ನಗರದಲ್ಲಿ ಇಂದು ರಾಜ್ಯಮಟ್ಟದ ಅಲೆಮಾರಿ, ಅರೆ ಅಲೆಮಾರಿ ಜನಾಂಗಗಳ ಕಲೋತ್ಸವ
ಕರ್ನಾಟಕ ರಾಜ್ಯ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ಒಕ್ಕೂಟದಿಂದ ನಾಳೆ ದಿನಾಂಕ 19 ರ ಗುರುವಾರ ಸಂಜೆ 5.30 ಕ್ಕೆ ನಗರದ ಕುವೆಂಪು ಕನ್ನಡ ಭವನದಲ್ಲಿ ರಾಜ್ಯಮಟ್ಟದ ಅಲೆಮಾರಿ ಮತ್ತು ಅರೆ ಅಲೆಮಾರಿ ಸಾಹಿತ್ಯ, ಸಾಂಸ್ಕೃತಿಕ ಕಲೋತ್ಸವ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ