ಮಾನವ ಹಕ್ಕುಗಳ ದಿನ : ಕಡ್ಡಾಯ ಆಚರಣೆಗೆ ಕರೆ
ಜಿಲ್ಲೆಯ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದ ಕಚೇರಿಗಳಲ್ಲಿ ಕಡ್ಡಾಯವಾಗಿ ನಾಳೆ ದಿನಾಂಕ 10 ರ ಮಂಗಳವಾರ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ಜಿಲ್ಲೆಯ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರದ ಕಚೇರಿಗಳಲ್ಲಿ ಕಡ್ಡಾಯವಾಗಿ ನಾಳೆ ದಿನಾಂಕ 10 ರ ಮಂಗಳವಾರ ಮಾನವ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ತಿಳಿಸಿದ್ದಾರೆ.
ನಗರದ ವರ್ತುಲ ರಸ್ತೆಯ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ನಾಡಿದ್ದು ದಿನಾಂಕ 11 ಮತ್ತು 12 ರಂದು ಎರಡು ದಿನಗಳ ಕಾಲ ಗೀತಾ ಜಯಂತಿ ಕಾರ್ಯಕ್ರಮವನ್ನು ಬ್ರಾಹ್ಮಣ ಸಮಾಜ ಸೇವಾ ಸಂಘದ ಮಹಿಳಾ ವಿಭಾಗದಿಂದ ಹಮ್ಮಿಕೊಳ್ಳಲಾಗಿದೆ.
ಮಲೇಬೆನ್ನೂರು : ನಂದಿಗುದಿ ಮಠದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಶಿಕಾರಿಪುರದಿಂದ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ಕೊಮಾರನಹಳ್ಳಿ ಬಳಿ ಅದ್ಧೂರಿಯಾಗಿ ಕರೆತರಲಾಯಿತು.
ಸಾರ್ವಜನಿಕರಿಗೆ ಮೀಸಲಾಗಿದ್ದ ಉದ್ಯಾನವನವನ್ನು ಒಡೆದು ಹಾಕಿದ್ದಲ್ಲದೇ, ಅಲ್ಲಿ ಅನಧಿಕೃತವಾಗಿ ನಿರ್ಮಿಸಲಾಗುತ್ತಿದ್ದ ವಾಣಿಜ್ಯ ಮಳಿಗೆಗಳ ಕಾಮಗಾರಿಯನ್ನು ಸ್ಥಗಿತಗೊಳಿಸುವಲ್ಲಿ ತಾವು ನಡೆಸಿದ ಹೋರಾಟಕ್ಕೆ ಜಯ ತಂದುಕೊಳ್ಳುವುದರ ಮೂಲಕ ಸರ್ಕಾರದ ಆಸ್ತಿಯನ್ನು ಉಳಿಸುವಲ್ಲಿ ಗ್ರಾಮಸ್ಥರು ಯಶಸ್ವಿಯಾಗಿದ್ದಾರೆ.
ವಿನೋಬನಗರ 1 ನೇ ಮುಖ್ಯರಸ್ತೆ, 2 ನೇ ಕ್ರಾಸ್‌ನಲ್ಲಿರುವ ಶ್ರೀ ಶಂಭುಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಬೆಳಿಗ್ಗೆ 6 ಗಂಟೆಯಿಂದ ರುದ್ರಾಭಿಷೇಕ ಮತ್ತು ಪಂಚಾಮೃತ ಅಭಿಷೇಕ ಕಾರ್ಯಕ್ರಮ ಮತ್ತು ಸಂಜೆ 6 ಗಂಟೆಗೆ ಕಾರ್ತಿಕೋತ್ಸವ ಜರುಗಲಿದೆ.
ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಅಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಗ್ರೂಪ್ ಸಿ ಹುದ್ದೆಗಳಾದ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳ 150 ಹುದ್ದೆಗಳ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆ ಭಾನುವಾರವೂ ನಗರದಲ್ಲಿ ಸುಗಮವಾಗಿ ನಡೆಯಿತು.
ದಾವಣಗೆರೆ ತಾಲ್ಲೂಕಿನ ಎಲೆಬೇತೂರು ಗ್ರಾಮದ ಶ್ರೀ ಸವಗದ್ದಿಗೆ ಸಂಗಮೇಶ್ವರ ಮಹಾಸ್ವಾಮಿ ದೇವಸ್ಥಾನದಲ್ಲಿ ಇಂದು ಕಾರ್ತಿಕೋತ್ಸವ ನಡೆಯಲಿದೆ.
ಶಿವಕುಮಾರ ಸ್ವಾಮಿ ಬಡಾವಣೆಯ ಈಶ್ವರ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕೋತ್ಸವದ ಪ್ರಯುಕ್ತ ಸಹಸ್ರ ದೀಪೋತ್ಸವ ಇಂದು ನಡೆಯಲಿದೆ.
ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಾಡಿದ್ದು ದಿನಾಂಕ 10ರಂದು ನಡೆಯುವ ಬೆಳಗಾವಿ ಸುವರ್ಣ ಸೌಧಕ್ಕೆ ಟ್ರ್ಯಾಕ್ಟರ್ ಸಮೇತ ಮುತ್ತಿಗೆಗೆ ಕರ್ನಾಟಕ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್ ಬೆಂಬಲ ಸೂಚಿಸಿದೆ.
ಹರಿಹರ : ರಾತ್ರಿ ಹನ್ನೊಂದು ಮೂವತ್ತಕ್ಕೆ ಗುಡುಗು – ಸಿಡಿಲು ಮಿಂಚಿನಿಂದ ನಿಧಾನವಾಗಿ ಆರಂಭವಾದ ಮಳೆ, ನಂತರ ಆರ್ಭಟಿಸಿ ಸುರಿದಿದ್ದು, ಹಲವಾರು ಗಂಟೆಗಳ ಕಾಲ ಧಾರಾಕಾರವಾಗಿ ಸುರಿದಿದೆ.
ಕಾರವಾರ : ಚಾಲಕನ ನಿಯಂತ್ರಣ ತಪ್ಪಿ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 50 ವಿದ್ಯಾರ್ಥಿಗಳ ಪೈಕಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿರು ವಂತಹ ಘಟನೆ ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಘಟನೆ ನಡೆದಿದೆ.
ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ವಜ್ರಮಹೋತ್ಸವದ ಪ್ರಯುಕ್ತ ನಾಳೆ ದಿನಾಂಕ 9 ರ ಸೋಮವಾರ ಬೆಳಿಗ್ಗೆ 11 ಗಂಟೆಗೆ `ಅನನ್ಯ ಸಂಭ್ರಮ-2024′ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ದೃಶ್ಯಕಲಾ ಮಹಾವಿದ್ಯಾಲಯದ ಆರ್ಟ್ ಗ್ಯಾಲರಿಯಲ್ಲಿ ಹಮ್ಮಿಕೊಳ್ಳಲಾಗಿದೆ