕರಪ್ಪ ಅವರನ್ನು ತರಳಬಾಳು ಜಗದ್ಗುರು ಶಾಖಾಮಠ ಹರಳಕಟ್ಟೆಯ ಶ್ರೀ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಸೋಮವಾರ ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿದರು.
ಜಗಳೂರು : ಪಟ್ಟಣದಲ್ಲಿ ಇದೇ ಜನವರಿ 11 ಮತ್ತು 12 ರಂದು ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ಶಾಸಕ ಬಿ. ದೇವೇಂದ್ರಪ್ಪ, ಸಮ್ಮೇಳನದ ಸರ್ವಾಧ್ಯಕ್ಷ ಡಾ.ಎ.ಬಿ ರಾಮಚಂದ್ರಪ್ಪ, ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ಅವರು ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ಅನಾವರಣಗೊಳಿಸಿದರು.
ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ 2024-25 ನೇ ಸಾಲಿನ 14 ಮತ್ತು 17 ವರ್ಷ ವಯೋಮಿತಿಯೊಳಗಿನ ಬೆಂಗಳೂರು ವಿಭಾಗ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಆರಂಭಗೊಂಡಿತು.
ರಂಗ ಅನಿಕೇತನ, ದಾವಣಗೆರೆ ಮಾನವ ಬಂಧುತ್ವ ವೇದಿಕೆ, ಎ.ವಿ.ಕೆ. ಕಾಲೇಜು ಆಶ್ರಯದಲ್ಲಿ ಮಹಿಳೆಯರಿಗಾಗಿ ತಮಟೆ ಮತ್ತು ಕಂಸಾಳೆ ತರಬೇತಿ ಶಿಬಿರವನ್ನು ಎ.ವಿ.ಕೆ. ಕಾಲೇಜಿನ ಆವರಣದಲ್ಲಿರುವ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು.
ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಎಸ್.ಎಸ್.ಕೆ ಸಮಾಜ ಮುಂದೆ ಬರಬೇಕಿದೆ ಎಂದು ಸಭಾಪತಿ ಬಸವರಾಜ್ ಹೊರಟ್ಟಿ ಆಶಯ ವ್ಯಕ್ತಪಡಿಸಿದರು.
ಕುವೆಂಪು ಸಾಮಾಜಿಕ ಪರಿವರ್ತನೆಗೆ ಸಾಹಿತ್ಯದ ಮೂಲಕ ಉತ್ಕೃಷ್ಟ ಕೊಡುಗೆ ನೀಡಿದ ಮಹಾನ್ ಸಂತರಾಗಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಿ.ವಾಮದೇವಪ್ಪ ಅಭಿಪ್ರಾಯಪಟ್ಟರು.
ಹಿರಿಯ ರಾಜಕೀಯ ಮುತ್ಸದ್ಧಿ ಹಾಗೂ ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅವರು ಸ್ವತಃ ವಿಡಿಯೋ ಸಂದೇಶದ ಮೂಲಕ ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಕಾರ್ಯಕ್ರಮವೊಂದ ರಲ್ಲಿ ಭಾಗವಹಿಸಲೆಂದು ಇಂದು ನಗರಕ್ಕೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ, ಸಂಸತ್ ಸದಸ್ಯ ಜಗದೀಶ್ ಶೆಟ್ಟರ್, ಶಾಸಕ ಮಹೇಶ್ ಟೆಂಗಿನಕಾಯಿ, ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಅವರುಗಳು ಮಹಾನಗರ ಪಾಲಿಕೆ ಮಾಜಿ ಸದಸ್ಯ ಶಿವನಹಳ್ಳಿ ರಮೇಶ್ ಮನೆಯಲ್ಲಿ ಮನ್ ಕಿ ಬಾತ್ ಕಾರ್ಯ ಕ್ರಮ ವನ್ನು ವೀಕ್ಷಿಸಿದರು.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನರಾಗಿದ್ದು, ಶೋಕಾಚರಣೆ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ವಿಶ್ವಮಾನವ ದಿನಾಚರಣೆಯನ್ನು ಭಾನುವಾರ ಸರಳವಾಗಿ ಆಚರಿಸಲಾಯಿತು.
ಜೀವನದಲ್ಲಿ ಸೋಲು-ಗೆಲುವು ಸಾಮಾನ್ಯ. ಸೋಲೇ ಗೆಲುವಿನ ಸೋಪಾನ. ಜೀವನದ ಉನ್ನತ ಗುರಿಗಳನ್ನು ಬೆನ್ನಟ್ಟಿ ಹೊರಟಾಗ ಏಳುಬೀಳುಗಳು ಸಹಜ. ಅಂತಹ ಸವಾಲುಗಳನ್ನು ಎದುರಿಸಿದಾಗ ಮಾತ್ರ ಗಟ್ಟಿತನ ಬರಲು ಸಾಧ್ಯ