Category: ಸುದ್ದಿ ವೈವಿಧ್ಯ

Home ಸುದ್ದಿ ವೈವಿಧ್ಯ

ಕಬಡ್ಡಿ ಜಿಲ್ಲಾ ತಂಡಕ್ಕೆ ಸಮವಸ್ತ್ರ ವಿತರಣೆ, ಬೀಳ್ಕೊಡುಗೆ

ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು ಕೋಲಾರದಲ್ಲಿ ನಡೆಯುವ ಕರ್ನಾಟಕ ಕಬಡ್ಡಿ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸುವ ಬಾಲಕ ಮತ್ತು ಬಾಲಕಿಯರ ತಂಡದ ಸದಸ್ಯರಿಗೆ ಸಮವಸ್ತ್ರ ವಿತರಿಸಿ ಬೀಳ್ಕೊಡುಗೆ ನೀಡಲಾಯಿತು.

ಶಿಕ್ಷಣದಿಂದ ಮಾತ್ರ ಶೋಷಿತ ಸಮುದಾಯಗಳ ಮುನ್ನಲೆ

ಜಗಳೂರು : ಶಿಕ್ಷಣದಿಂದ ಮಾತ್ರ ಶೋಷಿತ ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಸಾಧ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಆಯೋಜಿಸಲಾಗಿದ್ದ 207ನೇ ಭೀಮಾ ಕೊರೆಗಾಂವ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಗಳೂರಿನಲ್ಲಿ ಇಂದು ಜೆ.ಎಂ. ಇಮಾಂ ಸ್ಮಾರಕ ರಾಜ್ಯ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ ಸಮಾರಂಭ

ಜೆ.ಎಂ.ಇಮಾಂ ಟ್ರಸ್ಟ್ ಜಗಳೂರು, ಜೆ.ಎಂ. ಇಮಾಂ ಸ್ಮಾರಕ ಶಾಲೆ ಇವರ ಸಂಯುಕ್ತಾಶ್ರಯದಲ್ಲಿ ಜೆ.ಎಂ.ಇಮಾಂ ಸ್ಮಾರಕ 6 ನೇ ವರ್ಷದ ರಾಜ್ಯ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ನಾಳೆ ದಿನಾಂಕ 4 ರ ಶನಿವಾರ ಸಂಜೆ 4 ಗಂಟೆಗೆ ಜೆ.ಎಂ. ಇಮಾಂ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ

ಹೊಳೆಸಿರಿಗೆರೆ : ಭದ್ರಾ ಪಿಎಸಿಎಸ್‌ಗೆ ಅವಿರೋಧ ಆಯ್ಕೆ

ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾಮದ ಭದ್ರಾ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಸಿ.ದೇವೇಂದ್ರಪ್ಪ ಮತ್ತು ಉಪಾಧ್ಯಕ್ಷರಾಗಿ ಮಾಗೋಡ ಚಂದ್ರಪ್ಪ ಅವರು ಶುಕ್ರವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಹರಪನಹಳ್ಳಿ : ಐಗೋಳ ಚಿದಾನಂದ ಅವರಿಗೆ ಸನ್ಮಾನ

ಹರಪನಹಳ್ಳಿ : ಹಡಗಲಿ ತಾಲ್ಲೂಕಿನ ಸಹಕಾರ ಸಂಘದ   ನಿರ್ದೇಶಕರಾಗಿ ಆಯ್ಕೆಯಾಗಿರುವ ನಗರ ಮನೋರಂಜನಾ ಕೇಂದ್ರದ ಅಧ್ಯಕ್ಷ ಐಗೋಳ ಚಿದಾನಂದ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು. 

ಯುವಜನೋತ್ಸವ, ಕೆಎಸ್‍ಆರ್‍ಟಿಸಿಯಿಂದ ಕಾರ್ಯಕ್ರಮ ಸ್ಥಳಗಳಿಗೆ ಬಸ್ ಸೌಕರ್ಯ

ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯಿಂದ ನಾಡಿದ್ದು ದಿನಾಂಕ 5 ಮತ್ತು 6 ರಂದು ರಾಜ್ಯ ಮಟ್ಟದ ಯುವಜನೋತ್ಸವವನ್ನು ಏರ್ಪಡಿಸಲಾಗಿದೆ.  

ವಿದ್ಯೆಗಿಂತ ದೊಡ್ಡ ಆಸ್ತಿ ಮತ್ತೊಂದಿಲ್ಲ

ಮಲೇಬೆನ್ನೂರು : ಪ್ರಸ್ತುತ ದಿನಗಳಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಸಿಗುತ್ತಿದ್ದು, ವಿದ್ಯೆಗಿಂತ ದೊಡ್ಡ ಆಸ್ತಿ ಮತ್ತೊಂದಿಲ್ಲ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಥಾನ ಸಮಿತಿಯ ಹರಿಹರ ತಾಲ್ಲೂಕು ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್ ಹೇಳಿದರು.

ದಾವಣಗೆರೆಯಲ್ಲಿ ನಾಳಿನ ಕನಕ ಜಯಂತ್ಯೋತ್ಸವಕ್ಕೆ ಹರಿಹರದಿಂದ 10 ಸಾವಿರ ಜನ : ಎಸ್.ರಾಮಪ್ಪ

ಹರಿಹರ : ಜಿಲ್ಲಾ ಕುರುಬ ಸಮಾಜ ಹಾಗೂ ಸಿದ್ದರಾಮಯ್ಯನವರ ಅಭಿಮಾನಿ ಬಳಗದಿಂದ ನಾಡಿದ್ದು ದಿನಾಂಕ 5 ರ ಭಾನುವಾರ ದಾವಣಗೆರೆ  ಹೈಸ್ಕೂಲ್ ಮೈದಾನದಲ್ಲಿ ಜಿಲ್ಲಾ ಮಟ್ಟದ 537ನೇ ಕನಕದಾಸರ ಜಯಂತ್ಯೋತ್ಸವ  ಆಯೋಜಿಸಲಾಗಿದೆ.

ಶಿವ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾಗಿ ಎಂ.ಬಿ. ಸಂಗಮೇಶ್ವರಗೌಡರು

ಸ್ಥಳೀಯ ಪ್ರತಿಷ್ಠಿತ ಸಹಕಾರಿ ಬ್ಯಾಂಕುಗಳಲ್ಲೊಂದಾದ ಶಿವ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿಯ ಹಾಲಿ ಅಧ್ಯಕ್ಷ ಮಾಗನೂರು ಸಂಗಮೇಶ್ವರ ಗೌಡ್ರು ಅಧ್ಯಕ್ಷರಾಗಿ ಮತ್ತು ಹಾಲಿ ಉಪಾಧ್ಯಕ್ಷ ಐಗೂರು ಸಿ. ಚಂದ್ರಶೇಖರ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರೀತಿ, ಭಕ್ತಿ, ಗೌರವಗಳಿಂದ ಮಾತ್ರ ಶಾಂತಿ, ಸಾಮರಸ್ಯದ ಬದುಕು ಸಾಧ್ಯ

ಮಲೇಬೆನ್ನೂರು : ಪರಸ್ಪರ ಪ್ರೀತಿ, ಭಕ್ತಿ, ಗೌರವದಿಂದ ಮಾತ್ರ ಶಾಂತಿ, ಸಾಮರಸ್ಯದ ಬದುಕು ಸಾಧ್ಯವಾಗುತ್ತದೆ. ಅಂತಹ ಪ್ರೀತಿ, ಭಕ್ತಿ, ಗೌರವಗಳನ್ನು ನಮಗೆ ಮಠ-ಮಂದಿರಗಳು ಮೊದಲಿನಿಂದಲೂ ಕಲಿಸುತ್ತಾ ಬಂದಿವೆ

error: Content is protected !!