ನಗರದಲ್ಲಿ ಇಂದು ಸಭೆ
ಶ್ರೀ ಬೀರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಪಾಲಿಕೆ ಸದಸ್ಯ ಜೆ.ಎನ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ
ಶ್ರೀ ಬೀರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಶ್ರೀ ಕನಕದಾಸರ ಜಯಂತಿ ಆಚರಣೆಯ ಪೂರ್ವಭಾವಿ ಸಭೆಯನ್ನು ಪಾಲಿಕೆ ಸದಸ್ಯ ಜೆ.ಎನ್ ಶ್ರೀನಿವಾಸ್ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ
ಇಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಸಂಗೋಪನಾ ಚಟುವಟಿಕೆಗಳ ತರಬೇತಿ ಆಯೋಜಿಸಲಾಗಿದೆ.
ನಗರದ ಒಡನಾಟ ರಂಗ ತಂಡ, ಸಿದ್ದಗಂಗಾ ವಿದ್ಯಾಸಂಸ್ಥೆ, ಇನ್ಸೈಟ್ ಐಎಎಸ್, ಕೆಎಎಸ್ ಕೋಚಿಂಗ್ ಇನ್ ಸ್ಟಿಟ್ಯೂಟ್ ಸಹಯೋಗದೊಂದಿಗೆ ಸಿದ್ದಗಂಗಾ ವಿದ್ಯಾ ಸಂಸ್ಥೆ ಆವರಣದಲ್ಲಿ ನಾಡಿದ್ದು ದಿನಾಂಕ 10 ಮತ್ತು 11ರಂದು ನೀನಾಸಂ ತಿರುಗಾಟ 2024 ನಾಟಕಗಳ ಪ್ರದರ್ಶನಗಳನ್ನು ಏರ್ಪಡಿಸಲಾಗಿದೆ.
ನಗರದ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಹಿಳಾ ವಿಭಾಗದಿಂದ ಗೀತಾ ಜಯಂತಿ ಅಂಗವಾಗಿ ಭಗವದ್ಗೀತೆ ಸ್ಪರ್ಧೆಯನ್ನು ಇದೇ ದಿನಾಂಕ 16 ರ ಶನಿವಾರ ಬೆಳಿಗ್ಗೆ 12 ಗಂಟೆಗೆ ನಗರದ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ.
ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು, ಮೈಸೂರು, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ರಾಜನಹಳ್ಳಿ ಸೀತಮ್ಮ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಸಹಯೋಗದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಸೀತಮ್ಮ ಕಾಲೇಜಿನಲ್ಲಿ ಶ್ರೀಮತಿ ಓಂಕಾರಮ್ಮ ಡಿ. ವೀರಪ್ಪ ದತ್ತಿ ಕಾರ್ಯಕ್ರಮದ ವಿಶೇಷ ಉಪನ್ಯಾವಿರುತ್ತದೆ.
ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಹೊಸದಾಗಿ ತೋಟಗಾರಿಕೆ ಬೆಳೆ ಬೆಳೆಯುವ ಆಸಕ್ತ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.
ನಗರದ ಗುರು ಭವನದಲ್ಲಿ ನಾಡಿದ್ದು ದಿನಾಂಕ 10 ರ ಭಾನುವಾರ ದಾವಣಗೆರೆ ಚೆಸ್ ಕ್ಲಬ್ ಹಾಗೂ ಸರ್ಕಲ್ ಚೆಸ್ ಅವರ ಸಹಯೋಗದೊಂದಿಗೆ ಗುರು ಭವನದಲ್ಲಿ ಓಪನ್ ರ‍್ಯಾಪಿಡ್ ಚೆಸ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ.
ಇಂದು ಬೆಳಿಗ್ಗೆ 10.30ಕ್ಕೆ ಆರ್.ಎಲ್ ಕಾನೂನು ಮಹಾವಿದ್ಯಾಲಯದ ಸಭಾ, ಭವನದಲ್ಲಿ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆಯ ಅಂಗವಾಗಿ `ಕಾನೂನು ನೆರವು ಅರಿವು’ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಇಲ್ಲಿನ ವಿನೋಬನಗರದ 1 ನೇ ಮುಖ್ಯ ರಸ್ತೆ ನಡೆಯುತ್ತಿರುವ ಚರಂಡಿ ಕಾಮಗಾರಿ ಕಳಪೆ, ಅವೈಜ್ಞಾನಿಕ ಮತ್ತು ಮಂದಗತಿಯಲ್ಲಿ ನಡೆಯುತ್ತಿದ್ದು, ಈ ಬಗ್ಗೆ ಗುತ್ತಿಗೆದಾರರ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.
ದಾವಣಗೆರೆ ಜಿಲ್ಲಾಡಳಿತ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವ ಪ್ರಯುಕ್ತ ಇಂದು ಸಂಜೆ 5.30ಕ್ಕೆ ಗಾಜಿನ ಮನೆಯಲ್ಲಿ 2024 ನವೆಂಬರ್ ತಿಂಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಸುವರ್ಣ ಸಂಭ್ರಮವನ್ನು ಏರ್ಪಡಿಸಲಾಗಿದೆ.
ವಿದ್ಯಾನಗರ ವಿನಾಯಕ ಬಡಾವಣೆ 3 ನೇ ಕ್ರಾಸ್‌ನಲ್ಲಿರುವ ಕ್ರೀಡಾ ಮತ್ತು ಮನೋರಂಜನಾ ಕೇಂದ್ರದ ಆವರಣದಲ್ಲಿ ಉಚಿತ ಸಮಾಲೋಚನೆ ಹಾಗೂ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಲಾಗಿದೆ.
ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರಾಂಕ್ ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿಯುಸಿಯಲ್ಲಿ ಶೇ.60ಕ್ಕಿಂತ ಅಧಿಕ ಅಂಕ ಪಡೆದು, ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.