Category: ಜಗಳೂರು

ಅಂತೂ ಬಂತು ಜಗಳೂರು ಕೆರೆಗೆ ನೀರು

ಜಗಳೂರು : ತುಂಗಭದ್ರಾ ನದಿಯಿಂದ ಜಗಳೂರು ತಾಲ್ಲೂಕಿನ 47 ಕೆರೆ ಮತ್ತು ಹರಪನಹಳ್ಳಿ ತಾಲ್ಲೂಕಿನ 6 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯ ಭಾಗವಾಗಿ ಇಂದು  ಜಗಳೂರು ಸೇರಿದಂತೆ ತಾಲ್ಲೂಕಿನ ವಿವಿಧ ಕೆರೆಗಳಿಗೆ ತುಂಗಭದ್ರಾ ನದಿಯಿಂದ ಪೈಪ್‌ಲೈನ್ ಮೂಲಕ ನೀರು ಹರಿಸಲಾಯಿತು.

ಜಗಳೂರಿನಲ್ಲಿ ಜ್ಯೋತಿ ರಥಯಾತ್ರೆಗೆ ಅದ್ಧೂರಿ ಸ್ವಾಗತ

ಜಗಳೂರು : ಕರ್ನಾಟಕ ನಾಮಕರಣಗೊಂಡು 50 ವರ್ಷ ಪೂರೈಸಿದ ನಿಮಿತ್ತ ಹಮ್ಮಿಕೊಂಡಿರುವ   ಕರ್ನಾಟಕ ಸಂಭ್ರಮ 50 ರ ಜ್ಯೋತಿ ರಥಯಾತ್ರೆಗೆ ತಾಲ್ಲೂಕು ಆಡಳಿತದಿಂದ. ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.

ಜಗಳೂರು : ಅಣಬೂರಿನ ಜಯಣ್ಣ ನಿವೃತ್ತಿ

ಜಗಳೂರು : ಸುದೀರ್ಘ ಕಾಲ ಸೇವೆ ಸಲ್ಲಿಸಿ, ನಿವೃತ್ತಿಯಾಗುತ್ತಿರುವ ಎ.ಎಂ.ಜಯ್ಯಣ್ಣ ಅವರ ಮುಂದಿನ ಜೀವನ ಸುಖವಾಗಿರಲಿ ಎಂದು ಜ್ಞಾನ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಮನೋಹರ್ ರೆಡ್ಡಿ ಹೇಳಿದರು.

ಅಲ್ಪ ಅಂತರ್ಜಲ ಜಾಗಕ್ಕೆ ಖುಷ್ಕಿ ತೋಟಗಾರಿಕೆ ವರದಾನ

ಜಗಳೂರು : ಅಂತರ್ಜಲ ಕಡಿಮೆಯಿರುವ ಜಾಗದಲ್ಲಿ ಖುಷ್ಕಿ ತೋಟಗಾರಿಕೆ ವರದಾನವಾಗಿದೆ ಎಂದು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದ ತೋಟಗಾರಿಕೆ ವಿಜ್ಞಾನಿ ಎಂ.ಜಿ. ಬಸವನಗೌಡ ಅಭಿಪ್ರಾಯಪಟ್ಟರು.

ಜಗಳೂರಿನಲ್ಲಿ ರಸ್ತೆ ಅಗಲೀಕರಣ

ಜಗಳೂರು : ಹೆಚ್ಚುತ್ತಿರುವ ವಾಹನ ದಟ್ಟಣೆ, ಟ್ರಾಫಿಕ್ ಸಮಸ್ಯೆ  ನಿವಾರಣೆಗೆ ಪಟ್ಟಣದ ಮುಖ್ಯ ರಸ್ತೆ ಅಗಲೀಕರಣಕ್ಕೆ 20 ಕೋಟಿ ಅನುದಾನ ಮಂಜೂರಾಗಿದ್ದು, ಟೆಂಡರ್ ಪ್ರಕ್ರಿಯೆಯಲ್ಲಿದೆ. ಶೀಘ್ರದಲ್ಲಿ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಹೇಳಿದರು.

ತಾಲ್ಲೂಕಿನಲ್ಲಿ ಅಭಿವೃದ್ಧಿ ಕೆಲಸ ಚುರುಕು, ಶೀಘ್ರವೇ 33 ಕೆರೆಗಳ ಭರ್ತಿಗೆ ಕ್ರಮ

ಜಗಳೂರು : ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸ ಚುರುಕುಗೊಂಡಿದ್ದು, ಶೀಘ್ರವೇ ಜಗಳೂರು ಕೆರೆ ಸೇರಿ 33 ಕೆರೆಗಳು ಭರ್ತಿ ಆಗಲಿವೆ ಎಂದು ಶಾಸಕ ದೇವೇಂದ್ರಪ್ಪ ಭರವಸೆ ನೀಡಿದರು.

ಪೌರ ಕಾರ್ಮಿಕರು ಆರೋಗ್ಯ ಕಾಪಾಡಿಕೊಳ್ಳಬೇಕು ಜಗಳೂರು ಶಾಸಕ ಬಿ. ದೇವೇಂದ್ರಪ್ಪ ಸಲಹೆ

ಜಗಳೂರು :  ಪೌರ ಕಾರ್ಮಿಕರು ಸ್ವಚ್ಛತಾ ಸುರಕ್ಷಿತ ಕಿಟ್ ಧರಿಸಿ ವೈಯಕ್ತಿಕ ಆರೋಗ್ಯ ಕಾಪಾಡಿಕೊಳ್ಳಬೇಕು  ಎಂದು ಶಾಸಕ ಬಿ.ದೇವೇಂದ್ರಪ್ಪ ಸಲಹೆ ನೀಡಿದರು.

ಸಾರ್ವಜನಿಕರನ್ನು ಅಲೆದಾಡಿಸದೇ ಸಕಾಲದಲ್ಲಿ ಕೆಲಸ ನಿರ್ವಹಿಸಿ : ಕೌಲಾಪುರೆ

ಜಗಳೂರು : ಸಾರ್ವಜನಿಕರನ್ನು ಅನಗತ್ಯವಾಗಿ ಕಚೇರಿಗೆ ಅಲೆದಾಡಿಸದೇ ಸಕಾಲದಲ್ಲಿ ಸರ್ಕಾರದ ನಿಯಮಾವಳಿಗಳ ಪ್ರಕಾರ ಕೆಲಸ ನಿರ್ವಹಿಸಬೇಕು ಎಂದು ಲೋಕಾಯುಕ್ತ ಎಸ್.ಪಿ. ಎಂ.ಎಸ್. ಕೌಲಾಪುರೆ ಅವರು ತಾಲ್ಲೂಕು ಅನುಷ್ಠಾನ ಅಧಿಕಾರಿಗಳಿಗೆ ಸೂಚನೆ ನೀಡಿದರು.

error: Content is protected !!