Category: Davanagere

ದಾವಣಗೆರೆ – ಹರಿಹರ ಅರ್ಬನ್ ಬ್ಯಾಂಕಿನಿಂದ ಡಾ. ರಾಜೇಶ್‌ಗೆ ಸನ್ಮಾನ

ಕೊರೊನಾದ ಸಂದಿಗ್ದ ಸಂದರ್ಭದಲ್ಲಿ ಸೋಂಕಿತರಿಗೆ ಚಿಕಿತ್ಸೆ ನೀಡುವಲ್ಲಿ ಶ್ರಮಿಸಿದ ಅನೇಕ ವೈದ್ಯರುಗಳ ಪೈಕಿ ಒಬ್ಬರಾಗಿರುವ ಶ್ವಾಸಕೋಶ ತಜ್ಞ ಡಾ. ರಾಜೇಶ್ ಅವರನ್ನು ದಾವಣಗೆರೆ – ಹರಿಹರ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿನಿಂದ ಗೌರವಿಸಲಾ ಯಿತು. 

ಸಿಜಿ ಆಸ್ಪತ್ರೆಯಲ್ಲಿ ನಾಗರಹಾವು ಪ್ರತ್ಯಕ್ಷ

ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿ ಬೆಳ್ಳಂಬೆಳಿಗ್ಗೆ ನಾಗರಹಾವು ಪ್ರತ್ಯಕ್ಷ್ಯವಾಗಿದ್ದು, ಆಸ್ಪತ್ರೆಯ ತ್ಯಾಜ್ಯ ವಿಲೇವಾರಿ ಮಾಡುತ್ತಿದ್ದ ಕಾರ್ಮಿಕರು ಆತಂಕಗೊಂಡ ಘಟನೆ ಇಂದು ನಡೆದಿದೆ. 

ಬೋರ್ ನೀರಿನ ಪೈಪ್‌ಲೈನ್ ವ್ಯವಸ್ಥೆಗೆ ಆಗ್ರಹ

ಇಲ್ಲಿನ ಶಾಂತಿನಗರದ 4ನೇ ಕ್ರಾಸ್‌ ಹಾಗೂ ಕುಂದುವಾಡ ಮುಖ್ಯ ರಸ್ತೆ ಈ ಎರಡೂ ಬೀದಿಗಳಿಗೆ ಬೋರ್ ನೀರಿನ ಪೈಪ್‌ಲೈನ್ ಶಾಶ್ವತ ವ್ಯವಸ್ಥೆ ಮಾಡುವಂತೆ ಆಗ್ರಹಿಸಿ, ಸೋಷಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ ದಾವಣಗೆರೆ ಶಾಂತಿನಗರ ಸ್ಥಳೀಯ ಸಮಿತಿ ನೇತೃತ್ವದಲ್ಲಿ ನಾಗರಿಕರು ಶಾಂತಿನಗರದಲ್ಲಿ ಇಂದು ಸಂಜೆ ಪ್ರತಿಭಟನೆ ನಡೆಸಿದರು.

ಬೆಲೆ ಏರಿಕೆ ಖಂಡಿಸಿ ಎಸ್‌ಯುಸಿಐ ಪ್ರತಿಭಟನೆ

ಇಂಧನಗಳ ಬೆಲೆ ಸೇರಿದಂತೆ ಎಲ್‍ಪಿಜಿ ಸಿಲಿಂಡರ್, ಅಡುಗೆ ಎಣ್ಣೆ ಹಾಗೂ ವಿದ್ಯುತ್ ದರ ಏರಿಕೆ ವಿರೋಧಿಸಿ ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಜಿಲ್ಲಾ ಸಂಘಟನಾ ಸಮಿತಿಯಿಂದ ನಗರದ ಗಾಂಧಿ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು.

ಜನತೆಯನ್ನು ಸಂಕಷ್ಟಕ್ಕೆ ದೂಡಿ ಲಾಭ ಪಡೆಯುತ್ತಿರುವ ಸರ್ಕಾರ

ಇಂಧನಗಳು ಮತ್ತು ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಅಖಿಲ ಭಾರತ ಯುವಜನ ಫೆಡರೇಷನ್ ಜಿಲ್ಲಾ ಸಮಿತಿಯಿಂದ ನಗರದ ಉಪವಿಭಾಗಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಪ್ರತಿಭಟನೆ ನಡೆಸಲಾಯಿತು. 

ಶಾಮನೂರು ಕುಟುಂಬದಿಂದ ಸಿದ್ದವೀರಪ್ಪ ಬಡಾವಣೆಯಲ್ಲಿ ಲಸಿಕಾ ಶಿಬಿರ

ಹಿರಿಯ ಶಾಸಕ ಡಾ|| ಶಾಮನೂರು ಶಿವಶಂಕರಪ್ಪ ಮತ್ತು ಮಾಜಿ ಸಚಿವ ಶಾಮನೂರು ಮಲ್ಲಿಕಾರ್ಜುನ್ ಅವರುಗಳು  ನಾಗರಿಕರಿಗಾಗಿ ಹಮ್ಮಿಕೊಂಡಿರುವ ಉಚಿತ ಲಸಿಕಾ ಶಿಬಿರ ಕಾರ್ಯಕ್ರಮ ಇಂದೂ ಸಹ ಮುಂದುವರೆದಿದ್ದು, ನಾಗರಿಕರು ಉಚಿತ ಲಸಿಕೆಯನ್ನು ಪಡೆದರು.

ಯೋಧರನ್ನು ಗೌರವಿಸಿದ ರೋಟರಿ

ರೋಟರಿ ಕ್ಲಬ್ ದಾವಣಗೆರೆ ಎರಡು ನೂರು ಜನರಿಗೆ ಕೊರೊನಾ ಲಸಿಕೆ ನೀಡಲಾಯಿತು. ಈ ಸಂದರ್ಭದಲ್ಲಿ ಕೊರೊನಾ ಯೋಧರಿಗೆ ಗೌರವ ಸಮರ್ಪಣೆ ಕಾರ್ಯಕ್ರಮ ನಡೆಯಿತು.

ಹುತಾತ್ಮರ ಕುಟುಂಬಗಳಿಗೆ ಗೌರವ ಧನ ನೀಡಿ, ಜನ್ಮ ದಿನಾಚರಣೆ

ಜಾಲಿನಗರದ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಜಿ.ಎಂ.ಸಿದ್ದೇಶ್ವರ, ಬಿ.ಜಿ.ಅಜಯ್‌ಕುಮಾರ್ ಅಭಿಮಾನಿಗಳ ಬಳಗದ ವತಿಯಿಂದ ಸಂಸದ ಜಿ.ಎಂ.ಸಿದ್ದೇಶ್ವರ, ಮಾಜಿ ಮಹಾಪೌರ ಬಿ.ಜಿ.ಅಜಯ್‌ಕುಮಾರ್ ಹುಟ್ಟುಹಬ್ಬವನ್ನು ವಿನೂತನವಾಗಿ ಆಚರಿಸಲಾಯಿತು.

ಆಲೂರು ಹಟ್ಟಿಯಲ್ಲಿ ಲಸಿಕಾ ಜಾಗೃತಿ

ಮಾಯಕೊಂಡ ಕ್ಷೇತ್ರ ಆಲೂರು ಹಟ್ಟಿಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಜಿಲ್ಲಾ ಕಾಂಗ್ರೆಸ್ ಸಮಿತಿ ಪರಿಶಿಷ್ಟ  ಜಾತಿ ಘಟಕದ ಅಧ್ಯಕ್ಷ ಬಿ.ಹೆಚ್. ವೀರಭದ್ರಪ್ಪ ಕಾರ್ಯಕ್ರಮ ಉದ್ಘಾಟಿಸಿದರು.  

ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದಂತೆ ಎಐಡಿಎಸ್‌ಓ ಆಗ್ರಹ

ಪದವಿ, ಸ್ನಾತಕೋತ್ತರ ಪದವಿ, ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಫಾರ್ಮಸಿ ವಿದ್ಯಾರ್ಥಿಗಳಿಗೆ ಹಿಂದಿನ ಸೆಮಿಸ್ಟರ್ ಪರೀಕ್ಷೆಗಳನ್ನು ನಡೆಸದಂತೆ ಆಗ್ರಹಿಸಿ, ‌ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಕಾಲೇಜು ವಿದ್ಯಾರ್ಥಿಗಳು ನಗರದ ಜಯದೇವ ವೃತ್ತದಲ್ಲಿ ಇಂದು ಪ್ರತಿಭಟನೆ ನಡೆಸಿ ಉಪಕುಲಸಚಿವರಿಗೆ ಮನವಿ ಮಾಡಿದರು

ಶಿರಮಗೊಂಡನಹಳ್ಳಿಯಲ್ಲಿ ಗಂಗಾ ಜಯಂತಿ

ಶಿರಮಗೊಂಡನಹಳ್ಳಿಯಲ್ಲಿ ಮೊನ್ನೆ ಗಂಗಾ ಜಯಂತಿಯನ್ನು ಆಚರಿಸುವುದರ ಮೂಲಕ ಈ ವರ್ಷ ಮಳೆ ಸಮೃದ್ಧಿಯಾಗಿ ರೈತರ ಬಾಳು ಹಸನಾಗಲೆಂದು ಪ್ರಾರ್ಥಿಸಲಾಯಿತು.

error: Content is protected !!