ಹೊಳೆಸಿರಿಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಂಡೇರ ಪ್ರಭು
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಬಂಡೇರ ಪ್ರಭು ಅವರು ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಹೊಳೆಸಿರಿಗೆರೆ ಗ್ರಾ.ಪಂ ನೂತನ ಅಧ್ಯಕ್ಷರಾಗಿ ಬಂಡೇರ ಪ್ರಭು ಅವರು ಗುರುವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಹರಪನಹಳ್ಳಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ತಾಲ್ಲೂಕು ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಯ ಮ್ಮನಹಳ್ಳಿಯ ಶಿಕ್ಷಕರಾದ ಬಂದೋಳ ಸಿದ್ದಪ್ಪ ಅವರು ಆಯ್ಕೆಯಾಗಿದ್ದಾರೆ.
ಹರಿಹರ : ಶ್ರೀ ಶರಣ ಬಸವಲಿಂಗ ಶ್ರೀಗಳು ತಮ್ಮ ಜ್ಞಾನ ಹಾಗೂ ಶಕ್ತಿಯ ಬಲದಿಂದ 256 ಅನುಷ್ಠಾನಗಳನ್ನು ಮಾಡಿ ರಾಷ್ಟ್ರೀಯ ಶ್ರೇಷ್ಠ ಸಂತರಾಗಿ ಹೊರಮ್ಮಿದ್ದಾರೆ ಎಂದು ಮಾಜಿ ಶಾಸಕ ಹೆಚ್.ಎಸ್ ಶಿವಶಂಕರ್ ಹೇಳಿದರು.
ಮಲೇಬೆನ್ನೂರು : ಶ್ರೀ ಮಾರುತಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಿಗೆ ನವದೆಹಲಿಯ ರಾಷ್ಟ್ರೀಯ ಗ್ರಾಮೀಣ ಸಾಕ್ಷರತಾ ಮಿಷನ್ ಸಂಸ್ಥೆ ಉಚಿತವಾಗಿ ನೀಡಿದ ಸ್ಕೂಲ್ ಬ್ಯಾಗ್‌ಗಳನ್ನು ವಿತರಣೆ ಮಾಡಲಾಯಿತು.
ಹರಪನಹಳ್ಳಿ : ನಗರ ಮನೋರಂಜನಾ ಕೇಂದ್ರದ ಅಧ್ಯಕ್ಷ ಐಗೋಳ ಚಿದಾನಂದ ಅವರು ಹಡಗಲಿ ತಾಲ್ಲೂಕು ಸಹಕಾರ ಸಂಘದ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪಟ್ಟಣದ ನಗರ ಮನೋರಂಜನಾ ಕೇಂದ್ರದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು.
ಹರಿಹರ : ನಗರದ ಹೊಸ ಭರಂ ಪುರ ಬಡಾವಣೆಯ ನೂರ ಎಂಟು ಲಿಂಗೇಶ್ವರ ದೇವಸ್ಥಾನದ ಸ್ವಾಮಿಗಳಾದ ಶರಣ ಡಾ. ಶ್ರೀ ಬಸವಲಿಂಗ ಮಹಾಸ್ವಾಮಿಗಳವರ (ಸೊಲ್ಲಾಪುರ) ಹುಟ್ಟು ಹಬ್ಬವನ್ನು ಜನವರಿ 1 ರಂದು ಅದ್ಧೂರಿ ಯಾಗಿ ಆಚರಣೆ ಮಾಡಲಾಗುತ್ತದೆ
ಹರಪನಹಳ್ಳಿ : ನಂದಿಬೇವೂರು ಗ್ರಾಮದ ವಿವಿಧೋದ್ಧೇದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ನಂದಿಬೇವೂರು ಗ್ರಾಮದ ರೇವಣಸಿದ್ದಪ್ಪ ಅವರ ಬೆಂಬಲಿಗ 7 ಅಭ್ಯರ್ಥಿಗಳು ಜಯ ಸಾಧಿಸಿದ್ದಾರೆ.
ಮಲೇಬೆನ್ನೂರು : ಕೊಕ್ಕನೂರು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಹನುಮಗೌಡ ಕಡೂರು ಮತ್ತು ಉಪಾಧ್ಯಕ್ಷರಾಗಿ ಎಂ. ಷಣ್ಮುಖ ಅವರು ಮಂಗಳವಾರ ನಡೆದ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಮಲೇಬೆನ್ನೂರು : ಎಳ್ಳು ಅಮಾವಾಸ್ಯೆ ಪ್ರಯುಕ್ತ ಸುಕ್ಷೇತ್ರ ಉಕ್ಕಡಗಾತ್ರಿಯಲ್ಲಿ ಪವಾಡ ಪುರುಷ ಶ್ರೀ ಗುರು ಕರಿಬಸವೇಶ್ವರ ಅಜ್ಜಯ್ಯನ ದರ್ಶನ ಪಡೆಯಲು ಸೋಮವಾರ ಸಾವಿರಾರು ಭಕ್ತರು ಆಗಮಿಸಿದ್ದರು.
ಹರಪನಹಳ್ಳಿ : ಹರಪನಹಳ್ಳಿ ತಾಲ್ಲೂಕು ಕೃಷಿಕ ಸಮಾಜದ ನೂತನ ಅಧ್ಯಕ್ಷರಾಗಿ ನೀಲಗುಂದದ ಎಸ್.ಮಡಿವಾಳಪ್ಪ ಹಾಗೂ ಉಪಾಧ್ಯಕ್ಷರಾಗಿ ಶಿಂಗ್ರಿಹಳ್ಳಿ ಸಿ.ವಿಜಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಜಗಳೂರು : ಕಟ್ಟಡ ಕಾರ್ಮಿಕರ ಸಂಘಕ್ಕೆ ನಿವೇಶನ ಹಾಗು ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಕಲ್ಪಿಸಬೇಕೆಂದು ಶಾಸಕ ಬಿ.ದೇವೇಂದ್ರಪ್ಪ ಅವರಿಗೆ ಕಾರ್ಮಿಕರು ಮನವಿ ಸಲ್ಲಿಸಿದರು.
ಜಗಳೂರು : ತಾಲ್ಲೂಕಿನ ಬಸವನಕೋಟೆ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಮರಿಯಮ್ಮ ಆಯ್ಕೆಯಾಗಿದ್ದಾರೆ.