
ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸರ ಆರಾಧನೆ
ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯ ಶ್ರೀ ರಂಗನಾಥ ಆಶ್ರಮದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಶ್ರೀ ಶಂಕರಲಿಂಗ ಭಗವಾನ್ ಸರಸ್ವತೀ ಪರಮಹಂಸರ 72ನೇ ವರ್ಷದ ಆರಾಧನಾ ಮಹೋತ್ಸವವು ಇಂದು ಸಮಾರೋಪಗೊಳ್ಳಲಿದೆ.
ಮಲೇಬೆನ್ನೂರು ಸಮೀಪದ ಕೊಮಾರನಹಳ್ಳಿಯ ಶ್ರೀ ರಂಗನಾಥ ಆಶ್ರಮದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿರುವ ಶ್ರೀ ಶಂಕರಲಿಂಗ ಭಗವಾನ್ ಸರಸ್ವತೀ ಪರಮಹಂಸರ 72ನೇ ವರ್ಷದ ಆರಾಧನಾ ಮಹೋತ್ಸವವು ಇಂದು ಸಮಾರೋಪಗೊಳ್ಳಲಿದೆ.
ಮಲೇಬೆನ್ನೂರು : ದಕ್ಷಿಣ ಭಾರತದ ಕಾಶಿ ಕ್ಷೇತ್ರವೆನಿಸಿರುವ ಮತ್ತು ಪವಾಡಗಳ ಪುಣ್ಯಭೂಮಿಯಾಗಿರುವ ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ಮಹಾರಥೋತ್ಸವವು ಇಂದು ಬೆಳಿಗ್ಗೆ ಜನಸಾಗರದ ನಡುವೆ ವಿಜೃಂಭಣೆಯಿಂದ ನಡೆಯಿತು.
ಮಲೇಬೆನ್ನೂರು ಸಮೀಪದ ನಂದಿತಾವರೆ ಗ್ರಾಮದ ಆರಾಧ್ಯ ದೈವ ಶ್ರೀ ಬಸವೇಶ್ವರ ದೇವರ ರಥೋತ್ಸವವು ನಾಳೆ ಭಾನುವಾರ ಜರುಗಲಿದೆ.
ಮಲೇಬೆನ್ನೂರು ಸಮೀಪದ ಕುಂಬಳೂರು ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಗ್ರಾಮ ಪಂಚಾಯ್ತಿ ನೂತನ ಕಟ್ಟಡವಾದ ರಾಜೀವ್‌ಗಾಂಧಿ ಸೇವಾ ಕೇಂದ್ರ ಇಂದು ಬೆಳಿಗ್ಗೆ 11 ಗಂಟೆಗೆ ಉದ್ಘಾಟನೆಗೊಳ್ಳಲಿದೆ.
ಮಲೇಬೆನ್ನೂರು ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮಗಳು ಶ್ರದ್ಧಾ-ಭಕ್ತಿಯಿಂದ ಜರುಗಿದವು.
ಹರಿಹರ : ನಗರದ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ವತಿಯಿಂದ ಮಹಾ ಶಿವರಾತ್ರಿ ಪ್ರಯುಕ್ತ ಬೆಳಿಗ್ಗೆ ಶಿವ ಧ್ವಜಾರೋಹಣ, ಸಹಸ್ರಲಿಂಗ ದರ್ಶನ, ದ್ವಾದಶ ಜ್ಯೋತಿರ್ಲಿಂಗಗಳ ಉತ್ಸವದ ಮೆರವಣಿಗೆ ನಡೆಸಲಾಯಿತು.
ಹರಿಹರ : ನಗರದ ಶ್ರೀ ಹರಿಹರೇಶ್ವರ ಸ್ವಾಮಿ, ನೂರ ಎಂಟು ಲಿಂಗೇಶ್ವರ ಸ್ವಾಮಿ, ಹರ ಮಠದ ಶಿವಲಿಂಗೇಶ್ವರ ಸ್ವಾಮಿ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ, ವಿಶೇಷ ರುದ್ರಾಭಿಷೇಕ, ಅಲಂಕಾರ, ಮಹಾಮಂಗಳಾರತಿ ಮುಂತಾದ ಪೂಜಾ ಕಾರ್ಯಗಳು ಶ್ರದ್ಧಾ – ಭಕ್ತಿಯಿಂದ ನಡೆದವು.
ಹರಿಹರ ತಾಲ್ಲೂಕು ಕಮಲಾಪುರ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರಾಗಿ ಗಣೇಶ್ ಕಮಲಾಪುರ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಮಕ್ಕಳ ಕಲಿಕೆಗೆ ಭದ್ರಬುನಾದಿ ಹಾಗೂ ಮಕ್ಕಳ ಅಭಿವೃದ್ಧಿಯ ಮುನ್ನುಡಿ ಈ ಕಲಿಕಾ ಹಬ್ಬವಾಗಿದೆ ಎಂದು ಗೋವಿನಹಾಳ್ ಗ್ರಾಮದ ಹಿರಿಯ ಮುಖಂಡ ಜಿ.ಮಲ್ಲನಗೌಡ್ರು ಹೇಳಿದರು.
ಭರಂಪುರ 108 ಲಿಂಗೇಶ್ವರ ದೇವಸ್ಥಾನದಲ್ಲಿ ಇಂದು ಮಹಾರುದ್ರಾಭಿಷೇಕ ಹಾಗೂ ಸಪ್ತ ದೇವತೆಗಳ ಪಂಚಾಮೃತ ಅಭಿಷೇಕ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಬಸವೇಶ್ವರ ಹಾಗೂ 108 ಲಿಂಗೇಶ್ವರ ಕಮಿಟಿ ತಿಳಿಸಿದೆ.
ಹರಿಹರ ಗೃಹ ನಿರ್ಮಾಣ ಸಹಕಾರ ಸಂಘ ನಿಯಮಿತದ ಅಧ್ಯಕ್ಷರಾಗಿ ಅಂಬಾಸಾ ಮೆಹರ್ವಾಡೆ, ಉಪಾಧ್ಯಕ್ಷರಾಗಿ ಶ್ರೀಮತಿ ಗೀತಾಬಾಯಿ ಭೂತೆ ಅವರುಗಳ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಸಹಕಾರ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೆಚ್.ಸುನೀತ ಘೋಷಣೆ ಮಾಡಿದರು.
ಮಲೇಬೆನ್ನೂರು : ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರು ಸೋಮವಾರ ನಿಟ್ಟೂರು ಗ್ರಾಮಕ್ಕೆ ಆಗಮಿಸಿದ್ದ ವೇಳೆ ಗ್ರಾಮಸ್ಥರು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು.