Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ನಗರದಲ್ಲಿ ಇಂದು ವಿಶ್ವ ಕ್ಷಯರೋಗ ದಿನಾಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ  ನಾಳೆ ದಿನಾಂಕ 24ರ ಸೋಮವಾರ ಬೆಳಿಗ್ಗೆ 10.30ಕ್ಕೆ ಕುವೆಂಪು ಕನ್ನಡ ಭವನದಲ್ಲಿ ವಿಶ್ವ ಕ್ಷಯರೋಗ ದಿನಾಚರಣೆ ಆಚರಿಸಲಾಗುತ್ತಿದೆ.

ಮೇ 7ರಿಂದ ಅಂತರ ರಾಷ್ಟ್ರೀಯ ಕನ್ನಡ ಸಮ್ಮೇಳನ

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಹಾಗೂ ವಿಶ್ವ ಕನ್ನಡಿಗರ ಟ್ರಸ್ಟ್ ವತಿಯಿಂದ ನಗರದಲ್ಲಿ ಬರುವ ಮೇ 7ರಿಂದ 12 ರವರೆಗೆ 6 ದಿನಗಳ ಕಾಲ ಅಂತರರಾಷ್ಟ್ರೀಯ ಕನ್ನಡ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದ್ದಾರೆ.

ಕರ್ನಾಟಕ ಕ್ರೀಡಾ ಪ್ರಾಧಿಕಾರ : ಅರ್ಜಿ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ 14 ಹಿರಿಯ ಕ್ರೀಡಾ ವಸತಿ ನಿಲಯದ ಕ್ರೀಡಾ ಪಟುಗಳಿಗೆ ಫಿಟ್ನೆಸ್ ತರಬೇತಿ ನೀಡುವ ಸಲುವಾಗಿ 14 ಫಿಟ್ನೆಸ್ ತರಬೇತುದಾರರ ಸೇವೆ ಪಡೆಯಲು   ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ನಗರದಲ್ಲಿ ನಾಳೆ ಉದ್ಯೋಗ ಮೇಳ

ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ನಾಡಿದ್ದು ದಿನಾಂಕ 25 ರ ಮಂಗಳವಾರ ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾಡಳಿತ ಭವನದದಲ್ಲಿರುವ ಉದ್ಯೋಗ ವಿನಿ ಮಯ ಕೇಂದ್ರದಲ್ಲಿ `ಉದ್ಯೋಗ ಮೇಳ’ ನಡೆಯ ಲಿದೆ.

ನಗರದ ಬಿಐಇಟಿಯಲ್ಲಿ ಇಂದು `ಮಂಥನ-2025′

`ಮಂಥನ-2025′ ಕಾರ್ಯಕ್ರಮವು ಇಂದು ಬೆಳಿಗ್ಗೆ   10.30ಕ್ಕೆ  ಬಿಐಇಟಿ ಕಾಲೇಜಿನ ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ್‌ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಲಿದೆ.

ಅಂತರ್ಜಾಲ ಕವಿಗೋಷ್ಠಿಗೆ ಆಹ್ವಾನ

ಬೆಳಗಾವಿ ಕಸ್ತೂರಿ ಸಿರಿಗನ್ನಡ ವೇದಿಕೆ ವತಿಯಿಂದ ಅಂತರರಾಷ್ಟ್ರೀಯ ಮಟ್ಟದ ಅಂತರ್ಜಾಲ ಕವಿಗೋಷ್ಠಿಯನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಎಂದು ವೇದಿಕೆಯ ಗೌರವ ಸಲಹೆಗಾರ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಲಗೇರಿ ಬನಶಂಕರಿ ಉತ್ಸವ

ರಾಣೇಬೆನ್ನೂರು : ತಾಲ್ಲೂಕಿನ ಹಲಗೇರಿ ಗ್ರಾಮದ ಶ್ರೀ ಬನಶಂಕರಿದೇವಿ ಉತ್ಸವವು ಮಾ.31 ಹಾಗೂ ಏ.1ರಂದು ನಡೆಯಲಿದೆ ಎಂದು ದೇವಸ್ಥಾನ ಕಮಿಟಿ ತಿಳಿಸಿದೆ.

ಮಲೇಬೆನ್ನೂರಿನಲ್ಲಿಂದು ರೈತರ ಪ್ರತಿಭಟನೆ

ಕೋಡಿಹಳ್ಳಿ, ಗಂಗನರಸಿ, ಗುತ್ತೂರು, ಅಮರಾವತಿ ಸೇರಿದಂತೆ ಸುತ್ತ ಮುತ್ತಲಿನ ಗ್ರಾಮಕ್ಕೆ ಚಾನಲ್‌ ಮೂಲಕ ನೀರು ಬರದೇ ಇರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಮಧ್ಯಾಹ್ನ 12ಕ್ಕೆ ಮಲೇಬೆನ್ನೂರಿನ ನೀರಾವರಿ ಇಲಾಖೆಯ ಮುಂಭಾಗ ಪ್ರತಿಭಟನೆ ನಡೆಯಲಿದೆ

ಇಂದು ರಾಣೇಬೆನ್ನೂರು ಬಂದ್ ಇಲ್ಲ

ಕೆಎಸ್ಆರ್‌ಟಿಸಿ ಬಸ್ ನಿರ್ವಾಹಕನಿಗೆ ಮಸಿ ಬಳೆದು, ಹಲ್ಲೆ ಮಾಡಿರುವುದನ್ನು ಖಂಡಿಸಿ ವಾಟಾಳ್‌ ನಾಗರಾಜ್ ಅವರು ಇಂದು ಕರೆದಿರುವ ಕರ್ನಾಟಕ ಬಂದ್‌ಗೆ ಬೆಂಬಲಿಸಿ ಪ್ರತಿಭಟನಾ ಮೆರವಣಿಗೆ ನಡೆಸಿ ಮನವಿ ಅರ್ಪಿಸಲಾಗುವುದು ಎಂದು ರೈತ ಸಂಘ ಹಾಗೂ ಕನ್ನಡ ಪರ ಸಂಘಟನೆಗಳ ನಿರ್ಣಯವನ್ನು  ರವೀಂದ್ರಗೌಡ ಪಾಟೀಲ ತಿಳಿಸಿದ್ದಾರೆ.

error: Content is protected !!