ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಬಹುಮತದಿಂದ ಗೆಲುವು : ಸಂಸದ ಸಿದ್ದೇಶ್ವರ ವಿಶ್ವಾಸ

ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಬಹುಮತದಿಂದ ಗೆಲುವು : ಸಂಸದ ಸಿದ್ದೇಶ್ವರ ವಿಶ್ವಾಸ

ದಾವಣಗೆರೆ, ಏ.26- ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರ ಸೇರಿದಂತೆ, ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಹರಪನಹಳ್ಳಿ ವಿಧಾನಸಭಾ ಕ್ಷೇತ್ರ ಸೇರಿದಂತೆ, ಎಲ್ಲಾ ಎಂಟೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭಾರೀ ಬಹುಮತದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಸಂಸದ  ಜಿ.ಎಂ. ಸಿದ್ದೇಶ್ವರ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಎಪಿಎಂಸಿ ಮೇಲ್ಸೇತುವೆ ಎದುರಿನ ರೇಣುಕಾ ಟ್ರೇಡರ್ಸ್‌ನಲ್ಲಿ ಇಂದು ಆಯೋಜಿಸ ಲಾಗಿದ್ದ ಮಾಧ್ಯಮ ಕೇಂದ್ರ ಹಾಗೂ ಟೆಲಿಕಾಲ್ ಸೆಂಟರ್ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಬಹುತೇಕ ಕಡೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಆ ಮೂಲಕ ರಾಜ್ಯವನ್ನು ಬಲಿಷ್ಠ ಮಾಡುವ ಮೂಲಕ ದೇಶವನ್ನು ಬಲಿಷ್ಠ ದೇಶವನ್ನಾಗಿ ಮಾಡಬೇಕಾಗಿದೆ. ಅದಕ್ಕಾಗಿ ರಾಜ್ಯದ ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಕೆಲವು ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಬಿಜೆಪಿ 120ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವರದಿ ಹೇಳಿದೆ. ರಾಜ್ಯ ಮತ್ತು ರಾಷ್ಟ್ರದ ನಾಯಕರು ರಾಜ್ಯದಲ್ಲಿ ಚುನಾವಣಾ ಕ್ಷೇತ್ರಗಳಲ್ಲಿ ಪ್ರಚಾರ ನಡೆಸುತ್ತಿದ್ದು, 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಮಾತನಾಡಿ, ರಾಜ್ಯ ಸರ್ಕಾರ ಕಳೆದ ಮೂರೂವರೆ ವರ್ಷಗಳಲ್ಲಿ ರಾಜ್ಯದಲ್ಲಿ 30/40 ವರ್ಷಗಳಲ್ಲಿ ಆಗದಷ್ಟು ಅಭಿವೃದ್ಧಿ ಕೆಲಸಗಳು ಆಗಿವೆ ಎಂದರು.

ಈ ವೇಳೆ ಜಿಲ್ಲಾ ವಕ್ತಾರ ಡಿ.ಎಸ್.ಶಿವಶಂಕರ್, ಉತ್ತರ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ನಾಗರಾಜ್ ಲೋಕಿಕೆರೆ, ದೂಡಾ ಅಧ್ಯಕ್ಷ ಎ.ವೈ. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜಗದೀಶ್ ಇತರರು ಇದ್ದರು.

error: Content is protected !!