ಹರಪನಹಳ್ಳಿ : ಇಂದು ಸಂಸ್ಕೃತಿ ಉತ್ಸವ
ಅಂಬ್ಲಿ ದೊಡ್ಡಭರಮಪ್ಪ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಸೇಡಂ ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯಿಂದ 7ನೇ ಭಾರತೀಯ ಸಂಸ್ಕೃತಿ ಉತ್ಸವವು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಅಂಬ್ಲಿ ದೊಡ್ಡಭರಮಪ್ಪ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಸೇಡಂ ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯಿಂದ 7ನೇ ಭಾರತೀಯ ಸಂಸ್ಕೃತಿ ಉತ್ಸವವು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಜಿಲ್ಲಾ ಪೆೊಲೀಸ್ ವಾರ್ಷಿಕ ಕ್ರೀಡಾಕೂಟವು ಇಂದಿನಿಂದ ಮೂರು ದಿನ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಕ್ರೀಡಾಕೂಟ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಐಜಿಪಿ ಬಿ.ರಮೇಶ್ ಆಗಮಿಸುವರು.
ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನ ಪಿಜಿ ವೈದ್ಯಕೀಯ ಹಾಗೂ ಪ್ಯಾರಾ ಮೆಡಿಕಲ್ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ಎಐಡಿಎಸ್‌ಓ ಖಂಡಿಸಿದೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ವತಿಯಿಂದ ಆನ್ಲೈನ್ನಲ್ಲಿ ಶರಣ ಚಿಂತನ ಗೋಷ್ಠಿ ಇಂದು ಸಂಜೆ 7 ರಿಂದ 9ರವರೆಗೆ ನಡೆಯಲಿದೆ.
ಇಂದು ನಡೆಯಬೇಕಿದ್ದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ದಾವಣಗೆರೆ ಜಿಲ್ಲಾ ಘಟಕದ ವಾರ್ಷಿಕ ಮಹಾಸಭೆಯನ್ನು ಮುಂದೂಡಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದ್ದಾರೆ.
ಸಂವಿಧಾನ ದಿನಾಚರಣೆ ಪ್ರಯುಕ್ತ ಬೌದ್ಧರ ಧಾರ್ಮಿಕ ಹಕ್ಕಿಗಾಗಿ ಪ್ರತಿಭಟನೆ ಹಾಗೂ ಬಿಟಿ ಕಾಯ್ದೆ-1949ನ್ನು ರದ್ಧುಗೊಳಿಸಿ, ಬುದ್ಧ ಗಯಾದ ಮಹಾಭೋಧಿ ಮಹಾವಿಹಾರದ ಆಡಳಿತ ಸಂಪೂರ್ಣ ಬೌದ್ಧರಿಗೆ ನೀಡಲು ಒತ್ತಾಯಿಸಿ ಇಂದು ಬೆಳಿಗ್ಗೆ 11 ಗಂಟೆಗೆ ದೇಶಾದ್ಯಂತ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಗುತ್ತದೆ.
ಇಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ರವರೆಗೆ ಪಾಲಿಕೆಯ ಎರಡನೇ ಮಹಡಿಯಲ್ಲಿ `ಚದುರಂಗೋತ್ಸವ’ ಚದುರಂಗ ಸ್ಪರ್ಧೆ ನಡೆಯಲಿದೆ ಎಂದು ಮಹಾಪೌರರಾದ ಕೆ. ಚಮನ್ ಸಾಬ್ ತಿಳಿಸಿದ್ದಾರೆ.
ವಿಶ್ವ ವಿಕಲಚೇತನರ ದಿನಾಚರಣೆ ಪ್ರಯುಕ್ತ ನಾಳೆ ದಿನಾಂಕ 26 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮೋತಿ ವೀರಪ್ಪ ಕಾಲೇಜು ಮೈದಾನದಲ್ಲಿ ವಿಕಲಚೇತನ ರಿಗೆ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶನಾಲಯ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆಗಳು ಒಂದಾಗಿ ಕರ್ನಾಟಕದಲ್ಲಿರುವ ಕನ್ನಡ ಬಾರದ ಎಲ್ಲ ಸರ್ಕಾರಿ ನೌಕರರಿಗಾಗಿ ಹನ್ನೆರಡು ತಿಂಗಳುಗಳ ಅಂಚೆ ಮೂಲಕ ಕನ್ನಡ ಶಿಕ್ಷಣ ಯೋಜನೆಯನ್ನು ನಡೆಸುತ್ತಿದೆ.
ದಾವಣಗೆರೆ ತಾಲ್ಲೂಕಿನ ಹೊಸ ಬೆಳವನೂರು ಗ್ರಾಮದಲ್ಲಿ ಶ್ರೀ ಬಸವೇಶ್ವರ ಸಮುದಾಯ ಭವನದ ಆವರಣದಲ್ಲಿ ಇಂದು ಸಂಜೆ 6 ಕ್ಕೆ ಶ್ರೀ ಗಣೇಶ ಕಾರ್ತಿಕೋತ್ಸವ ಹಾಗೂ ಗ್ರಾಮದ 80 ವರ್ಷ ತುಂಬಿದ ಹಿರಿಯ ನಾಗರಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.
ದೇಶದಲ್ಲಿ ಬದುಕುವ ಪ್ರತಿಯೊಬ್ಬರೂ ದೇಶದ ಕಾನೂನುಗಳನ್ನು ತಿಳಿದಿರಬೇಕು ಎಂದು ನ್ಯಾಯಾಧೀಶ ಶ್ರೀರಾಮ್ ಹೆಗಡೆ ತಿಳಿಸಿದರು.
ನಾಡಿದ್ದು ದಿನಾಂಕ 26 ರಂದು ಪಾಲಿಕೆಯಲ್ಲಿ ಆಚರಿಸಲಾಗುತ್ತಿರುವ ಕನ್ನಡ ರಾಜ್ಯೋತ್ಸವದ ಅಂಗವಾಗಿ ಮಂಗಳವಾರ ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪಾಲಿಕೆಯ ಎರಡನೇ ಫ್ಲೋರ್ ಆವರಣದಲ್ಲಿ `ಚದುರಂಗೋತ್ಸವ’ ಚದುರಂಗ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.