ಶಾಸಕ ಶಾಂತನಗೌಡರ 75ನೇ ವರ್ಷದ ಹುಟ್ಟು ಹಬ್ಬ ಅರ್ಥಪೂರ್ಣ ಆಚರಣೆಗೆ ತೀರ್ಮಾನ
ಹೊನ್ನಾಳಿ : ಹಿರಿಯ ಶಾಸಕ ಡಿ.ಜಿ.ಶಾಂತನಗೌಡ ಅವರ 75ನೇ ಹುಟ್ಟುಹಬ್ಬದ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಜನವರಿ ತಿಂಗಳಲ್ಲಿ ಶಾಂತನಗೌಡರ ಅಭಿಮಾನಿ ಬಳಗದ ವತಿಯಿಂದ ವಿಜೃಂಭಣೆ ಮತ್ತು ಅರ್ಥ ಪೂರ್ಣವಾಗಿ ಆಚರಿಸಲು ತೀರ್ಮಾನಿಸಿದ್ದು, ಇದರ ಪೂರ್ವಭಾವಿ ಸಭೆಯನ್ನು ಗೊಲ್ಲರಹಳ್ಳಿಯ ತರಳಬಾಳು ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿತ್ತು.