
ತಿಪ್ಪನಾಯಕನಹಳ್ಳಿ ಕೆರೆಗೆ ಬಾಗಿನ ಅರ್ಪಣೆ
ಹರಪನಹಳ್ಳಿ : ತಾಲ್ಲೂಕಿನ ತಿಪ್ಪನಾಯಕನಹಳ್ಳಿ ಕೆರೆಗೆ ತುಂಗಭದ್ರಾ ನದಿ ನೀರು ಸರಬರಾಜು ಪ್ರಥಮ ಬಾರಿಗೆ ಆಯಿತು. ಕೆರೆಗೆ ಬಾಗಿನ ಅರ್ಪಣೆ ಮಾಡುವುದರ ಮೂಲಕ ಪೂಜೆ ಸಲ್ಲಿಸಲಾಯಿತು.
ಹರಪನಹಳ್ಳಿ : ತಾಲ್ಲೂಕಿನ ತಿಪ್ಪನಾಯಕನಹಳ್ಳಿ ಕೆರೆಗೆ ತುಂಗಭದ್ರಾ ನದಿ ನೀರು ಸರಬರಾಜು ಪ್ರಥಮ ಬಾರಿಗೆ ಆಯಿತು. ಕೆರೆಗೆ ಬಾಗಿನ ಅರ್ಪಣೆ ಮಾಡುವುದರ ಮೂಲಕ ಪೂಜೆ ಸಲ್ಲಿಸಲಾಯಿತು.
ಹರಪನಹಳ್ಳಿ : ಅರಣ್ಯ ಸಂಪತ್ತು ಉಳಿದರೆ ಮಾತ್ರ ಮುಂದಿನ ಜೀವ ಸಂಕುಲವನ್ನು ಕಾಪಾಡಿಕೊಳ್ಳಲು ಸಾಧ್ಯ ಎಂದು ನಿರ್ಗಮಿತ ವಲಯ ಅರಣ್ಯಾಧಿಕಾರಿ ಕೆ.ಮಲ್ಲಪ್ಪ ಹೇಳಿದರು.
ಹರಪನಹಳ್ಳಿ : ಸರ್ಕಾರಿ ಆಯುರ್ವೇದ ಆಸ್ಪತ್ರೆ ವತಿಯಿಂದ ಪಟ್ಟಣದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆಯಲ್ಲಿ ಡೆಂಗ್ಯೂ ನಿಯಂತ್ರಣ ಕುರಿತು ಮಕ್ಕಳಿಗೆ ಜಾಗೃತಿ ಮೂಡಿಸಲಾಯಿತು.
ಹರಪನಹಳ್ಳಿ : ಪಟ್ಟಣದ ಸರ್ಕಾರಿ ನೌಕರರ ಸಭಾ ಭವನದಲ್ಲಿ ನಾಡಿದ್ದು 20ನೇ ಶನಿವಾರ ಬೆಳಿಗ್ಗೆ 11 ಗಂಟೆಗೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಸಾಮಾನ್ಯ ಸಭೆ ಕರೆಯಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಅಧ್ಯಕ್ಷ ಕೆ.ಉಚ್ಚೆಂಗೆಪ್ಪ ತಿಳಿಸಿದ್ದಾರೆ.
ಹರಪನಹಳ್ಳಿ : ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಣ್ಣೆತ್ತಿನ ಅಮಾವಾಸ್ಯೆಯ ನಂತರ ತಾಲ್ಲೂಕಿನ ವಿವಿಧ ತಾಂಡಾಗಳಲ್ಲಿ ಸೀತ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಬಳಿಕ ಹರಪನಹಳ್ಳಿ ಪಟ್ಟಣದಲ್ಲಿರುವ ಬಂಜಾರ್ ಸಮುದಾಯದ ಮುಖಂಡರ ನೇತೃತ್ವದಲ್ಲಿ ಸೀತ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಹರಪನಹಳ್ಳಿ : ಮುಸ್ಲಿಂ ಸಮುದಾಯದಲ್ಲಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವ ಹಬ್ಬಗಳಲ್ಲಿ ಮೊಹರಂ ಕೂಡ ಒಂದು. ಈ ಹಬ್ಬದ ಅಂಗವಾಗಿ ಹರಪನಹಳ್ಳಿಯಲ್ಲಿ ಇಂದು ಏರ್ಪಾಡಾಗಿದ್ದ ಬೃಹತ್ ಮೆರವಣಿಗೆಯು ರಾಜಬೀದಿಗಳಲ್ಲಿ ಸಂಚರಿಸಿತು.
ಹರಪನಹಳ್ಳಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಪಟ್ಟಣದ ಆಚಾರ್ಯ ಬಡಾವಣೆಯಲ್ಲಿ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಶಾಸಕರಾದ ಎಂ.ಪಿ.ಲತಾ ಮಲ್ಲಿಕಾರ್ಜುನ್ ಉದ್ಘಾಟಿಸಿದರು
ಹರಪನಹಳ್ಳಿ : ಬಿಜೆಪಿ ಸಹಕಾರ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯರಾಗಿ ಬಿಜೆಪಿಯ ಜೆ. ಓಂಕಾರ ಗೌಡ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ತಾಲ್ಲೂಕಿನಲ್ಲಿ ಡೆಂಘೀ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೊಸಂಬೆ, ಆರೋಗ್ಯ ಸಿಬ್ಬಂದಿಗೆ ಸೂಚನೆ ನೀಡಿದರು.
ಹರಪನಹಳ್ಳಿ : ಕೃಷಿ ತಂತ್ರಜ್ಞರ ಸಂಸ್ಥೆ ವಿಜಯನಗರ ಜಿಲ್ಲೆ ಇವರ ಸಹಯೋಗದಲ್ಲಿ `ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವಾ ಡಿಪ್ಲೋಮಾ ಕೋರ್ಸ್’ ಪ್ರಮಾಣ ಪತ್ರ ವಿತರಣಾ ಕಾರ್ಯಕ್ರಮದಲ್ಲಿ ಅರಸಿಕೇರಿಯ ವೈ.ಎ ಲಕ್ಷ್ಮೀದೇವಿ ಅಣ್ಣಪ್ಪ ಅವರು ತೃತೀಯ ಸ್ಥಾನ ಪಡೆದು ಪ್ರಮಾಣ ಪತ್ರ ಸ್ವೀಕರಿಸಿದರು.
ಹರಪನಹಳ್ಳಿ : ಶಿಲ್ಪ ಉಮೇಶ್ ನಾಯ್ಕ ಅವರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗಂಗಮ್ಮ ರಮೇಶ್ 13 ಮತಗಳನ್ನು ಪಡೆದು ಜಯ ಗಳಿಸಿದರೆ, ಪ್ರತಿಸ್ಪರ್ಧಿ ರೇಣುಕಮ್ಮ 12 ಮತ ಪಡೆದು ಸೋಲುಂಡರು ಎಂದು ಚುನಾವಣೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ತಹಶೀಲ್ದಾರ್ ಗಿರೀಶ್ ಬಾಬು ತಿಳಿಸಿದರು.
ಹರಪನಹಳ್ಳಿ ವಲಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅರಣ್ಯ ಅತಿಕ್ರಮಣ ತಡೆಯಲು ಹೋದ ಅರಣ್ಯ ಸಿಬ್ಬಂದಿಗಳ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ನಾಲ್ವರು ಆರೋಪಿಗಳಿಗೆ ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ಪಟ್ಟಣದ ಹಿರಿಯ ಸಿವಿಲ್ ಮತ್ತು ಜೆ.ಎಂ.ಎಫ್.ಸಿ ನ್ಯಾಯಲಯ ಆದೇಶಿಸಿದೆ.