ದಾವಣಗೆರೆ, ಏ. 14- ನಗರದ ಸೇಂಟ್ ಜಾನ್ಸ್ ವಿದ್ಯಾಸಂಸ್ಥೆಯಲ್ಲಿ ಭಾರತ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಡಾ. ಬಿ. ಆರ್. ಅಂಬೇಡ್ಕರ್ ಅವರ 132ನೇ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷ ಹೆಚ್. ಅನಿಲ್‍ಕುಮಾರ್ ಹಾಗೂ ಶಾಲೆಯ ಕಾರ್ಯದರ್ಶಿ ಟಿ.ಎಂ. ಉಮಾಪತಯ್ಯ ಮತ್ತು ವಿದ್ಯಾಸಂಸ್ಥೆಯ ಶಾಲಾ ಖಜಾಂಚಿ ಪ್ರವೀಣ್ ಹುಲ್ಲುಮನೆ, ಕೇಂದ್ರ ಮತ್ತು ರಾಜ್ಯ ಪಠ್ಯಕ್ರಮದ ಪ್ರಾಂಶುಪಾಲರುಗಳು, ಉಪಪ್ರಾಂಶುಪಾಲರು ಗಳು, ಬೋಧಕ ಮತ್ತು ಬೋಧಕೇತರ ವರ್ಗ ದವರು ಹಾಗೂ ವಿದ್ಯಾರ್ಥಿಗಳು ಸಂತೋಷ ದಿಂದ ಪಾಲ್ಗೊಂಡಿದ್ದರು. ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್‍ರವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಮೈಗೂಡಿಸಿಕೊಳ್ಳಿ ಎಂಬ ಸಲಹೆ ನೀಡಿದರು.
ಡಾ.ಬಿ.ಆರ್.ಅಂಬೇಡ್ಕರ್‍ರವರ ಜಯಂತಿಯ ಅಂಗವಾಗಿ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯನ್ನು ವಿತರಿಸಲಾಯಿತು.