Category: ಹರಿಹರ

ಕ್ರೀಡಾಕೂಟದಲ್ಲಿ ಜಿಲ್ಲಾ, ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಸನ್ಮಾನ

ಗಾಂಧೀಜಿ ಮತ್ತು ಶಾಸ್ತ್ರೀಜಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಕ್ರೀಡಾಕೂಟದಲ್ಲಿ ಜಿಲ್ಲಾ ಮತ್ತು ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಾದ ಲೋಹಿತ್, ಭಾಗ್ಯ ಮತ್ತು ಮೆಹಬೂಬಿ ಅವರನ್ನು  ಕಾಲೇಜು ಮತ್ತು ಪ್ರೌಢಶಾಲೆ ಎಸ್.ಡಿ.ಎಂ.ಸಿ. ಮತ್ತು ಉಪನ್ಯಾಸಕರು ಹಾಗೂ ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು.

ದಸರಾ ಕ್ರೀಡಾಕೂಟ : ವರ್ಷಿಣಿ ತೃತೀಯ

ಮಲೇಬೆನ್ನೂರು : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಬಿ.ಎಂ. ವರ್ಷಿಣಿ ಅವರು ಆರ್ಚರಿ ದಸರಾ ಕ್ರೀಡಾಕೂಟದಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದ್ದಾರೆ.

ಮುಸ್ಲಿಂ ಧರ್ಮಗುರುಗಳ ಪ್ರತಿಭಟನೆ

ಹರಿಹರ : ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ಆಗುವಂತಹ ಭಾಷಣ ಮಾಡಿರುವ ಉತ್ತರ ಪ್ರದೇಶದ ಗೌಜಿಯಾಬಾದ್‌ ನಿವಾಸಿ ಯತಿ ನರಸಿಂಗಾನಂದ ಮಹಾರಾಜರ  ವಿರುದ್ದ ಕೂಡಲೇ   ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ಅಂಜುಮನ್ ಇಸ್ಲಾಮಿಯಾ ಸಮಿತಿ ವತಿಯಿಂದ ಪ್ರತಿಭಟನೆ ಮಾಡಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಲಾಯಿತು. 

ಹರಿಹರ : 25ರಂದು ಗ್ರಾಮ ದೇವತೆ ಹಬ್ಬದ ಲೆಕ್ಕಪತ್ರ ಮಂಡನೆ

ಹರಿಹರ : ನಗರದ ಶಿಬಾರ ವೃತ್ತದಲ್ಲಿರುವ ಮೂಲ ಗ್ರಾಮದೇವತೆ ಊರಮ್ಮ ದೇವಿ ದೇವಸ್ಥಾನದಲ್ಲಿ ಇದೇ ದಿನಾಂಕ 25 ರ ಶುಕ್ರವಾರ 10.30ಕ್ಕೆ  ಕಳೆದ ಬಾರಿ ನಡೆದ ಗ್ರಾಮ ದೇವತೆ ಹಬ್ಬದ ಲೆಕ್ಕಪತ್ರ ಮಂಡನೆ ಮತ್ತು  ಇತರೆ ವಿಚಾರಕ್ಕೆ ಸಂಬಂಧಿಸಿದಂತೆ ಸಭೆಯನ್ನು ಆಯೋಜಿಸಲಾಗಿದೆ

ಮಲೇಬೆನ್ನೂರು ಪುರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಮಂಜುನಾಥ್

ಮಲೇಬೆನ್ನೂರು : ಇಲ್ಲಿನ ಪುರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬಿ. ಮಂಜುನಾಥ್ ಅವರು ಸೋಮವಾರ ಸ್ಥಾಯಿ ಸಮಿತಿ ಅಧ್ಯಕ್ಷರ ನೂತನ ಕೊಠಡಿಯಲ್ಲಿ ಅಧಿಕಾರ ವಹಿಸಿಕೊಂಡರು. 

ಗುರಿ, ಕನಸು ಇಲ್ಲದಿದ್ದರೆ ಸಾಧನೆ ಸಾಧ್ಯವಿಲ್ಲ

ಮಲೇಬೆನ್ನೂರು : ವಿದ್ಯಾರ್ಥಿ ಜೀವ ನದಲ್ಲಿ ನೀವು ಕನಸು ಕಾಣದಿದ್ದರೆ, ಸಾಧಿಸಲು ಸಾಧ್ಯವಿಲ್ಲ. ಹಾಗಾಗಿ ನಿಮ್ಮ ಗುರಿ ಮತ್ತು ಕನಸು ದೊಡ್ಡದಾಗಿರಲಿ ಎಂದು ದಾವಣಗೆರೆಯ ವಾಣಿಜ್ಯ ತೆರಿಗೆ ಇಲಾಖೆಯ ಉಪ ಆಯುಕ್ತ ಹೆಚ್‌.ಎಸ್‌. ಮಂಜುನಾಥ್‌ ಹೇಳಿದರು.

ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ನಿರ್ದೇಶನ

ಹರಿಹರ : ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರುವ ಕೆಲಸವನ್ನು ಮಾಡುವಂತೆ ಪಂಚ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಹರಿಹರ ತಾಲ್ಲೂಕು ಅಧ್ಯಕ್ಷ ನಂದಿಗಾವಿ ಶ್ರೀನಿವಾಸ್  ಅಧಿಕಾರಿಗಳಿಗೆ ಹೇಳಿದರು.

ನೋಡುಗರ ಕಣ್ಮನ ಸೆಳೆಯುವ ಮಿಂಚುಳ್ಳಿ ಪಾಲ್ಸ್

ಮಲೇಬೆನ್ನೂರು : ಕಳೆದ 3 – 4 ದಿನಗಳಿಂದ ಸುರಿದ ಮಳೆಯಿಂದಾಗಿ ಕೊಮಾರನಹಳ್ಳಿ ಸಮೀಪ (ಎಸ್.ಹೆಚ್.ರಸ್ತೆ ಪಕ್ಕದಲ್ಲಿ) ಗುಡ್ಡದಿಂದ ಮಿಂಚುಳ್ಳಿ ಜಲಪಾತ ಮೈದುಂಬಿ ಹರಿಯುತ್ತಿದ್ದು, ಪ್ರವಾಸಿಗರ ಕಣ್ಮನ ಸೆಳೆಯುತ್ತಿದೆ.

ಈರಗಾರರಿಂದ ದೊಡ್ಡ ಎಡೆ ಪೂಜೆ….

ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿ ಗ್ರಾಮದ ಶ್ರೀ ಬೀರಲಿಂಗೇಶ್ವರ ದೇವಸ್ಥಾನದಲ್ಲಿ ವಿಜಯದಶಮಿ ಅಂಗವಾಗಿ ಭಾನುವಾರ ಜರುಗಿದ ಮರಿ ಬನ್ನಿ  ಕಾರ್ಯಕ್ರಮದಲ್ಲಿ ಈರಗಾರರಿಂದ ನಡೆದ ಶ್ರದ್ಧಾ- ಭಕ್ತಿಯ ದೊಡ್ಡ ಎಡೆ ಪೂಜೆ ಭಕ್ತರ ಗಮನ ಸೆಳೆಯಿತು.     

ಕೊಮಾರನಹಳ್ಳಿಯಲ್ಲಿ ಸಂಭ್ರಮದ ರಥೋತ್ಸವ

ಮಲೇಬೆನ್ನೂರು : ದಸರಾ ಹಾಗೂ ವಿಜಯದಶಮಿ ಹಬ್ಬದ ಅಂಗವಾಗಿ ಕೊಮಾರನಹಳ್ಳಿ ಗ್ರಾಮದ ಹೆಳವನಕಟ್ಟೆ ಶ್ರೀ ಲಕ್ಷ್ಮಿ ರಂಗನಾಥ ಸ್ವಾಮಿಯ ಬ್ರಹ್ಮ ರಥೋತ್ಸವವು ಶನಿವಾರ ಬೆಳಗ್ಗೆ ಸಂಭ್ರಮದಿಂದ ಜರುಗಿತು.

ನಿವೇಶನ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಪುರಸಭೆ ಎದುರು ಧರಣಿ

ಮಲೇಬೆನ್ನೂರು : ಪಟ್ಟಣದ 11ನೇ ವಾರ್ಡ್‌ನಲ್ಲಿ ಭದ್ರಾ ಚಾನಲ್‌ ಪಕ್ಕದ ಸರ್ಕಾರಿ ಜಾಗದಲ್ಲಿ ಕಳೆದ 35 ವರ್ಷಗಳಿಂದ ವಾಸಿಸುತ್ತಿರುವ ನಮಗೆ ನಿವೇಶನ ಹಕ್ಕು ಪತ್ರ ನೀಡುವಂತೆ ಆಗ್ರಹಿಸಿ ಅಲ್ಲಿನ ನಿವಾಸಿಗಳು ಪುರಸಭೆ ಎದುರು ಬುಧವಾರ ಧರಣಿ ನಡೆಸಿದರು.

ಹರಿಹರದಲ್ಲಿ ಬಿಜೆಪಿ ವಿಜಯೋತ್ಸವ

ಹರಿಹರ : ಹರಿಯಾಣ ರಾಜ್ಯದಲ್ಲಿ  ಬಿಜೆಪಿ  ಪಕ್ಷ  ಅಭೂತಪೂರ್ವ  ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ, ನಗರದ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಹಿ ಹಂಚುವ ಮೂಲಕ ವಿಜಯೋತ್ಸವ ಆಚರಿಸಿದರು.   

error: Content is protected !!