Category: ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು

ಈ ಬಾರಿ 400 ಸ್ಥಾನಗಳ ಗಡಿದಾಟುವ ಗುರಿ ನಮ್ಮದು

ಮಲೇಬೆನ್ನೂರು : ಈ ಬಾರಿ 400 ಗಡಿ ದಾಟುವ ಗುರಿಯನ್ನು ಎನ್‌ಡಿಎ ಹೊಂದಿದ್ದು, ಇದರಲ್ಲಿ ದಾವಣಗೆರೆ ಕ್ಷೇತ್ರದ ಗಾಯಿತ್ರಿ ಸಿದ್ದೇಶ್ವರ ಕೂಡಾ ಇರಬೇಕೆಂದು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ಹೇಳಿದರು.

ಸರ್ವಜನಾಂಗದ ಶಾಂತಿಯ ತೋಟ ಭಾರತವನ್ನಾಗಿಸಲು ಕಾಂಗ್ರೆಸ್‌ಗೆ ಮತ ನೀಡಿ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ 18, 7, 8 ಮತ್ತು 10ನೇ ವಾರ್ಡ್‍ಗಳಲ್ಲಿ ವ್ಯಾಪ್ತಿಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ|| ಪ್ರಭಾ ಮಲ್ಲಿಕಾ ರ್ಜುನ್ ಪರವಾಗಿ ಶಾಸಕ ಶಾಮನೂರು ಶಿವಶಂಕರಪ್ಪ ಅವರು ಭರ್ಜರಿ ರೋಡ್ ಷೋ ನಡೆಸಿದರು.

ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ

ದಾವಣಗೆರೆ ಲೋಕಸಭೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯ ಕನಸಿನಿಂದ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ ಎಂದು  ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಹೇಳಿದರು.

ಪಂಚಮಸಾಲಿ ಮೀಸಲಾತಿ ಕೇಳಲು ಕಾಂಗ್ರೆಸ್ ಸಚಿವ, ಶಾಸಕರಿಗೆ ದಿಟ್ಟತನವಿಲ್ಲ : ಯತ್ನಾಳ್‌

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಕಲ್ಪಿಸುವ ಕುರಿತ ಬೇಡಿಕೆಯನ್ನು ಆಲಿಸಲು ಸಮಯ ನೀಡಲೂ ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಲಿಲ್ಲ. ಕಾಂಗ್ರೆಸ್‌ನಲ್ಲಿರುವ ಪಂಚಮಸಾಲಿ ಜನಪ್ರತಿನಿಧಿಗಳೂ ಮುಖ್ಯಮಂತ್ರಿ ಎದುರು ದಿಟ್ಟವಾಗಿ ಮಾತನಾಡುತ್ತಿಲ್ಲ

ನಗರದಲ್ಲಿ ಇಂದು ಸೈಕಲ್ ವಿತರಣೆ

ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ಥೆಯರ ರಕ್ಷಣೆಗೆ ರಾಜ್ಯ ಸರ್ಕಾರ ಬದ್ಧವಾಗಿದೆ. ಯಾರಿಗೆ ರಕ್ಷಣೆ ಬೇಕೋ ಅವರಿಗೆಲ್ಲ ರಕ್ಷಣೆ ಕೊಡುತ್ತೇವೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಸಾಸ್ವೇಹಳ್ಳಿ ಯೋಜನೆ ತಂದಿದ್ದು ನಾನು, ಮಾಡಾಳು : ಸಿದ್ದೇಶ್ವರ

ಚನ್ನಗಿರಿ : ತಾಲ್ಲೂಕಿಗೆ ಸಾಸ್ವೇಹಳ್ಳಿ ಏತ ನೀರಾವರಿ ಯೋಜನೆ ತಂದಿದ್ದು ನಾನು ಮತ್ತು ಆಗ ಶಾಸಕರಾಗಿದ್ದ ಮಾಡಾಳು ವಿರೂಪಾಕ್ಷಪ್ಪ. ಸಿರಿಗೆರೆ ಶ್ರೀಗಳ ಸಹಕಾರದಿಂದ ನಾವು ಯೋಜನೆ ತಂದಿದ್ದು, ಇದಕ್ಕೂ ಕಾಂಗ್ರೆಸ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದರು.

ಕಾಂಗ್ರೆಸ್‌ ಪಕ್ಷದಲ್ಲಿ ಕುರುಬ ಸಮುದಾಯಕ್ಕೆ ನೀಡಿರುವ ಆದ್ಯತೆಯನ್ನು ಮರೆಯಬಾರದು

ಹೊನ್ನಾಳಿ : ಕರ್ನಾಟಕ ರಾಜ್ಯವನ್ನು ಕುರುಬ ಸಮುದಾಯದವರು ಆಳ್ವಿಕೆ ನಡೆಸುತ್ತಿದ್ದಾರೆ ಎಂಬುದನ್ನು ಮರೆಯಬಾರದು ಎಂದು ಚಿಕ್ಕಬಳ್ಳಾ ಪುರ ಶಾಸಕ ಪ್ರದೀಪ್ ಈಶ್ವರ್ ಹೇಳಿದರು.

ತ್ರಿಕೋನ ಸ್ಪರ್ಧೆಯಲ್ಲಿ ನಾನೇ ಮುಂದು : ವಿನಯ್

ಚನ್ನಗಿರಿ : ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ.ವಿನಯ್ ಕುಮಾರ್ ಅವರು ಚನ್ನಗಿರಿ ತಾಲ್ಲೂಕಿನ ಸಂತೇಬೆನ್ನೂರು ಗ್ರಾಮದಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ನೂರಾರು ಗ್ರಾಮಸ್ಥರು ವಿನಯ್ ಕುಮಾರ್ ಅವರಿಗೆ ಅದ್ಧೂರಿ ಸ್ವಾಗತ ಕೋರಿದರು. ಜನರಿಂದ ಭಾರೀ ಬೆಂಬಲ ವ್ಯಕ್ತವಾಯಿತು. 

ರೈತರ ಶ್ರೇಯೋಭಿವೃದ್ಧಿಗೆ ಪ್ರಭಾ ಗೆಲ್ಲಲಿ

ಹೊನ್ನಾಳಿ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರನ್ನು ಗೆಲ್ಲಿಸಿದರೆ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ರೈತರ ಶ್ರೇಯೋಭಿವೃದ್ಧಿಗೆ ಶ್ರಮಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಭರವಸೆ ನೀಡಿದರು.

ಅಭಿವೃದ್ಧಿಗೆ ಮತ್ತೊಂದು ಹೆಸರೇ ಮೋದಿ : ಗಾಯತ್ರಿ

ಮಾಯಕೊಂಡ : ಲೋಕಸಭಾ ಕ್ಷೇತ್ರದಲ್ಲಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಅವರ ಕಾರ್ಯ ವೈಖರಿ ಮತ್ತು ಅಭಿವೃದ್ಧಿ ನೋಡಿ ಕಾಂಗ್ರೆಸ್‌ಗೆ ನಡುಕ ಉಂಟಾಗಿದೆ. ಸಿದ್ದೇಶ್ವರ ಅವರ ದೂರದೃಷ್ಟಿ, ಸಮಾಜಮುಖಿ ಕೆಲಸ ನೋಡಿ ಜನ ಅವರನ್ನು 4 ಬಾರಿ ಸಂಸದರಾಗಿ ಆಯ್ಕೆ ಮಾಡಿದ್ದಾರೆ.

ಅಡಿಕೆ ಸಂಬಂಧಿತ ಕೈಗಾರಿಕೆಗಳು, ಸೂಳೆಕೆರೆ ಸಂರಕ್ಷಣೆಗೆ ಆದ್ಯತೆ

ಚನ್ನಗಿರಿ : ತಾಲ್ಲೂಕಿನ ವಿವಿಧ ಗ್ರಾಮ ಗಳಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಜಿ.ಬಿ. ವಿನಯ್ ಕುಮಾರ್ ಅವರು ರೋಡ್ ಶೋ ನಡೆಸಿ, ಭರ್ಜರಿ ಪ್ರಚಾರ ನಡೆಸಿದರು. 

ಮತ ಎಣಿಕೆ ಕೇಂದ್ರದ ಸಿದ್ದತೆಯ ಪರಿಶೀಲನೆ

ಮತ ಎಣಿಕೆಯು ಜೂನ್ 4 ರಂದು ಬೆಳಗ್ಗೆ 8 ಗಂಟೆಯಿಂದ ತೋಳಹುಣಸೆಯಲ್ಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು, ಇವಿಎಂ ಭದ್ರತಾ ಕೊಠಡಿ ಮತ್ತು ಎಣಿಕೆ ಕೇಂದ್ರದ ಸಿದ್ದತೆಯನ್ನು ಏಪ್ರಿಲ್ 29 ರಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ. ಪರಿಶೀಲಿಸಿದರು.

error: Content is protected !!