24 ಗಂಟೆಯೊಳಗೆ ಬಸ್ ವ್ಯವಸ್ಥೆ ಕಲ್ಪಿಸಿದ ಶಾಸಕ ಬಸವರಾಜು
ಚನ್ನಗಿರಿ : ತಾಲ್ಲೂಕಿನ ಪುಟ್ಟಹಳ್ಳಿಗೆ ಶಾಸಕ ಬಸವರಾಜು ವಿ. ಶಿವಗಂಗಾ ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಿದರು. ತಾಲ್ಲೂಕಿನ ಹೊನ್ನೇಮರದಹಳ್ಳಿ ಹಾಗೂ ಬೊಮ್ಮೇನಹಳ್ಳಿ ಗ್ರಾಮಕ್ಕೆ ನಿನ್ನೆ ಭೇಟಿ ನೀಡಿದ ಶಾಸಕ ಬಸವರಾಜು ವಿ. ಶಿವಗಂಗಾ ಅವರಿಗೆ ಗ್ರಾಮಸ್ಥರು ಸರ್ಕಾರಿ ಬಸ್ ವ್ಯವಸ್ಥೆ ಕಲ್ಪಿಸಬೇಕೆಂದು ಮನವಿ ಮಾಡಿದರು.