24ರಂದು ಹಿಮೊಫಿಲಿಯಾ ಸೊಸೈಟಿ 34ನೇ ವಾರ್ಷಿಕ ಮಹಾಸಭೆ
ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿನ ಕರ್ನಾಟಕ ಹಿಮೊಫಿಲಿಯಾ ಸೊಸೈಟಿಯ 34ನೇ ವಾರ್ಷಿಕ ಸಭೆ ಇದೇ ದಿನಾಂಕ 24ರ ಭಾನುವಾರ ಬೆಳಗ್ಗೆ 10ಗಂಟೆಗೆ ಸೊಸೈಟಿ ಕಛೇರಿಯಲ್ಲಿ ನಡೆಯಲಿದೆ.
ನಗರದ ಎಸ್. ನಿಜಲಿಂಗಪ್ಪ ಬಡಾವಣೆಯಲ್ಲಿನ ಕರ್ನಾಟಕ ಹಿಮೊಫಿಲಿಯಾ ಸೊಸೈಟಿಯ 34ನೇ ವಾರ್ಷಿಕ ಸಭೆ ಇದೇ ದಿನಾಂಕ 24ರ ಭಾನುವಾರ ಬೆಳಗ್ಗೆ 10ಗಂಟೆಗೆ ಸೊಸೈಟಿ ಕಛೇರಿಯಲ್ಲಿ ನಡೆಯಲಿದೆ.
ಅಖಿಲ ಭಾರತ ದಲಿತ ಹಕ್ಕುಗಳ ಆಂದೋಲನ (ಎಐಆರ್‌ಡಿಎಂ)ಪ್ರಥಮ ರಾಜ್ಯ ಸಮ್ಮೇಳನ ನಾಳೆ ದಿನಾಂಕ 8 ಮತ್ತು 9 ರಂದು ದಾವಣಗೆರೆಯಲ್ಲಿ ನಡೆಯಲಿದೆ ಎಂದು ಎಐಡಿಆರ್ ರಾಷ್ಟ್ರೀಯ ಮಂಡಳಿ ಸದಸ್ಯ ಡಾ. ಮಹೇಶ್ ಕುಮಾರ್ ರಾಠೋಡ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ದಾವಣಗೆರೆ ವಿಶ್ವವಿದ್ಯಾನಿಲಯದ ಅಂತರ್-ಕಾಲೇಜುಗಳ ಪುರುಷ ಮತ್ತು ಮಹಿಳೆಯರ ಕುಸ್ತಿ ಪಂದ್ಯಾವಳಿ ಮತ್ತು ದಾ.ವಿ.ವಿ. ತಂಡದ ಆಯ್ಕೆ ಕಾರ್ಯಕ್ರಮವು ಇಂದು ಬೆಳಗ್ಗೆ 10.30ಕ್ಕೆ ಆಂಜನೇಯ ಬಡಾವಣೆ ಕುಸ್ತಿ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ಸಿ.ಇ.ಟಿ, ಹಾಗೂ ಎನ್.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿ ದರದಲ್ಲಿ ನೀಡಲಾಗುವುದು.
ನಗರದ ಎಂ.ಸಿ ಕಾಲೋನಿಯಲ್ಲಿ ಬಾಡಿಗೆ ಕಟ್ಟಡದಲ್ಲಿದ್ದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು ನೂತನ ಕಾಲೇಜು ರಸ್ತೆಯಲ್ಲಿರುವ ಸರೂರ್ ಆರ್ಕೇಡ್‌ನ ಎರಡನೇ ಮಹಡಿಗೆ ಇದೇ ನ. 11ರಿಂದ ಸ್ಥಳಾಂತರಿಸಲಾಗುವುದು
ಹಿರಿಯ ಪತ್ರಕರ್ತವೀರಪ್ಪ ಎಂ. ಭಾವಿ ಅವರ ನಿಧನಕ್ಕೆ ಜಿಲ್ಲಾ ಜೆಡಿಎಸ್ ಮುಖಂಡ ಎಂ.ಎನ್. ನಾಗರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ. ಪತ್ರಿಕೋದ್ಯಮದಲ್ಲಿ ವೀರಣ್ಣ ಅವರು ಸಲ್ಲಿಸಿದ ಸೇವೆ ಅನನ್ಯ ಎಂದು ನಾಗರಾಜ್ ಶ್ಲ್ಯಾಘಿಸಿದ್ದಾರೆ.
ಇಂದಿನ ಸುದ್ದಿ ಸಂಪಾದಕ ವೀರಪ್ಪ ಎಂ. ಭಾವಿ ಅವರ ನಿಧನಕ್ಕೆ ಹಿರಿಯ ವ್ಯಂಗ್ಯ ಚಿತ್ರಕಾರ ಹೆಚ್.ಬಿ. ಮಂಜುನಾಥ್ ಸಂತಾಪ ವ್ಯಕ್ತಪಡಿ ಸಿದ್ದಾರೆ.
ಪ್ರಸಕ್ತ ಸಾಲಿನ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ವಿಜ್ಞಾನ, ತಂತ್ರಜ್ಞಾನ, ಇಂಜಿನಿಯರಿಂಗ್, ಕೃಷಿ ಮತ್ತು ವೈದ್ಯಕೀಯ ವಿಷಯಗಳ ಸಂವಹನಕ್ಕೆ ದಿವ್ಯಾಂಗ ವ್ಯಕ್ತಿಯ ಅತ್ಯುತ್ತಮ ಪ್ರಯತ್ನಗಳನ್ನು ಗುರುತಿಸುವ ಕೆ.ಎಸ್.ಟಿ.ಎ ವಾರ್ಷಿಕ ಬಹುಮಾನ ಮತ್ತು ಪ್ರಶಸ್ತಿ ನೀಡಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಲ್ಲಿನ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಪಶು ಸಂಗೋಪನಾ ಚಟುವಟಿಕೆಗಳ ತರಬೇತಿ ಆಯೋಜಿಸಲಾಗಿದೆ.
ಕನ್ನಡ ರಾಜ್ಯೋತ್ಸವ ನಿಮಿತ್ತ್ಯ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ (ಸಿರಿಗೆರೆ) ಹಾಗೂ ಕನ್ನಡ ಸಾಹಿತ್ಯ ಪರಿಷತ್ತು (ಬೆಂಗಳೂರು) ಇವರ ಸಂಯುಕ್ತಾಶ್ರಯದಲ್ಲಿ ಸಿರಿಗೆರೆಯ ಶ್ರೀ ಗುರುಶಾಂತೇಶ್ವರ ಮಂಟಪದಲ್ಲಿ `ತರಳಬಾಳು ನುಡಿಹಬ್ಬ-2024′ ಅನ್ನು ನಾಡಿದ್ದು ದಿನಾಂಕ 8, 9 ಹಾಗೂ 10 ರಂದು ಹಮ್ಮಿಕೊಳ್ಳಲಾಗಿದೆ
ಇಲ್ಲಿನ ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಇದೇ ದಿನಾಂಕ 8 ರಂದು ಮಧ್ಯಾಹ್ನ 3 ಗಂಟೆಗೆ ಚುನಾವಣಾ ಸಭೆಯನ್ನು ಆಯೋಜಿಸಲಾಗಿದೆ. ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ಅಮ್ಲಾನ್ ಆದಿತ್ಯ ಬಿಸ್ವಾಸ್ ಅಧ್ಯಕ್ಷತೆ ವಹಿಸುವರು.
ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಗುರು ಶಾಂತೇಶ್ವರ ದಾಸೋಹ ಮಂಟಪದಲ್ಲಿ ಕನ್ನಡ ರಾಜ್ಯೋತ್ಸವದ ನಿಮಿತ್ತ ಇದೇ ದಿನಾಂಕ 8ರಿಂದ 10ರ ವರೆಗೆ `ತರಳಬಾಳು ನುಡಿ ಹಬ್ಬ-2024′ ಕಾರ್ಯಕ್ರಮ ನಡೆಯಲಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಬಿ. ವಾಮದೇವಪ್ಪ ತಿಳಿಸಿದರು.