ಗಣಿ ಮಾಲೀಕರ ಸಮಸ್ಯೆಗಳನ್ನು ಆಲಿಸಿದ ಸಚಿವ ಎಸ್ಸೆಸ್ಸೆಂ
ರಾಜ್ಯದ ಗಣಿ ಮಾಲೀಕರುಗಳೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಭೆ ನಡೆಸಿದರು.
ರಾಜ್ಯದ ಗಣಿ ಮಾಲೀಕರುಗಳೊಂದಿಗೆ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಇಲಾಖಾ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಸಭೆ ನಡೆಸಿದರು.
ಪಾಲಿಕೆ ಅನುದಾನದಲ್ಲಿ ಆಳವಡಿಸಲಾಗುತ್ತಿರುವ ಆಧುನಿಕ ಲಾಂಡ್ರಿ ಯಂತ್ರಗಳ ಡ್ರೈಯರ್ ಮತ್ತು ಇತರೆ ಅವಶ್ಯಕ ಘಟಕಗಳನ್ನು ಅಳವಡಿಸುವ ಕಾಮಗಾರಿಯನ್ನು ನಗರ ಯೋಜನೆ ಹಾಗೂ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಸವಿತಾ ಹುಲ್ಲುಮನೆ ಗಣೇಶ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ವೈದ್ಯರಲ್ಲೂ ಹಾಸ್ಯ ಪ್ರಜ್ಞೆ ಬೇಕು. ವೈದ್ಯರು ನೀಡುವ ಔಷಧಕ್ಕಿಂತ ಅವರ ಭರವಸೆಯ ಮಾತುಗಳೇ ರೋಗ ನಿವಾರಣೆಯಲ್ಲಿ ಹೆಚ್ಚು ಕೆಲಸ ಮಾಡಲಿವೆ ಎಂದು ಹಿರಿಯ ವಾಗ್ಮಿ ಹೆಚ್.ಬಿ. ಮಂಜುನಾಥ್ ಹೇಳಿದರು.
ದಾವಣಗೆರೆಯನ್ನು ಕಸ ಮುಕ್ತ ನಗರವನ್ನಾಗಿಸುವ ಸಂಬಂಧ ಕ್ರಿಯಾಯೋಜನೆ ತಯಾರಿಸು ವಂತೆ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಮಹಾನಗರ ಪಾಲಿಕೆಗೆ ನಿರ್ದೇಶನ ನೀಡಿದರು.
ಹಳೇ ಕುಂದುವಾಡ-ಬನ್ನಿಕೋಡು ಮಾರ್ಗಕ್ಕೆ ನೇರ ಬ್ರಿಡ್ಜ್ ನಿರ್ಮಿಸುವಂತೆ ಆಗ್ರಹಿಸಿ ಹಳೇ ಕುಂದುವಾಡ ಗ್ರಾಮಸ್ಥರು, ಅಲ್ಲಿನ ರಾಷ್ಟ್ರೀಯ ಹೆದ್ದಾರಿ ಬಳಿ ರಸ್ತೆ ಬಂದ್‌ಗೊಳಿಸಿ ಗುರುವಾರ ಪ್ರತಿಭಟನೆ ನಡೆಸಿದರು.
ನಗರದ ಬಾಪೂಜಿ ಎಂಬಿಎ ಮೈದಾನದಲ್ಲಿ ಕಳೆದ ವಾರ ನಡೆದ ರಾಜ್ಯಮಟ್ಟದ ಯುವಜನ ಮಹೋತ್ಸವದಲ್ಲಿ ಲೋಕಸಭಾ ಸದಸ್ಯರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಅವರ ಪರಿಕಲ್ಪನೆಯಡಿ ಮೂಡಿಬಂದ ಸಂವಿಧಾನದ ಅರಿವಿನ ಕೆವೈಸಿ ಅಭಿಯಾನ ಯುವಜನತೆ ಹಾಗೂ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಮಹಿಳೆಯರನ್ನು ಆರ್ಥಿಕವಾಗಿ ಸಬಲೀಕರಣಗೊಳಿಸಲು ಮಹಿಳಾ ಸ್ವ ಉದ್ಯೋಗ ತರಬೇತಿ ಕೇಂದ್ರಗಳ ಅವಶ್ಯವಿದೆ ಎಂದು ಜವಳಿ ಉದ್ಯಮಿ ಬಿ.ಸಿ.ಉಮಾಪತಿ ಹೇಳಿದರು.
ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶಾಲಾ ಹಂತದಲ್ಲೇ ಮಕ್ಕಳಿಗೆ ಉತ್ತಮ ಸಂಸ್ಕಾರದ ಬುನಾದಿ ಹಾಕಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮಹಾವೀರ ಎಂ. ಕರೆಣ್ಣನವರ್ ಹೇಳಿದರು.
ಮಲೇಬೆನ್ನೂರು : ರಾಜನಹಳ್ಳಿ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಬರುವ ಫೆಬ್ರವರಿ 8 ಮತ್ತು 9 ರಂದು 7 ನೇ ವರ್ಷದ ವಾಲ್ಮೀಕಿ ಜಾತ್ರೆಯನ್ನು ಬಹಳ ವಿಶೇಷವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಜಾತ್ರಾ ಸಮಿತಿ ಅಧ್ಯಕ್ಷರೂ ಆದ ಜಗಳೂರಿನ ಶಾಸಕ ಬಿ.ದೇವೇಂದ್ರಪ್ಪ ತಿಳಿಸಿದರು.
ಜಗಳೂರು : ಇದೇ ಜ.11 ಮತ್ತು 12 ರಂದು ಪಟ್ಟಣದಲ್ಲಿ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ 13 ರಂದು ನಡೆಯಲಿರುವ `ಜಗಳೂರು ಜಲೋತ್ಸವ’ ಶಾಸಕ ಬಿ.ದೇವೇಂದ್ರಪ್ಪ ಅವರ ಪ್ರಚಾರದ ಉತ್ಸವವಾಗಿದೆ
ಜಿಲ್ಲಾ ಸೌಹಾರ್ದ ಸಹಕಾರಿ ಗಳ ಒಕ್ಕೂಟದ ಅಧ್ಯಕ್ಷರಾಗಿ ಮಾಜಿ ಮೇಯರ್ ಎಸ್.ಟಿ. ವೀರೇಶ್ ಹಾಗೂ ಉಪಾಧ್ಯಕ್ಷರಾಗಿ ರುದ್ರೇಗೌಡರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ನಗರದ ಶಿವಕುಮಾರ ಸ್ವಾಮಿ ಬಡಾವಣೆಯ 1ನೇ ಹಂತದ 2ನೇ ಮುಖ್ಯ ರಸ್ತೆಯನ್ನು ಹೆೋಸದಾಗಿ ನಿರ್ಮಿಸುವಾಗ ಕಳಪೆಯಾಗಿದೆ ಎಂಬ ದೂರಿನ ಹಿನ್ನಲೆಯಲ್ಲಿ ಮಹಾಪೌರ ಕೆ. ಚಮನ್ ಸಾಬ್ ಅವರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.