Category: ಪ್ರಮುಖ ಸುದ್ದಿಗಳು

Home ಪ್ರಮುಖ ಸುದ್ದಿಗಳು

ಪಡಿತರ ಧಾನ್ಯ ತೂಕದ ವ್ಯತ್ಯಾಸ ಪರಿಶೀಲಿಸಿ

ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಧಾನ್ಯಗಳ ವಿತರಣೆಯಲ್ಲಿ ಆಗುವ ತೂಕದ ವ್ಯತ್ಯಾಸ, ಆಹಾರ ಧಾನ್ಯಗಳ ಗುಣಮಟ್ಟ ಪರಿಶೀಲನೆ ಮಾಡುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶಾಮನೂರು ಟಿ. ಬಸವರಾಜ್ ಅಧಿಕಾರಿಗಳಿಗೆ ಸೂಚಿಸಿದರು.

ಉತ್ತರದ ಬಾಷಾ, ಸಂಸ್ಕೃತಿ ಬಲವಂತದ ಹೇರಿಕೆ ವಿಷಾದನೀಯ

ಉತ್ತರ ಭಾರತದ ಸಂಸ್ಕೃತಿ ಮತ್ತು ಭಾಷೆಯನ್ನು ದಕ್ಷಿಣ ರಾಜ್ಯಗಳ ಮೇಲೆ ಬಲವಂತವಾಗಿ ಹೇರುತ್ತಿರುವುದು ವಿಷಾದನೀಯ ಸಂಗತಿ ಎಂದು ನಾಡಿನ ಹಿರಿಯ ಸಾಹಿತಿ ಕುಂ.ವೀರಭದ್ರಪ್ಪ ಅಭಿಪ್ರಾಯಪಟ್ಟರು.

ಸೂಳೆಕೆರೆ ಹಳ್ಳಕ್ಕೆ ಸೇತುವೆ ನಿರ್ಮಿಸಲು ಆಗ್ರಹ

ಹರಿಹರ : ತಾಲ್ಲೂಕಿನ ಬೆಳ್ಳೂಡಿ-ರಾಮತೀರ್ಥ ಗ್ರಾಮಗಳ ನಡುವಿನ ಸೂಳೆಕೆರೆ ಹಳ್ಳಕ್ಕೆ ಹೊಸ ಸೇತುವೆ ನಿರ್ಮಿಸಲು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ) ತಾಲ್ಲೂಕು ಘಟಕದಿಂದ ಗುರುವಾರ ಹಳ್ಳದ ನೀರಲ್ಲಿ ನಿಂತು ವಿಶಿಷ್ಟವಾಗಿ ಪ್ರತಿಭಟಿಸಿದರು.

ಸಸಿಗಳ ಪೋಷಣೆ

ದಾವಣಗೆರೆ: ಟಿವಿ ಸ್ಟೇಷನ್ ಬಳಿಯ ಅರಣ್ಯ ಇಲಾಖೆ ಆವರಣದಲ್ಲಿ ಸಸಿಗಳ ಪೋಷಣೆಯಲ್ಲಿ ತೊಡಗಿರುವ ಸಿಬ್ಬಂದಿಗಳು.

ಕಾನೂನು ಬಾಹಿರ ಅಂಬಿಕಾ ಬಡಾವಣೆಯ ನಕ್ಷೆ ರದ್ದು

ಸರ್ಕಾರದ ದೂಡಾ ನಿಯಮ ಉಲ್ಲಂಘಿಸಿ, ನಗರದ ಹೊರವಲಯದ ಆವರಗೆರೆಯಲ್ಲಿ ನಿರ್ಮಾಣಗೊಂಡ ಅಂಬಿಕಾ ಬಡಾವಣೆಯ ನಕ್ಷೆಯನ್ನು ರದ್ದು ಪಡಿಸಲಾಗಿದೆ ಎಂದು ದೂಡಾ ಅಧ್ಯಕ್ಷ ದಿನೇಶ್‌ ಕೆ. ಶೆಟ್ಟಿ ತಿಳಿಸಿದರು.

ವೀರಶೈವ ಧರ್ಮದ ಗುರಿ ಮನುಕುಲದ ಉದ್ಧಾರ

ಯಾವುದೇ ಜಾತಿ, ಮತ, ಪಂಥ, ವರ್ಣ, ವರ್ಗ, ಲಿಂಗಬೇಧವಿಲ್ಲದೇ ಭೂಮಿಯಲ್ಲಿ ಜನ್ಮ ತಾಳಿದ ಸಮಸ್ತ ಮನುಕುಲದ ಉದ್ಧಾರವೇ ವೀರಶೈವ ಲಿಂಗಾಯತ ಧರ್ಮದ ಪ್ರಮುಖ ಗುರಿಯಾಗಿದೆ ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮೀಜಿ ಹೇಳಿದರು.

ಭದ್ರಾ ಡ್ಯಾಂ ರಕ್ಷಣೆಗಾಗಿ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ಭದ್ರಾ ಡ್ಯಾಂ ಬಫರ್ ಜೋನ್ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ನಿರ್ಮಾಣ ವಿರೋಧಿಸಿ ಜಿಲ್ಲಾಧಿಕಾರಿ ಯವರಿಗೆ ಜಿಲ್ಲಾ ಬಿಜೆಪಿ ರೈತ ಮೋರ್ಚಾದಿಂದ ಮನವಿ ಪತ್ರ ಸಲ್ಲಿಸಲಾಯಿತು.

ಮನೆ ಮನೆಗೆ ಇ-ಸ್ವತ್ತು ಅಭಿಯಾನ ನಡೆಸಿ

ಗ್ರಾಮಸ್ಥರು ಎದುರಿಸುತ್ತಿರುವ ಇ-ಸ್ವತ್ತು ಸಮಸ್ಯೆ ಬಗೆಹರಿಸಲು ಜನವರಿ ಅಂತ್ಯದ ಒಳಗೆ ಮನೆ ಮನೆಗೆ ಇ- ಸ್ವತ್ತು ಅಭಿಯಾನ ನಡೆಸಬೇಕು ಎಂದು ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರ ಅಧ್ಯಕ್ಷತೆಯಲ್ಲಿ ನಡೆದ ದಾವಣಗೆರೆ ತಾಲ್ಲೂಕು ಪಿಡಿಒ ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಲಾಗಿದೆ.

ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ; ಹೆಚ್.ಎಸ್.ಶಿವಶಂಕರ್ ಗುಂಪಿಗೆ ಭರ್ಜರಿ ಜಯ

ದಾವಣಗೆರೆ ತಾಲ್ಲೂಕು ದೊಡ್ಡಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ನಿನ್ನೆ ನಡೆದ ಚುನಾವಣೆಯಲ್ಲಿ ಕಾರ್ಖಾನೆಯ ಹಾಲಿ ಅಧ್ಯಕ್ಷರೂ ಆಗಿರುವ ಮಾಜಿ ಶಾಸಕ ಹೆಚ್.ಎಸ್. ಶಿವಶಂಕರ್ ಅವರ ನೇತೃತ್ವದ ಗುಂಪಿಗೆ ಭರ್ಜರಿ ಜಯ ಲಭಿಸಿದೆ.

ಬೇಕು ಎಂಬುದು ನೋವುಂಟು ಮಾಡಿದರೆ, ಸಾಕು ಎಂಬುದು ನಲಿವುಂಟು ಮಾಡುತ್ತದೆ

ಲಿಂ. ಶ್ರೀಶೈಲ ಜಗದ್ಗುರು ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಭವರೋಗ ವೈದ್ಯರಾಗಿ ಸಮಾಜಕ್ಕೆ ನೀಡಿದ ಕೊಡುಗೆ ಅನನ್ಯ. ಅವರೊಬ್ಬ ಸಮನ್ವಯ ಮೂರ್ತಿಗಳಾಗಿದ್ದರು. ಅಧಾತ್ಮ, ಶಿಕ್ಷಣ ಕ್ಷೇತ್ರದಲ್ಲಿ ಅದ್ಭುತ ಕ್ರಾಂತಿ ಮಾಡಿದವರಾಗಿದ್ದಾರೆ

ಶಿಗ್ಗಾಂವಿ- ಸವಣೂರು ಉಪ ಚುನಾವಣೆ : ಎಸ್ಸೆಸ್ಸೆಂ ಪ್ರಚಾರ

ಹಾವೇರಿ : ಶಿಗ್ಗಾಂವಿ-ಸವಣೂರು ವಿಧಾನಸಭೆಯ ಉಪ‌ ಚುನಾ ವಣೆ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು  ಕಾಂಗ್ರೆಸ್ ಅಭ್ಯರ್ಥಿ ಪರ ಮತಯಾಚನೆ ಮಾಡಿದರು.

error: Content is protected !!