ಬುಡಕಟ್ಟು ಯೋಜನೆಯಲ್ಲಿ ಶೇ.100 ಪ್ರಗತಿ ಸಾಧಿಸಲು ಸೂಚನೆ
ದಾವಣಗೆರೆ : ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು
ದಾವಣಗೆರೆ : ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟು ಯೋಜನೆಯಲ್ಲಿ ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಿದರು
ದಾವಣಗೆರೆಯ ಆಂಜನೇಯ ಬಡಾವಣೆಯ 19 ನೇ ಕ್ರಾಸ್ ಬಿಐಇಟಿ ಕಾಂಪೌಂಡ್ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನ ಅಭಿವೃದ್ಧಿ ಸಮಿತಿ ವತಿಯಿಂದ ಶ್ರೀ ಬನ್ನಿ ಮಹಾಂಕಾಳಿ ದೇವಿಯ 11 ನೇ ವರ್ಷದ ಶರನ್ನವರಾತ್ರಿ ಪೂಜಾ ಮಹೋತ್ಸವದ ಅಂಗವಾಗಿ ಇಂದು ದೇವಿಗೆ ಶ್ರೀ ಕಟೀಲು ದುರ್ಗಾ ಪರಮೇಶ್ವರಿ ದೇವಿ ಅಲಂಕಾರ ಮಾಡಲಾಗುವುದು.
ದಾವಣಗೆರೆ ಜಯದೇವ ವೃತ್ತದ ಬಳಿ ಇರುವ ಶ್ರೀ ಶಂಕರ ಮಠದಲ್ಲಿ ಶರನ್ನವರಾತ್ರಿಯ ಪ್ರಯುಕ್ತ ಬೆಳಿಗ್ಗೆ 8.30 ಕ್ಕೆ ಸ್ಕಂದಮಾತಾ ಆರಾಧನೆ, ಚಂಡಿಕಾ ಹೋಮ, ಸುಮಂಗಲಿ ಕನ್ನಿಕಾ ಪೂಜೆ, ಮಧ್ಯಾಹ್ನ 12.30 ಕ್ಕೆ ಪೂರ್ಣಾಹುತಿ, ಪ್ರಸಾದ ವಿನಿಯೋಗವಿರುತ್ತದೆ.
ದಾವಣಗೆರೆಯ ದಾವಲ್ ಪೇಟೆ ಶ್ರೀ ಚೌಡೇಶ್ವರಿ ದೇವಸ್ಥಾನದಲ್ಲಿ ದಸರಾ ಮಹೋತ್ಸವದ ಅಂಗವಾಗಿ ಇಂದು ಸಂತಾನ ಲಕ್ಷ್ಮಿ ಅಲಂಕಾರ ಮಾಡಲಾಗುವುದು.
ಪಟ್ಟಣದ ಹೊರವಲಯದ ಲ್ಲಿರುವ ಶ್ರೀ ವೀರಭದ್ರೇಶ್ವರ ದೇವ ಸ್ಥಾನದ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 9.30ಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ತಾ. ಮಟ್ಟದ ಮಹಿಳಾ ವಿಚಾರ ಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ
ವಿಜಯ ದಶಮಿ ಕಾರ್ಯಕ್ರಮದ ಅಂಗ ವಾಗಿ ಇಂದು ಸಂಜೆ 6 ರಿಂದ 8 ರವರೆಗೆ ಪಿ.ಬಿ. ರಸ್ತೆಯ ಶ್ರೀ ಬೀರಲಿಂಗೇಶ್ವರ ಮೈದಾನದಲ್ಲಿ ಶ್ರೀ ವೀರೇಶ್ವರ ಪುಣ್ಯಾಶ್ರಮದ ಶ್ರೀ ಗುರು ಪ. ಪಂಚಾಕ್ಷರ ಕವಿ ಗವಾಯಿಗಳವರ ಅಂಧರ ಶಿಕ್ಷಣ ಸಮಿತಿ ವಿದ್ಯಾರ್ಥಿಗಳಿಂದ ಸಂಗೀತ ಮತ್ತು ತಬಲಾ ವಾದ್ಯ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಗಳೂರು ಪ್ರಾದೇಶಿಕ ಅರಣ್ಯ ವಿಭಾಗ, ರಂಗಯ್ಯನ ದುರ್ಗ ಕೊಂಡಕುರಿ ಅಭಯಾರಣ್ಯ ವತಿಯಿಂದ ವನ್ಯಜೀವಿ ಸಪ್ತಾಹ ಕಾರ್ಯಕ್ರಮ ಮತ್ತು ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಅರಣ್ಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಶಿಧರ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ಗ್ರಾಮ ಘಟಕಗಳ ಉದ್ಘಾಟನಾ ಸಮಾರಂಭವು ಇಂದು ಮಧ್ಯಾಹ್ನ 12 ಗಂಟೆಗೆ ತಾಲ್ಲೂಕಿನ ಅಗಸನಕಟ್ಟೆ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ರಾಣೇಬೆನ್ನೂರು : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಟೈಪಿಂಗ್ ಮತ್ತು ಸ್ಟೆನೋ ಫಲಿತಾಂಶ ಪ್ರಕಟವಾಗಿದ್ದು ರಾಣೇಬೆನ್ನೂರು ಮಮತಾ ವಾಣಿಜ್ಯ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳು ಶೇ. 80ರಷ್ಟು ಉತ್ತೀರ್ಣರಾಗಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿ ರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ ಮತ್ತು ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ನಾಡ ಹಬ್ಬ ದಸರಾ ಪ್ರಯುಕ್ತ ರಾಣೇಬೆನ್ನೂರಿನ ಕರ್ನಾಟಕ ಸಂಘದ ವತಿಯಿಂದ ನಗರದ ಆಲೂರು ವೆಂಕಟರಾವ್ ರಂಗಮಂದಿರದ ಕಾಳಿದಾಸ ನಾಯ್ಕ ವೇದಿಕೆಯಲ್ಲಿ ಇಂದು ಸಂಜೆ 6.30 ಕ್ಕೆ ಅಶ್ವಿನಿ ಎನ್. ಮೈಸೂರು ಇವರಿಂದ `ವೀಣಾ ವಾದನ’ ಕಾರ್ಯಕ್ರಮ ನಡೆಯಲಿದೆ.
ಹರಿಹರ : ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘದ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಸೋಮನಗೌಡ ಪಾಟೀಲ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗಿರುವ ಪರಮೇಶ್ವರ ಪಟ್ಟಣ್ಣ ಶೆಟ್ಟಿ ಅವರ ಪದಗ್ರಹಣ ಕಾರ್ಯಕ್ರಮವನ್ನು ಅ.6 ರಂದು ಬೆಳಗ್ಗೆ 11ಕ್ಕೆ ನಗರದ ವೀರಶೈವ ಲಿಂಗಾಯತ ಪಂಚಮಸಾಲಿ ಜಗದ್ಗುರು ಪೀಠದಲ್ಲಿ ಹಮ್ಮಿಕೊಳ್ಳಲಾಗಿದೆ.