Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಹರಿಹರ ಹಿಂದೂ ರುದ್ರಭೂಮಿಯಲ್ಲಿ ಇಂದು ಮೌಢ್ಯ ವಿರೋಧಿ ಪರಿವರ್ತನಾ ದಿನಾಚರಣೆ

ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪ್ರೊ. ಬಿ. ಕೃಷ್ಣಪ್ಪ ಬಣ) ಹಾಗೂ ಮಾನವ ಬಂಧುತ್ವ ವೇದಿಕೆ ವತಿಯಿಂದ ಹಿಂದೂ ರುದ್ರಭೂಮಿಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಡಾ. ಅಂಬೇಡ್ಕರ್ ಅವರ 68 ನೇ ಮಹಾಪರಿನಿಬ್ಬಣ ಸದ್ಭಾವನಾ ದಿನವನ್ನು ಮೌಢ್ಯ ವಿರೋಧಿ ಪರಿವರ್ತನಾ ದಿನವನ್ನಾಗಿ ಆಚರಿಸಲಾಗುವುದು.

ಜಿಲ್ಲಾ ಮಟ್ಟದ ಯುವಜನೋತ್ಸವಕ್ಕೆ ಆಯ್ಕೆ

ಜಿಲ್ಲಾಡಳಿತ, ಜಿ.ಪಂ, ನೆಹರು ಯುವ ಕೇಂದ್ರ, ಎ.ವಿ.ಕೆ. ಕಾಲೇಜು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಇದೇ ದಿನಾಂಕ 10 ರಂದು ನಗರದ ಎ.ವಿ. ಕಮಲಮ್ಮ ಮಹಿಳಾ ಕಾಲೇಜು ಇಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ ಆಯ್ಕೆ ಪ್ರಕ್ರಿಯೆ ಹಮ್ಮಿಕೊಳ್ಳಲಾಗಿದೆ.

ಪೋಟೋಗ್ರಾಫಿ – ವಿಡಿಯೋಗ್ರಾಫಿ ತರಬೇತಿಗೆ ಅರ್ಜಿ

ಡ್ರೋನ್ ಆಧಾರಿತ ಪೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ತರಬೇತಿ ನೀಡಲು ಅರ್ಜಿ ಅಹ್ವಾನಿಸಲಾಗಿದೆ.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮೂವರ ಸೋಲಿಗೆ ಜಿ.ಎಂ.ಸಿದ್ದೇಶ್ವರ ಕಾರಣ

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲಲು ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಅವರೇ ಪ್ರಮುಖ ಕಾರಣ ಎಂದು ಚನ್ನಗಿರಿ ಬಿಜೆಪಿ ಮುಖಂಡ ಮಾಡಾಳು ಮಲ್ಲಿಕಾರ್ಜುನ್ ಆರೋಪಿಸಿದ್ದಾರೆ.

ಚನ್ನಗಿರಿ : ಸುಪಾರಿ ಕೊಲೆಗಾರರ ಬಂಧನ

ಆಸ್ತಿಗಾಗಿ ಸಂಚು ರೂಪಿಸಿ ಸುಪಾರಿ ನೀಡಿ ತನ್ನ ಚಿಕ್ಕಪ್ಪನನ್ನೇ ಕೊಲೆ ಮಾಡಿಸಿದ ಆರೋಪಿತರು ಮತ್ತು ಸುಪಾರಿ ಕೊಲೆಗಾರರನ್ನು ಚನ್ನಗಿರಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ನಗರದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ನಗರದ ಕಿತ್ತೂರು ರಾಣಿ ಚನ್ನಮ್ಮ ವೃತ್ತದ ಸಮೀಪ   ಪಿಸಾಳೆ ಕೌಂಪೌಡ್ ಹತ್ತಿರದ ಬಸ್ ಸ್ಟಾಪ್ ಸಮೀಪ ಸುಮಾರು 40 ವರ್ಷ ವಯಸ್ಸಿನ ಅಪರಿಚಿತ ಗಂಡಸಿನ ಶವ ನಿನ್ನೆ ಪತ್ತೆಯಾಗಿದೆ. 

ನಗರದಲ್ಲಿ ಇಂದು ವೃತ್ತಿ ನಾಟಕ ಕಂಪನಿಗಳ ಮಾಲೀಕರ ಸಭೆ

ವೃತ್ತಿ ರಂಗಭೂಮಿ ರಂಗಾಯಣ ವತಿಯಿಂದ ವೃತ್ತಿ ರಂಗಭೂಮಿ ರಂಗಾಯಣ ನಿರ್ದೇಶಕ ಮಲ್ಲಿಕಾರ್ಜನ ಕಡಕೋಳ ಅವರ ಅಧ್ಯಕ್ಷತೆಯಲ್ಲಿ ಇಂದು ಬೆಳಿಗ್ಗೆ 11ಕ್ಕೆ ಜಿಲ್ಲಾಡಳಿತ ಭವನದಲ್ಲಿ ವೃತ್ತಿ ನಾಟಕ ಕಂಪನಿಗಳ ಮಾಲೀಕರ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ. 

ಭಾನುವಳ್ಳಿಯಲ್ಲಿ ಇಂದು ಬಿಜೆಪಿ ಜನಾಂದೋಲನ

ರಾಜ್ಯದ ರೈತರ ಬಡ ಜನರ ಮತ್ತು ಮಠ, ಮಂದಿರಗಳ ಜಮೀನುಗಳನ್ನು ಅಕ್ರಮವಾಗಿ ವಕ್ಫ್ ಬೋರ್ಡ್ ಹೆಸರಿನಲ್ಲಿ ಕಬಳಿಸಲು ಹೊರಟಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಜನಾಂದೋಲನ ಕಾರ್ಯಕ್ರಮವು ಇಂದು ಬೆಳಿಗ್ಗೆ 9ಕ್ಕೆ ಭಾನುವಳ್ಳಿ ಗ್ರಾಮದ ನೀರಾವರಿ ಇಲಾಖೆಯ ಆವರಣದಲ್ಲಿ ನಡೆಯಲಿದೆ. 

ನಾಳೆ ಶಾಲಾ ವಿದ್ಯಾರ್ಥಿಗಳಿಗೆ ಥೀಮ್ ಪಾರ್ಕ್ ಉಚಿತ ವೀಕ್ಷಣೆ

ದಾವಣಗೆರೆ ವಿಶ್ವವಿದ್ಯಾನಿಲಯ ದೃಶ್ಯಕಲಾ ಮಹಾವಿದ್ಯಾಲಯದ ಆವರಣದಲ್ಲಿರುವ ಥೀಮ್ ಪಾರ್ಕ್ ಮತ್ತು ಬಯಲು ರಂಗ ಮಂದಿರ ವೀಕ್ಷಣೆಗಾಗಿ ಶಾಲಾ ವಿದ್ಯಾರ್ಥಿಗಳಿಗೆ ನಾಡಿದ್ದು ದಿನಾಂಕ 6ರಂದು ಉಚಿತ ಪ್ರವೇಶ ಅವಕಾಶ ನೀಡಲಾಗಿದೆ.

ಕಬ್ಬಿಗೆ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್‍ಗೆ ರೂ.3151 ಗಳ ದರ ನಿಗದಿ

ಕಳೆದ ವರ್ಷ ನುರಿಸಲಾದ ಕಬ್ಬಿನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿ ಆಧಾರದ ಮೇಲೆ ಮೊದಲ ಕಂತಿನ ರೂಪದಲ್ಲಿ ಪಾವತಿಸಬೇಕಾದ ನ್ಯಾಯ ಮತ್ತು ಲಾಭದಾಯಕ ಬೆಲೆ ಪ್ರತಿ ಮೆಟ್ರಿಕ್ ಟನ್ ಕಬ್ಬಿಗೆ ರೂ.3151 ಗಳ ದರ ನಿಗದಿ ಮಾಡಲಾಗಿದೆ

ಮೀಸಲಾತಿ : ಇಂದು ಸಭೆ

ಅಖಿಲ ಭಾರತ ಲಿಂಗಾಯತ ಪಂಚಾಮಸಾಲಿ ಸಮಾಜ, ಕೂಡಲ ಸಂಗಮ ಗುರುಪೀಠ, ದಾವಣಗೆರೆ ಜಿಲ್ಲೆ 2ಎ ಮೀಸಲಾತಿಗಾಗಿ ಬೆಳಗಾವಿ ಸುವರ್ಣ ವಿಧಾನಸೌಧ ಮುತ್ತಿಗೆ ಹಾಗೂ ಬೆಳಗಾವಿ ಚಲೋ ಉದ್ಧೇಶದಿಂದ ಪೂರ್ವಭಾವಿ ಸಭೆಯನ್ನು ಶಾಸಕ ಹೆಚ್‌.ಎಸ್‌. ಶಿವಶಂಕರ್‌ರವರ ಸ್ವಗೃಹದಲ್ಲಿ ಇಂದು ಬೆಳಿಗ್ಗೆ 11 ಕ್ಕೆ ಕರೆಯಲಾಗಿದೆ.

error: Content is protected !!