ಸಿಇಟಿ: ಗಣಿತಕ್ಕೆ 328 ಹಾಗೂ ಜೀವಶಾಸ್ತ್ರಕ್ಕೆ 981 ಗೈರು

ಸಿಇಟಿ: ಗಣಿತಕ್ಕೆ 328 ಹಾಗೂ ಜೀವಶಾಸ್ತ್ರಕ್ಕೆ 981 ಗೈರು

ದಾವಣಗೆರೆ, ಮೇ 20- ವೈದ್ಯಕೀಯ, ತಾಂತ್ರಿಕ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ನಗರದ 20 ಕೇಂದ್ರಗಳಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಶನಿವಾರ ನಡೆಯಿತು.

ಈ ಬಾರಿ ಸಾಮಾನ್ಯ ಪ್ರವೇಶ ಪರೀಕ್ಷೆಗಾಗಿ ಜಿಲ್ಲೆಯಲ್ಲಿ 9944 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿದ್ದರು.  ಬೆಳಿಗ್ಗೆ 10.30 ರಿಂದ 11.50ರವರೆಗೆ ಜೀವಶಾಸ್ತ, ಮಧ್ಯಾಹ್ನ 2.30 ರಿಂದ 3.50 ರವರೆಗೆ ಗಣಿತ ವಿಷಯದ ಬಗ್ಗೆ ಪರೀಕ್ಷೆ ನಡೆಯಿತು. 

ಗಣಿತ ವಿಷಯದಲ್ಲಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದ 9,983 ವಿದ್ಯಾರ್ಥಿಗಳ ಪೈಕಿ 9,655 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. 328 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಜೀವಶಾಸ್ತ್ರ ವಿಷಯದ ಪರೀಕ್ಷೆಗೆ ಹೆಸರು ನೋಂದಾಯಿಸಿದ್ದ 9944 ವಿದ್ಯಾರ್ಥಿಗಳ ಪೈಕಿ 981 ಗೈರು ಹಾಜರಾಗಿ, 8963 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಭಾನುವಾರ ಬೆಳಿಗ್ಗೆ 10.30 ರಿಂದ 11.50ರ ವರೆಗೆ ಭೌತಶಾಸ್ತ್ರ ಮಧ್ಯಾಹ್ನ 2.30 ರಿಂದ 3.50 ರವರೆಗೆ ರಸಾಯನಶಾಸ್ತ್ರ ವಿಷಯ ಕುರಿತು ಪರೀಕ್ಷೆ ನಡೆಯಲಿದೆ. 

ಇಂದು ಎವಿಕೆ ಕಾಲೇಜು ಕೇಂದ್ರದಲ್ಲಿ ಪರೀಕ್ಷೆಗೆ ಬಂದಿದ್ದ ಯುವಕರು ಪೂರ್ತಿ ತೋಳಿನ ಶರ್ಟ್ ಧರಿಸಿದ್ದಾರೆಂಬ ಕಾರಣಕ್ಕಾಗಿ ತಡೆ ಹಿಡಿಯಲಾಯಿತು. ತೋಳುಗಳನ್ನು ಕತ್ತರಿಸಿ ಬನ್ನಿ ಎಂದು ಹೇಳಿದಾಗ ಹುಡುಗರು ಸಿಬ್ಬಂದಿಗಳೊಂದಿಗೆ ವಾಗ್ವಾದಕ್ಕೆ ನಿಂತರು. ನಂತರ ತೋಳು ಮಡಚಿಕೊಂಡು ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು.

ಪಾರದರ್ಶಕ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವ ಸಲುವಾಗಿ ಪರೀಕ್ಷಾ ಕೇಂದ್ರಗಳಲ್ಲಿ ವೀಕ್ಷಕರನ್ನು ನೇಮಕ ಮಾಡಲಾಗಿತ್ತು. ಪರೀಕ್ಷಾ ಅವಧಿ ಆರಂಭದ ಮೊದಲು ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಗಡಿಯಾರ ಹಾಗೂ ಸಿಸಿ ಕ್ಯಾಮರಾ ಅಳವಡಿಸಲಾಗಿತ್ತು. 

error: Content is protected !!