ಭರಮಸಾಗರ, ಜು.26 – ಚಿತ್ರ ದುರ್ಗ ತಾಲ್ಲೂಕಿನ ವ್ಯಾಪ್ತಿಯ ಇಸಾಮುದ್ರ ಗ್ರಾಮದ ಉಪ್ಪಾರ ಸಮುದಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿ ಕೊಲೆ ಮಾಡಿರುವ ಆರೋಪಿಗಳನ್ನು ಬಂಧಿಸುವಂತೆ ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಚಂದ್ರಪ್ಪ ಒತ್ತಾಯಿಸಿದರು. ಇಸಾಮುದ್ರ ಗ್ರಾಮಕ್ಕೆ ಭೇಟಿ ನಿನ್ನೆ ನೀಡಿದ್ದ ಅವರು, ಬಾಲಕಿಯನ್ನು ಕಳೆದುಕೊಂಡ ಪೋಷಕರಿಗೆ ವೈಯಕ್ತಿಕ ಧನ ಸಹಾಯ ನೀಡಿ ಸಾಂತ್ವನ ಹೇಳಿ ಮಾತನಾಡಿದರು.
January 15, 2025