
ಬಿಸಿಯೂಟ ತಯಾರಕರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಎಐಟಿಯುಸಿ ಪ್ರತಿಭಟನೆ
ಹರಪನಹಳ್ಳಿ : ಬಿಸಿ ಊಟ ತಯಾರಕರಿಗೆ 2025-26ನೇ ಸಾಲಿನ ಬಜೆಟ್‌ನಲ್ಲಿ ವೇತನ ಹೆಚ್ಚಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ತಾಲ್ಲೂಕು ಅಕ್ಷರ ದಾಸೋಹ ಬಿಸಿಯೂಟ ತಯಾರಕ ಫೆಡರೇಷನ್ಸ್ (ಎಐಟಿಯುಸಿ) ವತಿಯಿಂದ ಪ್ರತಿಭಟನೆ ನಡೆಸಿ, ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.