Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಹೊನ್ನಾಳಿ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ 2 ನಾಮಪತ್ರ

ಹೊನ್ನಾಳಿ : ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಲು ಅಂತಿಮ ದಿನವಾದ ಇಂದು ಕೆ. ಶಿವಪದ್ಮ ಹಾಗೂ ಕೆ. ಅರುಣ ನಾಮಪತ್ರ ಸಲ್ಲಿಸಿದ್ದಾರೆ.

ನಗರದಲ್ಲಿ ಇಂದು ಅಂತರ ಕಾಲೇಜು ಮಟ್ಟದ ಪುರುಷ – ಮಹಿಳೆಯರ ಕರಾಟೆ ತಂಡದ ಆಯ್ಕೆ

2024-25 ನೇ ಸಾಲಿನ ದಾವಣಗೆರೆ ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳೆಯರ ಕರಾಟೆ ಹಾಗೂ ದಾವಿವಿ ತಂಡದ ಆಯ್ಕೆಯು ಇಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ.

ಕಾಮಗಾರಿ ಮಾಡದೇ ಬಿಲ್‌ ಪಡೆದ ಆರೋಪ ಲೋಕಾಯುಕ್ತ ಎಂಜಿನಿಯರ್‌ ಪರಿಶೀಲನೆ

ಹರಿಹರ : ಕಾಮಗಾರಿ ನಡೆಸದೇ ಬಿಲ್‌ ಪಡೆಯಲಾಗಿದೆ ಎಂದು ಆರೋಪಿಸಿ ಸಲ್ಲಿಸಿದ್ದ ದೂರಿನ ಆಧಾರದ ಮೇರೆಗೆ ಬೆಂಗಳೂರಿನ ಲೋಕಾಯುಕ್ತ ಸಿವಿಲ್ ಎಂಜಿನಿಯರ್‌ ಅನುಷಾ ಮತ್ತು ಸಿಬ್ಬಂದಿ ನಗರದ ಕೆ.ಆರ್‌. ನಗರದಲ್ಲಿ  ನಿನ್ನೆ ಪರಿಶೀಲನೆ ನಡೆಸಿದರು.

ಅರಸೀಕೆರೆಯಲ್ಲಿ ಇಂದು ಕಾಂಗ್ರೆಸ್ ಎಸ್ಸಿ ವಿಭಾಗದ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಇಂದು ಮಧ್ಯಾಹ್ನ 2 ಗಂಟೆಗೆ ಜಗಳೂರು ತಾಲ್ಲೂಕು ಅರಸೀಕೆರೆಯಲ್ಲಿ ಎಸ್ಸಿ ವಿಭಾಗದ ಕಾಂಗ್ರೆಸ್ ಸಭೆ ಕರೆಯಲಾಗಿದೆ.

ನಗರದಲ್ಲಿ ಇಂದು ನಗರ ಪಾಲಿಕೆ ಸ್ಥಾಯಿ ಸಮಿತಿಗೆ ಚುನಾವಣೆ

ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಇಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆ ವಹಿಸುವರು ಎಂದು ಮಹಾನಗರ ಪಾಲಿಕೆ ಪ್ರಕಟಣೆ ತಿಳಿಸಿದೆ.

ನಾಡಿದ್ದು ಕಬಡ್ಡಿ ಚಾಂಪಿಯನ್‌ ಶಿಪ್‌ಗೆ ಆಯ್ಕೆ

ರಾಜ್ಯ ಕಬಡ್ಡಿ ಚಾಂಪಿಯನ್‌ಶಿಪ್‌ಗೆ ದಾವಣಗೆರೆ ಜಿಲ್ಲಾ ಕಬಡ್ಡಿ ತಂಡವನ್ನು ನಾಡಿದ್ದು ದಿನಾಂಕ 10 ರ ಭಾನುವಾರ 3 ಗಂಟೆಗೆ ನಗರದ ಸ್ಟೇಡಿಯಂನ  ಒಳಾಂಗಣ ಕ್ರೀಡಾಂಗಣದಲ್ಲಿ ಜಿಲ್ಲಾ ಅಮೆಚೂರ್ ಕಬಡ್ಡಿ ಸಂಸ್ಥೆಯಿಂದ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಜಿಲ್ಲೆಯಲ್ಲಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ

ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ ವತಿಯಿಂದ ರೈತರ ಆರ್ಥಿಕ ಅಭಿವೃದ್ಧಿಗೋಸ್ಕರ ಮೆಕ್ಕೆಜೋಳ ಬೆಳೆದ ರೈತರಿಗೆ ನೆರವಾಗಲು, ಕರ್ನಾಟಕ ಹಾಲು ಮಹಾಮಂಡಳಿ ರೈತರಿಂದ ಮೆಕ್ಕೆಜೋಳವನ್ನು ನೇರವಾಗಿ ಪ್ರತಿ ಕ್ವಿಂಟಾಲ್‍ಗೆ ರೂ.2400/-ರ ಬೆಲೆಯಲ್ಲಿ ಖರೀದಿಸಲು ತೀರ್ಮಾನಿಸಲಾಗಿದೆ.

ನಗರದಲ್ಲಿ ಇಂದು ವೃತ್ತಿರಂಗ ಗೀತೆಗಳ ಕಲಿಕಾ ಕಾರ್ಯಾಗಾರ ಸಮಾರೋಪ

ವೃತ್ತಿ ರಂಗಭೂಮಿ ರಂಗಾಯಣದ ವತಿಯಿಂದ ನಗರದ ಜಯದೇವ ವೃತ್ತದ ಶಿವಯೋಗ ಮಂದಿರದಲ್ಲಿ ಇಂದು ಸಂಜೆ 6ಕ್ಕೆ ರಂಗ ಸಂಗೀತ : ವೃತ್ತಿರಂಗ ಗೀತೆಗಳ ಕಲಿಕಾ ಕಾರ್ಯಾಗಾರದ ಸಮಾರೋಪ ಮತ್ತು ಅಭಿನಯ ಸಂಗೀತ ಪ್ರದರ್ಶನ ನಡೆಯಲಿದೆ

ವಕ್ಫ್‌ ಮಂಡಳಿ ರದ್ದಾಗಲಿ: ಪೇಜಾವರ ಶ್ರೀ

ಎಲ್ಲರೂ ನೆಮ್ಮದಿಯಾಗಿ ಬದುಕುವಂತೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ವಕ್ಫ್‌ ಮಂಡಳಿ ರದ್ದು ಮಾಡುವ ಬಗ್ಗೆ ಸರ್ಕಾರ ಕೂಲಂಕುಶವಾಗಿ ಪರಿಶೀಲಿಸಿ ಕ್ರಮ ವಹಿಸಲಿ ಎಂದು ಉಡುಪಿ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

ಜಿಲ್ಲಾ ಮಟ್ಟದ ಮಕ್ಕಳ ದಿನಾಚರಣೆಯ ಸ್ಪರ್ಧೆಗಳಿಗೆ ಅರ್ಜಿ

ನಗರದ ಜಿಲ್ಲಾ ಬಾಲಭವನ ಸೊಸೈಟಿಯಿಂದ ಮಕ್ಕಳ ದಿನಾಚರಣೆಯ ಪ್ರಯುಕ್ತ 6 ರಿಂದ 16 ವರ್ಷದ ಮಕ್ಕಳಿಗೆ ಇದೇ ದಿನಾಂಕ 12ರಂದು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಹೊನ್ನಾಳಿ ತಾ.ನಲ್ಲಿಂದು ಇಂಗ್ಲಿಷ್ ಕಾರ್ಯಾಗಾರ

ಮಾರಿಕೊಪ್ಪ ಗ್ರಾಮದ ಹತ್ತಿರವಿರುವ ವಿಜಯ ಪ್ರೌಢಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಇಂಗ್ಲಿಷ್ ವಿಷಯವಾರು ಶಿಕ್ಷಕರ ಕಾರ್ಯಾಗಾರ ನಡೆಯಲಿದೆ ಎಂದು ಕಾಲೇಜು ಪ್ರಾಂಶುಪಾಲ ವಸಂತ್‌ಕುಮಾರ್ ತಿಳಿಸಿದರು.

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ

ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

error: Content is protected !!