Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ರಾಯಲ್ ಕ್ರಿಕೆಟರ್ಸ್ ಇಂದು ಫೈನಲ್ ಪಂದ್ಯ

ದಾವಣಗೆರೆ – ಇಲ್ಲಿನ ಮಂಡಕ್ಕಿ ಭಟ್ಟಿ ಲೇಔಟ್‌ನಲ್ಲಿರುವ ರಾಯಲ್ ಕ್ರಿಕೆಟರ್ಸ್ ಸಹಯೋಗ ದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಇಂದು ಸಮಾರೋಪಗೊಳ್ಳಲಿದ್ದು ಫೈನಲ್ ಪಂದ್ಯಾವಳಿ ನಡೆಯಲಿದೆ.

ಎಸ್.ಎಂ. ಕೃಷ್ಣ ನಿಧನಕ್ಕೆ ಡಿ. ಬಸವರಾಜ್ ಸಂತಾಪ

ರಾಜ್ಯ ಕಂಡ ಮುತ್ಸದ್ದಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ. ಬಸವರಾಜ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅಡಿಕೆ ಆಮದಿಗೆ ಕಡಿವಾಣ ಹಾಕಿ : ಉಪ ಉತ್ಪನ್ನಗಳ ಉತ್ತೇಜನಕ್ಕೆ ಆಗ್ರಹ

ಕೇಂದ್ರ ಸರ್ಕಾರವು ಕರ್ನಾಟಕ ರಾಜ್ಯ ಸೇರಿದಂತೆ ವಿವಿಧ ರಾಜ್ಯಗಳ ಅಡಿಕೆ ಬೆಳೆಗಾರರ ಹಿತವನ್ನು ದೃಷ್ಟಿ ಯಲ್ಲಿಟ್ಟುಕೊಂಡು ಅಡಿಕೆ ಆಮದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಆಗ್ರಹಿಸಿದ್ದಾರೆ.

ನಗರದಲ್ಲಿ ಇಂದು ಗೀತಾ ಜಯಂತಿ

ಎಸ್. ನಿಜಲಿಂಗಪ್ಪ ಬಡಾವಣೆ ವರ್ತುಲ ರಸ್ತೆಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಇಂದು ಗೀತಾ ಜಯಂತಿ ಕಾರ್ಯಕ್ರಮವನ್ನು ಬ್ರಾಹ್ಮಣ ಸಮಾಜ ಸೇವಾ ಸಂಘದ ಮಹಿಳಾ ವಿಭಾಗದಿಂದ ಹಮ್ಮಿಕೊಳ್ಳ ಲಾಗಿದೆ. ಸದ್ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಬ್ರಾಹ್ಮಣ ಸಮಾಜ ಸೇವಾ ಸಂಘದ ಕಾರ್ಯದರ್ಶಿ ಶ್ರೀಮತಿ ಅಡಿಗ ಕೋರಿದ್ದಾರೆ.

ನಾಳೆ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಬೆಳಗಾವಿ ಚಲೋ

ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನ ವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಫೆಡರೇಶನ್ ವತಿಯಿಂದ ನಾಡಿದ್ದು ದಿನಾಂಕ 12 ರ ಗುರುವಾರ ಬೆಳಗಾವಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ

ಅದಾನಿ ಕುರಿತು ಚರ್ಚಿಸಲು ಅವಕಾಶ ನಿರಾಕರಣೆ ; ಸಂಸದೆ ಪ್ರಭಾ ಆರೋಪ

ಸಂಸತ್ ಭವನದಲ್ಲಿ ಕಲಾಪ ನಡೆಯುವ ವೇಳೆ ಉದ್ಯಮಿ ಅದಾನಿ ಕುರಿತು ಚರ್ಚೆ ಮಾಡಲು ಹಾಗೂ ಪ್ರತಿ ಪಕ್ಷಗಳಿಗೆ ಈ ಕುರಿತು ಮಾತನಾಡಲು ಆಡಳಿತ ಪಕ್ಷ ಅವಕಾಶ ಕಲ್ಪಿಸುತ್ತಿಲ್ಲ ಇದು ಖಂಡ ನೀಯ ಎಂದು ಸಂಸದರಾದ ಡಾ. ಪ್ರಭಾ ಮಲ್ಲಿಕಾರ್ಜುನ್ ಆರೋಪಿಸಿದ್ದಾರೆ.

ಪೋಟೋಗ್ರಾಫಿ – ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ ಆಹ್ವಾನ

ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ

ಯುವಜನೋತ್ಸವ : ಆಯ್ಕೆ ಪ್ರಕ್ರಿಯೆ ಮುಂದಕ್ಕೆ

ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆಯ ಕಾರ್ಯಕ್ರಮವನ್ನು ಇದೇ ದಿನಾಂಕ 14 ಕ್ಕೆ ಮೂಂದೂಡಲಾಗಿದೆ ಎಂದು ಇಲಾಖೆ ಸಹಾಯಕ ನಿರ್ದೇಶಕರಾದ ರೇಣುಕಾದೇವಿ ತಿಳಿಸಿದ್ದಾರೆ.

ತರಳಬಾಳು ಸಂಸ್ಥೆ ಸಂದರ್ಶನ ಮುಂದೂಡಿಕೆ

ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಯ ಅನುದಾನಿತ ಪ್ರೌಢಶಾಲೆಗಳಿಗೆ ಆಂಗ್ಲಭಾಷಾ ಶಿಕ್ಷಕರನ್ನು ಆಯ್ಕೆ ಮಾಡಲು ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ನಡೆಯಬೇಕಿದ್ದ ಸಂದರ್ಶನವು ಇದೇ ದಿನಾಂಕ 18 ರಂದು ನಡೆ ಸಲಾಗುವುದು

ಚೌಡಯ್ಯದಾನಾಪುರ ವೀರಭದ್ರೇಶ್ವರ ಕಾರ್ತಿಕೋತ್ಸವ

ರಾಣೇಬೆನ್ನೂರು : ತಾಲ್ಲೂಕಿನ ಚೌಡಯ್ಯ ದಾನಾಪುರ ದಲ್ಲಿ ನಾಡಿದ್ದು ದಿನಾಂಕ 12ರ ರಾತ್ರಿ 8ಕ್ಕೆ ಶ್ರೀ ವೀರಭದ್ರೇಶ್ವರ ದೇವರ ಕಾರ್ತಿಕೋತ್ಸವವು ಚೌಡಯ್ಯದಾನಾಪುರ ಸಂಸ್ಥಾನ ಮಠದ ಚಿತ್ರಶೇಖರ ಒಡೆಯರ ಶಿವಾಚಾರ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಜರುಗಲಿದೆ.

ಕೃಷ್ಣ ನಿಧನಕ್ಕೆ ಸಿದ್ದೇಶ್ವರ ಸಂತಾಪ

ದೇಶದ ರಾಜಕಾರಣದಲ್ಲಿ ಅಪ್ರತಿಮ ಸೇವೆ ಸಲ್ಲಿಸಿ, ಅಜಾತಶತ್ರು ಎನಿಸಿಕೊಂಡಿದ್ದ ಎಸ್.ಎಂ. ಕೃಷ್ಣ ಅವರ ಅಗಲಿಕೆಯು ರಾಜ್ಯಕ್ಕೂ ಹಾಗೂ ದೇಶಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಮಾಜಿ ಕೇಂದ್ರ ಸಚಿವ ಜಿ.ಎಂ. ಸಿದ್ದೇಶ್ವರ ಸಂತಾಪ ವ್ಯಕ್ತಪಡಿಸಿದ್ದಾರೆ.

error: Content is protected !!