Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಗುಂಪುಗಾರಿಕೆ-ಪಕ್ಷ ವಿರೋಧಿ ಚಟುವಟಿಕೆ ವಿರುದ್ಧ ಉಚ್ಛಾಟನೆಗೆ ವಿಜಯೇಂದ್ರ ಮುಂದಾಗಲಿ

ಹೊನ್ನಾಳಿ : ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲ್ಲೂಕು ಬಿಜೆಪಿ ಮಾಜಿ ಅಧ್ಯಕ್ಷ ಎ.ಬಿ.ಹನುಮಂತಪ್ಪ ಬಣದಿಂದ ಲೋಕಸಭಾ ಚುನಾವಣಾ ಸೋಲಿನ ಆತ್ಮಾವಲೋಕನದ ಬಗ್ಗೆ ಸಭೆ ನಡೆಯಿತು.

ಕೇಳುಗರ ಮನಗೆದ್ದ `ಸಿನಿ ಹನಿ’ ಗಾನ

ನಗರದ ಕುವೆಂಪು ಕನ್ನಡ ಭವನದಲ್ಲಿ ಸ್ವರತಂತ್ರ ಗಾಯಕರ ತಂಡದ  ವತಿಯಿಂದ `ನೂರೊಂದು ನೆನಪು ಹಾಡಾಗಿ ಬಂತು…….’ ಶೀರ್ಷಿಕೆಯಡಿ ಏರ್ಪಡಿಸಿದ್ದ `ಸಿನಿಹನಿ’ ಕಾರ್ಯಕ್ರಮ ಕೇಳುಗರ ಮನಗೆದ್ದಿತು.

ಹೊಳೆಸಿರಿಗೆರೆ : ಮಲೇರಿಯಾ ವಿರೋಧಿ ಮಾಸಾಚರಣೆ

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಶ್ರೀ ಮಾಗೋಡ ಹಾಲಪ್ಪ ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಲೇರಿಯಾ ವಿರೋಧಿ ಮಾಸಾಚರಣೆ  ಕಾರ್ಯಕ್ರಮವನ್ನು ವೈದ್ಯಾಧಿಕಾರಿ ಡಾ.ಚೇತನ್ ಉದ್ಘಾಟಿಸಿದರು. 

ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದಿಂದ ಶಸ್ತ್ರಚಿಕಿತ್ಸೆಗೆ ಧನಸಹಾಯ

ಜಿಲ್ಲಾ ಅಟಲ್ ಬಿಹಾರಿ ವಾಜಪೇಯಿ ಅಭಿಮಾನಿ ಬಳಗದ ವತಿಯಿಂದ ಅನಾರೋಗ್ಯದಿಂದ ಬಳುತ್ತಿರುವ ಶ್ರೀಮತಿ ಅಕ್ಷತಾ ಮತ್ತು  ಮಲ್ಲೇಶ್ ಕಡೇಮನಿ ಅವರುಗಳಿಗೆ ಶಸ್ತ್ರಚಿಕಿತ್ಸೆಗೆ ಧನಸಹಾಯ ಮಾಡಲಾಯಿತು.

ಸಿಲಿಂಡರ್ ಸ್ಫೋಟ : ಮೇಯರ್ ಭೇಟಿ

ಸ್ಥಳೀಯ ರಾಮನಗರದ ಎಸ್‍ಒಜಿ ಕಾಲೋನಿ ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿದ ಮನೆಗೆ ಮಹಾನಗರ ಪಾಲಿಕೆಯ ಮೇಯರ್ ವಿನಾಯಕ ಪೈಲ್ವಾನ್, ಸದಸ್ಯರಾದ ಗಡಿಗುಡಾಳ್  ಮಂಜುನಾಥ್, ಪಾಮೇನಹಳ್ಳಿ ನಾಗರಾಜ್ ಭೇಟಿ‌ ನೀಡಿದ್ದರು. 

ವೈದ್ಯ ಸಮೂಹಕ್ಕೆ ನಾಗರಿಕ ಸಮಾಜ ಋಣಿ

ಗುಣಪಡಿಸುವ ಕೈಗಳ, ಕಾಳಜಿಯುಳ್ಳ ಹೃದಯಗಳ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುವ ವೈದ್ಯ ಸಮೂಹಕ್ಕೆ ಸಮಾಜ ಎಂದೆಂದಿಗೂ ಋಣಿಯಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀಮತಿ ರಾಜೇಶ್ವರಿ ಎನ್. ಹೆಗಡೆ ನುಡಿದರು. 

ಪಾಲಿಕೆ ನಿವೃತ್ತ ನೌಕರರಿಗೆ ಸನ್ಮಾನ

ಮಹಾನಗರ ಪಾಲಿಕೆಯಲ್ಲಿ ನೌಕರರಾಗಿ 30 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೊನ್ನೆ ನಿವೃತ್ತರಾಗಿರುವ ಹುಲುಗಮ್ಮ ಸೋಮಲಾಪುರ, ಸರೋಜಮ್ಮ ರಂಗಪ್ಪ, ಬಸವರಾಜ ಅವರನ್ನು ಪಾಲಿಕೆ ಸಭಾಂಗಣದಲ್ಲಿ ಮಹಾನಗರ ಪಾಲಿಕೆ ವತಿಯಿಂದ ಸನ್ಮಾನಿಸಲಾಯಿತು.

ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿವಿ ಸಂಕಲ್ಪ

ಮಲೇಬೆನ್ನೂರು : ಹೊಸ ಸಮಾಜ ನಿರ್ಮಾಣಕ್ಕಾಗಿ ಈಶ್ವರೀಯ ವಿಶ್ವವಿದ್ಯಾಲಯ ಕಾರ್ಯ ನಿರ್ವಹಿಸುತ್ತಿದ್ದು, ಅಧ್ಯಾತ್ಮಿಕ ಹಾಗೂ ನೈತಿಕ ಶಿಕ್ಷಣದ ಮೂಲಕ ಜನರಲ್ಲಿ ಬದಲಾ ವಣೆಗೆ ಪ್ರಯತ್ನಿಸುತ್ತಿದೆ

ನವಚೇತನ ಕಿಡ್ಸ್‌ನಲ್ಲಿ ಕಾಂಪೋಸ್ಟ್ ಗೊಬ್ಬರ ತಯಾರಿಸುವ ಕಾರ್ಯಾಗಾರ

ನಗರದ ಶಿವಕುಮಾರ ಸ್ವಾಮಿ ಬಡಾವಣೆಯ ನವಚೇತನ ಕಿಡ್ಸ್ ಪ್ಲೇ ಹೋಂನಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಅಡುಗೆ ಮನೆಯ ಹಸಿ ತ್ಯಾಜ್ಯವನ್ನು ಕಾಂಪೋಸ್ಟ್‌ ಗೊಬ್ಬರವನ್ನಾಗಿ ಪರಿವರ್ತಿಸುವ ಕಾರ್ಯಾಗಾರವನ್ನು ನಡೆಸಲಾಯಿತು. 

ಜಗಳೂರು : ಅಣಬೂರಿನ ಜಯಣ್ಣ ನಿವೃತ್ತಿ

ಜಗಳೂರು : ಸುದೀರ್ಘ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾಗುತ್ತಿರುವ ಎ.ಎಂ.ಜಯ್ಯಣ್ಣ ಅವರ ಮುಂದಿನ ಜೀವನ ಸುಖವಾಗಿರಲಿ ಎಂದು ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮನೋಹರ್ ರೆಡ್ಡಿ ಹೇಳಿದರು.

ಕೆ.ಎನ್.ಹಳ್ಳಿ ಗ್ರಾ.ಪಂ ಅಧ್ಯಕ್ಷರಾಗಿ ಗಿರಿಜಮ್ಮ

ಮಲೇಬೆನ್ನೂರು : ಕೆ.ಎನ್.ಹಳ್ಳಿ ಗ್ರಾಮ ಪಂಚಾಯ್ತಿ ನೂತನ ಅಧ್ಯಕ್ಷರಾಗಿ ಶ್ರೀಮತಿ ಗಿರಿಜಮ್ಮ ಕರಿಯಪ್ಪ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಆವಿರೋಧವಾಗಿ ಆಯ್ಕೆಯಾಗಿದ್ದಾರೆ. ಶ್ರೀಮತಿ ಮಂಜಮ್ಮ ಶೇಖರಪ್ಪ ಅವರ ರಾಜೀನಾಮೆಯಿಂದಾಗಿ ಅಧ್ಯಕ್ಷ ಸ್ಥಾನ ತೆರವಾಗಿತ್ತು.

ಉಕ್ಕಡಗಾತ್ರಿ ಗ್ರಾ.ಪಂ. ಉಪಾಧ್ಯಕ್ಷರಾಗಿ ಗೀತಾ ಸಂಜೀವ ರೆಡ್ಡಿ

ಮಲೇಬೆನ್ನೂರು : ಉಕ್ಕಡಗಾತ್ರಿ ಗ್ರಾಮ ಪಂಚಾಯ್ತಿ ನೂತನ ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾ ಸಂಜೀವ ರೆಡ್ಡಿ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ತಾ.ಪಂ ಇಓ ರಾಮಕೃಷ್ಣ ಅವರು ಚುನಾವಣಾಧಿಕಾರಿಯಾಗಿದ್ದರು.

error: Content is protected !!