Category: ಸುದ್ದಿ ಸಂಗ್ರಹ

Home ಸುದ್ದಿ ಸಂಗ್ರಹ

ಪ್ರಶಸ್ತಿ ಪ್ರದಾನ

ಶ್ರೀಮತಿ ಪ್ರೇಮಾ ಅರುಣಾಚಲ ಎನ್. ರೇವಣಕರ್ ಪ್ರತಿಷ್ಠಾನ ದಿಂದ    ಶ್ರೀಮತಿ ಗೌರಮ್ಮ ನರಹರಿ ಶೇಟ್ ಸಭಾಂ ಗಣದಲ್ಲಿ ಇಂದು ನಡೆಯಲಿರುವ ಸಮಾರಂಭದಲ್ಲಿ ನಲ್ಲೂರು ಲಕ್ಷ್ಮ ಣ್‍ರಾವ್ ನರಹರಿ ರೇವಣಕ ರ್‍ರವರಿಗೆ `ಸಾಂಸ್ಕೃತಿಕ ಸಮಾಜ ಸೇವಾ ರತ್ನ’ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಗುವುದು. 

9 ರಂದು ದೊಡ್ಡಬಾತಿ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಉದ್ಘಾಟನೆ

ತಾಲ್ಲೂಕಿನ ದೊಡ್ಡಬಾತಿ ಗ್ರಾಮದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಉದ್ಘಾಟನಾ‌ ಕಾರ್ಯಕ್ರಮವನ್ನು ಇದೇ ದಿನಾಂಕ 9ರಂದು ಹಮ್ಮಿಕೊಳ್ಳಲಾಗಿದೆ.

ನಗರದಲ್ಲಿ ನಾಳೆ ವೃತ್ತಿರಂಗ ಗೀತೆಗಳ ಕಲಿಕಾ ಕಾರ್ಯಾಗಾರ ಸಮಾರೋಪ

ವೃತ್ತಿ ರಂಗಭೂಮಿ ರಂಗಾಯಣದ ವತಿಯಿಂದ ನಗರದ ಜಯದೇವ ವೃತ್ತದ ಶಿವಯೋಗ ಮಂದಿರದಲ್ಲಿ ನಾಡಿದ್ದು ದಿನಾಂಕ 7ರ ಗುರುವಾರ ಸಂಜೆ 6ಕ್ಕೆ ರಂಗ ಸಂಗೀತ : ವೃತ್ತಿರಂಗ ಗೀತೆಗಳ ಕಲಿಕಾ ಕಾರ್ಯಾಗಾರದ ಸಮಾರೋಪ ಮತ್ತು ಅಭಿನಯ ಸಂಗೀತ ಪ್ರದರ್ಶನ ನಡೆಯಲಿದೆ

ಹರಿಹರದಲ್ಲಿ ನಾಡಿದ್ದು ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತಿ

ಹರಿಹರ : ನಗರದಲ್ಲಿ ನಾಡಿದ್ದು ದಿನಾಂಕ  8 ರ ಶುಕ್ರವಾರ ಎಸ್‌.ಎಸ್.ಕೆ. ಸಮಾಜದ ವತಿಯಿಂದ ಶ್ರೀ ಸಹಸ್ರಾರ್ಜುನ ಮಹಾರಾಜರ ಜಯಂತಿಯನ್ನು ಆಚರಣೆ ಮಾಡಲಾಗುವುದು ಎಂದು ಎಸ್.ಎಸ್.ಕೆ. ಸಮಾಜದ ಅಧ್ಯಕ್ಷ ಎನ್. ಮೋಹನ್ ಖಿರೋಜಿ ತಿಳಿಸಿದ್ದಾರೆ.

ಜಗಳೂರು ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ

ಜಗಳೂರು ಪಟ್ಟಣ ಪಂಚಾಯ್ತಿಯ 9ನೇ ವಾರ್ಡ್‍ಗೆ ಉಪ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರ ಸ್ವಾಮಿ ವೇಳಾ ಪಟ್ಟಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದ್ದಾರೆ.

ನಗರದಲ್ಲಿ ಮಹಿಳೆಯ ಶವ ಪತ್ತೆ

ಇಲ್ಲಿನ ವಿನೋಬ ನಗರದ 4ನೇ ಮುಖ್ಯರಸ್ತೆ,  3ನೇ ತಿರುವಿನಲ್ಲಿ ಮಹಿಳೆಯ ಶವ ಮೊನ್ನೆ ಪತ್ತೆಯಾಗಿದೆ. ಸುಮಾರು 33 ವರ್ಷ ವಯಸ್ಸಿನ ಈಕೆಯ ಹೆಸರನ್ನು ಅನುಶ್ರೀ ಎಂದು ಗುರುತಿಸಲಾಗಿದೆ.

ಮಾಜಿ ಸೈನಿಕರಿಗೆ ವಿವಿಧ ಉದ್ಯೋಗ ತರಬೇತಿಗೆ ಅರ್ಜಿ

ಭಾರತೀಯ ಸೇನೆಯ ನಿವೃತ್ತಿನಂಚಿನಲ್ಲಿರುವ ಸೈನಿಕರು ಹಾಗೂ ಮಾಜಿ ಸೈನಿಕರುಗಳಿಗೆ ಕೇಂದ್ರ, ರಾಜ್ಯ ಉದ್ಯೋಗ ಮತ್ತು ಬ್ಯಾಂಕ್ ಉದ್ಯೋಗ ನೇಮಕಾತಿಗಾಗಿ ಆನ್‍ಲೈನ್ ತರಬೇತಿಗಳನ್ನು ಆಯೋಜಿಸಲಾಗಿದೆ.

16ಕ್ಕೆ ನಗರದಲ್ಲಿ ಭಗವದ್ಗೀತೆ ಸ್ಪರ್ಧೆ

ನಗರದ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಹಿಳಾ ವಿಭಾಗದಿಂದ ಗೀತಾ ಜಯಂತಿ ಅಂಗವಾಗಿ ಭಗವದ್ಗೀತೆ ಸ್ಪರ್ಧೆಯನ್ನು ಇದೇ ದಿನಾಂಕ 16 ರ ಶನಿವಾರ ಬೆಳಿಗ್ಗೆ 12 ಗಂಟೆಗೆ ನಗರದ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಏರ್ಪಡಿಸಲಾಗಿದೆ.

ಇಂದು ದಿವ್ಯಾಂಗರ ವೈದ್ಯಕೀಯ ತಪಾಸಣೆ, ಸಾಧನಾ ಸಲಕರಣೆಗಳ ಮೌಲ್ಯಾಂಕನ ಶಿಬಿರ

 ಶಾಲಾ ಸಾಕ್ಷರತಾ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ಇಂದು ಬೆಳಿಗ್ಗೆ 9.30ಕ್ಕೆ ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ವಿಕಲ ಚೇತನ ಮಕ್ಕಳ ವೈದ್ಯಕೀಯ ತಪಾಸಣೆ ಮತ್ತು ಸಾಧನ ಸಲಕರಣೆಗಳ ಮೌಲ್ಯಾಂಕನ ಶಿಬಿರವನ್ನು ಆಯೋಜಿಸಲಾಗಿದೆ. 

ಮಾಜಿ ಸೈನಿಕರ ಮಕ್ಕಳಿಗೆ ಶಿಷ್ಯವೇತನ, ಆರ್ಥಿಕ ಅನುದಾನಕ್ಕಾಗಿ ಅರ್ಜಿ

ಇಂಜಿನಿಯರಿಂಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ ಪಡೆದು ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಪ್ರಧಾನ ಮಂತ್ರಿ ಶಿಷ್ಯ ವೇತನ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.

ದಾವಿವಿಯಲ್ಲಿ ಇಂದು ಗಣರಾಜ್ಯೋತ್ಸವ ಪೂರ್ವ ಪರೇಡ್ ಶಿಬಿರ

ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ,  ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ ಹಾಗೂ ದಾವಣಗೆರೆ ವಿಶ್ವ ವಿದ್ಯಾ ನಿಲಯದ ಸಹಯೋಗದೊಂದಿಗೆ ಇಂದಿನಿಂದ ಇದೇ ದಿನಾಂಕ 14 ರವರೆಗೆ ಎನ್‌ಎಸ್‌ಎಸ್ ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಶಿಬಿರವನ್ನು ಆಯೋಜಿಸಲಾಗಿದೆ.

error: Content is protected !!