ನಗರದಲ್ಲಿಂದು ಪೆರಿಯಾರ್ ಜನ್ಮದಿನೋತ್ಸವ
ಪೆರಿಯಾರ್ ರಾಮಸ್ವಾಮಿ ನಾಯಕರ ವಿಚಾರ ವೇದಿಕೆಯ ಜಿಲ್ಲಾ ಘಟಕದಿಂದ ಪೆರಿಯಾರ್ ರಾಮಸ್ವಾಮಿ ನಾಯಕರ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11 ಗಂಟೆಗೆ ರೋಟರಿ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಪೆರಿಯಾರ್ ರಾಮಸ್ವಾಮಿ ನಾಯಕರ ವಿಚಾರ ವೇದಿಕೆಯ ಜಿಲ್ಲಾ ಘಟಕದಿಂದ ಪೆರಿಯಾರ್ ರಾಮಸ್ವಾಮಿ ನಾಯಕರ ಜನ್ಮದಿನೋತ್ಸವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11 ಗಂಟೆಗೆ ರೋಟರಿ ಬಾಲ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ವಿಶಾಲ ಕರ್ನಾಟಕ ಪಟಾಕಿ ವರ್ತಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇಂದು ಬೆಳಿಗ್ಗೆ 10 ಗಂಟೆಗೆ ಎಸ್.ಬಿ.ಸಿ. (ಅಥಣಿ) ಕಾಲೇಜು ಸಭಾಂಗಣದಲ್ಲಿ ಜಿಲ್ಲಾ ಪಟಾಕಿ ವರ್ತಕರಿಗೆ ಅಗ್ನಿಶಾಮಕ ದಳ ಇಲಾಖೆ ವತಿಯಿಂದ ಕಾರ್ಯಾಗಾರ ಏರ್ಪಡಿಸಲಾಗಿದೆ.
ಸಿಎಂ ಸಿದ್ದರಾಮಯ್ಯನವರು ಅಧಿಕಾರದಲ್ಲಿದ್ದರೇ ಮುಡಾ ತನಿಖೆಯ ಮೇಲೆ ರಾಜಕೀಯ ಪ್ರಭಾವ ಬೀಳಲಿದೆ. ಹಾಗಾಗಿ ಅವರು ಸಿಎಂ ಸ್ಥಾನಕ್ಕೆ ಕೂಡಲೇ ರಾಜಿನಾಮೆ ನೀಡಬೇಕು ಎಂದು ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಒತ್ತಾಯಿಸಿದರು.
ದೂಡಾ ಮಾಜಿ ಅಧ್ಯಕ್ಷರೂ, ಜನತಾ ಪರಿವಾರದ ಹಿರಿಯ ಮುಖಂಡರೂ ಆಗಿದ್ದ ಟಿ. ದಾಸಕರಿಯಪ್ಪ ಅವರ ನಿಧನಕ್ಕೆ ಜಿಲ್ಲಾ ಜೆಡಿಎಸ್ ಮುಖಂಡ ಎಂ.ಎನ್. ನಾಗರಾಜ್ ಸಂತಾಪ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಇಂದು ಬೆಳಿಗ್ಗೆ 10.30 ಕ್ಕೆ ಮಾಗನೂರು ಬಸಪ್ಪ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ-1 ರಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.
ಖಾಲಿ ಇರುವ 16 ಅಂಗನವಾಡಿ ಕಾರ್ಯಕರ್ತೆ ಹಾಗೂ 52 ಅಂಗನವಾಡಿ ಸಹಾ ಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿ ಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನ ಮೆಟ್ರಿಕ್ ನಂತರದ ಕೋರ್ಸುಗಳಾದ ಪಿ.ಯು.ಸಿ. ಮತ್ತು ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಪದವಿ ಕೋರ್ಸುಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಅಕ್ಟೋಬರ್ 15 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಸಮಾಜ ಕಲ್ಯಾಣ ಇಲಾಖೆಯಿಂದ ನಡೆಸ ಲಾಗುವ ಎಂ.ಸಿ.ಸಿ ಬಿ. ಬ್ಲಾಕ್‍ನಲ್ಲಿನ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲುಗಳಿಗೆ ಕಲ್ಲು ಎಸೆಯುವುದು, ರೈಲ್ವೆ ಹಳಿಯ ಮೇಲೆ ಕಲ್ಲು ಅಥವಾ ಬೇರೆ ವಸ್ತುಗಳನ್ನು ಇಡುವುದು ತಪ್ಪು ಎಂದು ರೈಲ್ವೇ ರಕ್ಷಣಾ ದಳದ ಇನ್ಸ್‍ಪೆಕ್ಟರ್ ಬಿ.ಎನ್.ಕುಬೇರಪ್ಪ ತಿಳಿಸಿದರು.
ಹರಿಹರ : ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಇಲಾಖೆ ವತಿಯಿಂದ ಬೀಡಿ ಹಾಗೂ ಗಣಿ ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪಂಚಮಸಾಲಿ ಸಮಾಜದ ನೂತನ ರಾಜ್ಯಾಧ್ಯಕ್ಷ ಸೋಮನಗೌಡ ಪಾಟೀಲ್ ಇಂದು ಬೆಳಿಗ್ಗೆ 9 ಕ್ಕೆ ಹೊನ್ನಾಳಿಗೆ ಆಗಮಿಸಲಿದ್ದಾರೆ.
ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈಚೆಗೆ ಜರುಗಿದ ತಾಲ್ಲೂಕು ಮಟ್ಟದ ಬಾಲಕಿಯರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ನಗರದ ವಿಶ್ವಚೇತನ ವಿದ್ಯಾನಿಕೇತನ ವಸತಿಯುತ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.