Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಇಂದು ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಪ್ರತಿಭಟನೆ

ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಸಂಘ (ಹೆಚ್‌ಕೆಆರ್ ಬಣ)ದ ವತಿಯಿಂದ ನಾಳೆ ದಿನಾಂಕ 24 ರಂದು ಬೆಳಿಗ್ಗೆ 10 ಗಂಟೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ

ಇಂದು ಎಂಇಎಸ್ ಶಿಕ್ಷಣ ಸಂಸ್ಥೆಯ `ಪ್ರತಿಭೋತ್ಸವ’

ದಾವಣಗೆರೆ ಆಂಜನೇಯ ಬಡಾವಣೆಯಲ್ಲಿರುವ ಎಂ.ಇ.ಎಸ್. ಸಮೂಹ ಶಿಕ್ಷಣ ಸಂಸ್ಥೆಯ ವತಿಯಿಂದ ಇಂದು ಸಂಜೆ 4 ಗಂಟೆಗೆ ನಗರದ ಗುಂಡಿ ಮಹದೇವಪ್ಪ ಕಲ್ಯಾಣ ಮಂಟಪದಲ್ಲಿ `ಪ್ರತಿಭೋತ್ಸವ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಇಂದು ವಿಶೇಷಚೇತನರಿಗೆ ಕಾರ್ಯಾಗಾರ

ಜಿಲ್ಲಾಡಳಿತದಿಂದ ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 10 ಕ್ಕೆ ಜಿಲ್ಲಾಡಳಿತ ಭವನದಲ್ಲಿ ವಿಶೇಷ ಚೇತನರ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ನಗರದಲ್ಲಿ ಇಂದು ಬೃಹತ್ ರಕ್ತದಾನ ಶಿಬಿರ

ಆಲ್ ಇಂಡಿಯಾ ಆರ್ಗನೈಜೇಷನ್ ಆಫ್ ಕೆಮಿಸ್ಟ್ ಅಂಡ್ ಡ್ರಗ್ಗಿಸ್ಟ್ ನ 50 ನೇ ವರ್ಷಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನಗರದ ನಿಜಲಿಂಗಪ್ಪ ಬಡಾವಣೆಯ ಹಿಮೋಫಿಲಿಯಾ ಸೊಸೈಟಿ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ಇಂದು ದಕ್ಷಿಣ ಕಾಂಗ್ರೆಸ್ ಸಭೆ

ನಗರದ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮಹಾನಗರ ಪಾಲಿಕೆ ಕಾಂಗ್ರೆಸ್ ಸದಸ್ಯರು, 2018ರ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ವಾರ್ಡ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಸಭೆಯನ್ನು ಇಂದು ಕರೆಯಲಾಗಿದೆ.

ನಗರದ ಪುರಾಣ ಪ್ರವಚನದಲ್ಲಿ ಇಂದು

ಪ್ರತಿದಿನ ಸಂಜೆ 6.30ಕ್ಕೆ ನಡೆಯುತ್ತಿರುವ ಒಂದು ತಿಂಗಳ ಪರ್ಯಂತದ ಪುರಾಣದಲ್ಲಿ ಇಂದಿನ ಕಾರ್ಯಕ್ರಮದಲ್ಲಿ ಮೈಸೂರಿನ ಪುಟ್ಟರಾಜ ಕವಿ ಗವಾಯಿಗಳವರ ಶಿಷ್ಯರಾದ ಭೀಮಶಂಕರ ಬೀದೂರ್ ನೇತೃತ್ವದ 15 ಜನರ ತಂಡ ತಬಲಾ ಸೋಲೋ ನಡೆಸುವರು ಎಂದು ಸಂಚಾಲಕ ಅಜ್ಜಂಪುರ ಶೆಟ್ರು ಮೃತ್ಯುಂಜಯ ತಿಳಿಸಿದ್ದಾರೆ.

ಜಗಳೂರು : ಇಂದು ದೇವದಾಸಿ ಸಮರ್ಪಣೆ ನಿಷೇಧ ಅರಿವು ಕಾರ್ಯಕ್ರಮ

ಜಗಳೂರು ತಾಲ್ಲೂಕಿನ ಸೊಕ್ಕೆ ಗ್ರಾಮ, ಚಿಕ್ಕಬಂಟನ ಹಳ್ಳಿಯ ಪ್ರತಿಭಾ ವಿಕಾಸ ವೇದಿಕೆ, ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಇಂದು ಬೆಳಿಗ್ಗೆ  11 ಗಂಟೆಗೆ ದೇವದಾಸಿ ಸಮರ್ಪಣೆ ನಿಷೇಧ ಕುರಿತು ಮಾಜಿ ದೇವದಾಸಿ ಮಹಿಳೆಯರಿಗೆ ಅರಿವು ಕಾರ್ಯಕ್ರಮ ಆಯೋಜಿಸಲಾಗಿದೆ

ಕುಡಿಯುವ ನೀರು ಕಾಮಗಾರಿಗಳಲ್ಲಿ ಅವ್ಯವಹಾರ: ಕ್ರಮಕ್ಕೆ ಆಗ್ರಹ

2023-24ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಗಳಲ್ಲಿ ಸುಮಾರು 87.45 ಲಕ್ಷ ರೂ. ಅವ್ಯವಹಾರ ನಡೆದಿರುವುದಾಗಿ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ. ಓಬಳೇಶ್ ಆರೋಪಿಸಿದ್ದಾರೆ.

26ರಂದು 76ನೇ ಗಣರಾಜ್ಯೋತ್ಸವ

ಜಿಲ್ಲಾಡಳಿತದ ವತಿಯಿಂದ ಜ.26 ರಂದು 76ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ನಗರದಲ್ಲಿ ನಾಳೆ ವಿಶೇಷ ಚೇತನರ ಸ್ವ ಉದ್ಯೋಗ ಮಾಹಿತಿ ಕಾರ್ಯಗಾರ

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ ಸ್ವಾಮಿ ವಿವೇಕಾನಂದರ ಜಯಂತಿ, ರಾಷ್ಟ್ರೀಯ ಯುವ ದಿನ ದಿನಾಚರಣೆ ಅಂಗವಾಗಿ ನಾಡಿದ್ದು ದಿನಾಂಕ 24ರ ಶುಕ್ರವಾರ ಬೆಳಿಗ್ಗೆ 10 ಕ್ಕೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ವಿಶೇಷ ಚೇತನರ ಸ್ವ ಉದ್ಯೋಗ ಮಾಹಿತಿ ಕಾರ್ಯಾಗಾರ ನಡೆಯಲಿದೆ.

ಹರಿಹರದಲ್ಲಿ ಇಂದು ನಡೆಯಬೇಕಿದ್ದ ದೂಡಾ ಜನ ಸಂಪರ್ಕ ಸಭೆ ಮುಂದೂಡಿಕೆ

ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು (ಜ. 23) ಹರಿಹರದಲ್ಲಿ ನಡೆಬೇಕಿದ್ದ ಜನ ಸಂಪರ್ಕ ಸಭೆಯನ್ನು ಕಾರಣಾಂತರದಿಂದ ಮುಂದೂಡಲಾಗಿದೆ. 

error: Content is protected !!