Category: ಜಗಳೂರು

ಇಂದು ತಪೋಕ್ಷೇತ್ರ ಕಣ್ವಕುಪ್ಪೆಯಲ್ಲಿ ರಥೋತ್ಸವ

ಜಗಳೂರು ತಾಲ್ಲೂಕು ತಪೋಕ್ಷೇತ್ರ ಕಣ್ವಕುಪ್ಪೆ ಗವಿಮಠದಲ್ಲಿ ಮಕರ ಸಂಕ್ರಾತಿಯಂದು ಮಹಾ ರಥೋತ್ಸವವು ಇಂದು ಜರುಗಲಿದೆ. ಮಕರ ಸಂಕ್ರಾತಿಯ ರಥೋತ್ಸವದ ಸಾನ್ನಿಧ್ಯವನ್ನು ತಪೋಕ್ಷೇತ್ರ ಗವಿಮಠದ ಪಟ್ಟಾಧ್ಯಕ್ಷರಾದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮಿಗಳು   ವಹಿಸುವರು.

ನುಡಿ ಜಾತ್ರೆಗೆ ಮಧುವಣಗಿತ್ತಿಯಂತೆ ಸಜ್ಜಾದ ಜಗಳೂರು

ಜಗಳೂರಿನಲ್ಲಿ ಇಂದಿನಿಂದ  ಮೂರು ದಿನ ನಡೆಯಲಿರುವ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಜಲೋತ್ಸವ ಕಾರ್ಯಕ್ರಮಕ್ಕೆ ಝಗಮಗಿಸುತ್ತಾ ಜಗಳೂರು ಮದುವಣಗಿತ್ತಿಯಂತೆ ಶೃಂಗಾರಗೊಂಡಿದೆ.

ಪಲ್ಲಾಗಟ್ಟೆಯಲ್ಲಿ ನಾಳೆ ಅಯ್ಯಪ್ಪ ಸ್ವಾಮಿ ಪಡಿಪೂಜೆ, ಅನ್ನ ಸಂತರ್ಪಣೆ

ಜಗಳೂರು : ತಾಲ್ಲೂಕಿನ ಪಲ್ಲಾಗಟ್ಟೆಯ ಅಯ್ಯಪ್ಪಸ್ವಾಮಿ ಸೇವಾ ಸಮಿತಿ ವತಿಯಿಂದ 25ನೇ ವರ್ಷದ ಶಬರಿಮಲೈ ಯಾತ್ರೆ ಪ್ರಯುಕ್ತ ಅಯ್ಯಪ್ಪ ಸ್ವಾಮಿ ಪಡಿ ಪೂಜೆ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ನಾಡಿದ್ದು ದಿನಾಂಕ 12ರ ಭಾನುವಾರ ಸಂಜೆ 6 ಗಂಟೆಗೆ ಗ್ರಾಮದ ಎಲ್‌ಐಸಿ ರಂಗಮಂದಿರದಲ್ಲಿ ನಡೆಸಲಾಗುವುದು

ಕನ್ನಡ ರಥಕ್ಕೆ ಎಲ್ಲೆಡೆ ಸಂಭ್ರಮದ ಸ್ವಾಗತ

ಜಗಳೂರು : ತಾಲೂಕಿನ ಪಲ್ಲಾಗಟ್ಟೆ ಗ್ರಾಮದಲ್ಲಿ 5 ನೇ ದಿನದಂದು `ಕನ್ನಡ ರಥ’ ಸಂಚಾರಕ್ಕೆ ಶಾಲಾ ಮಕ್ಕಳು, ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಮಹಿಳೆಯರು, ಅದ್ಧೂರಿಯಾಗಿ ಸ್ವಾಗತಿಸಿ, ಮೆರವಣಿಗೆ ಮುಖಾಂತರ ಬೀಳ್ಕೊಡಲಾಯಿತು.

ಸಾಹಿತ್ಯ ಸಮ್ಮೇಳನ ಯಶಸ್ವಿಗೊಳಿಸಿ

ಜಗಳೂರು : ಇದೇ ಜನವರಿ 11ಹಾಗೂ 12ರಂದು ಜಗಳೂರಿನಲ್ಲಿ ನಡೆಯಲಿರುವ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರು ಸಹಕಾರ ನೀಡಬೇಕು ಎಂದು ಶಾಸಕ ಬಿ. ದೇವೇಂದ್ರಪ್ಪ ಮನವಿ ಮಾಡಿದರು.

ಶಿಕ್ಷಣದಿಂದ ಮಾತ್ರ ಶೋಷಿತ ಸಮುದಾಯಗಳ ಮುನ್ನಲೆ

ಜಗಳೂರು : ಶಿಕ್ಷಣದಿಂದ ಮಾತ್ರ ಶೋಷಿತ ಸಮುದಾಯಗಳು ಮುಖ್ಯ ವಾಹಿನಿಗೆ ಬರಲು ಸಾಧ್ಯ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು. ಪಟ್ಟಣದ ಅಂಬೇಡ್ಕರ್ ವೃತ್ತದ ಬಳಿ ಆಯೋಜಿಸಲಾಗಿದ್ದ 207ನೇ ಭೀಮಾ ಕೊರೆಗಾಂವ್ ವಿಜಯೋತ್ಸವದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಗಳೂರು : ಕಟ್ಟಡ ಕಾರ್ಮಿಕ ಸಂಘದ ಭವನ ನಿರ್ಮಾಣಕ್ಕೆ ಶಾಸಕರಿಗೆ ಮನವಿ

ಜಗಳೂರು : ಕಟ್ಟಡ ಕಾರ್ಮಿಕರ ಸಂಘಕ್ಕೆ ನಿವೇಶನ ಹಾಗು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕಲ್ಪಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಕಾರ್ಮಿಕರು ಮನವಿ ಸಲ್ಲಿಸಿದರು.

ಜಗಳೂರು : ಕೇಂದ್ರ ಸಚಿವ ಅಮಿತ್ ಷಾ ಹೇಳಿಕೆ ಖಂಡಿಸಿ ಡಿಎಸ್ ಎಸ್ ಮನವಿ

ಜಗಳೂರು : ಸಂಸತ್ ಕಲಾಪದಲ್ಲಿ ಸಂವಿಧಾನ ಶಿಲ್ಪಿ  ಡಾ.ಬಿ.ಆರ್.ಅಂಬೇಡ್ಕರ್ ಕುರಿತು  ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರ ಅವಹೇಳನಕಾರಿ ಹೇಳಿಕೆ ಖಂಡಿಸಿ ಡಿಎಸ್ ಎಸ್ ನೇತೃತ್ವದಲ್ಲಿ ತಹಶೀಲ್ದಾರ್ ಮುಖಾಂತರ  ರಾಷ್ಟ್ರಪತಿಗೆ ಲಿಖಿತ  ಮನವಿ ಸಲ್ಲಿಸಲಾಯಿತು.

ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷರಾಗಿ ಜಗಳೂರು ಶಾಸಕ ಬಿ. ದೇವೇಂದ್ರಪ್ಪ

ಜಗಳೂರು : ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದಲ್ಲಿ 2025ರ ಫೆಬ್ರವರಿ 8 ಮತ್ತು 9 ರಂದು ಜರುಗಲಿರುವ 7ನೇ ವರ್ಷದ ವಾಲ್ಮೀಕಿ ಜಾತ್ರೆಯ ಜಾತ್ರಾ ಸಮಿತಿ ಅಧ್ಯಕ್ಷರನ್ನಾಗಿ ಜಗಳೂರು ಶಾಸಕ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

ಜಗಳೂರು : ಡ್ರೋನ್ ಬಳಸಿ ಔಷಧಿ ಸಿಂಪಡಿಸಿದರೆ ಉತ್ಪಾದನಾ ವೆಚ್ಚ ಕಡಿಮೆ

ಜಗಳೂರು : ತಾಲ್ಲೂಕಿನಲ್ಲಿ ಪ್ರಸ್ತುತ ಸಾಲಿನಲ್ಲಿ 6,900 ಹೆಕ್ಟೇರ್‌ ಕಡಲೆ ಬೆಳೆಯ ವಿಸ್ತೀರ್ಣವಿದ್ದು, ಇದಕ್ಕೆ ಡ್ರೋನ್‌ ಮೂಲಕ ಔಷಧ ಸಿಂಪಡಣೆ ಮಾಡಿದರೆ ಸಮಯ ಮತ್ತು ನೀರಿನ ಉಳಿತಾಯ ಮಾಡುವ ಜತೆಗೆ ಕಡಿಮೆ ಶ್ರಮ ವಿನಿಯೋಗಿಸಬಹುದು

error: Content is protected !!