ನಗರದಲ್ಲಿ ಇಂದು ಜಾಗೃತಿ ಕಾರ್ಯಾಗಾರ
ಬಿ.ಡಿ.ಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಕಾಲೇಜಿನ ಆರ್ ಮತ್ತು ಡಿ ಬ್ಲಾಕ್‌ನಲ್ಲಿ `ಕೆಲಸದ ಸ್ಥಳದಲ್ಲಿ ಮಹಿಳೆಯರ ಲೈಂಗಿಕ ಕಿರುಕುಳ ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ’ ವಿಷಯ ಕುರಿತು ಒಂದು ದಿನದ ಜಾಗೃತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.