8ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸ್ಮರಣ ಸಂಚಿಕೆ ಬಿಡುಗಡೆ

8ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಸ್ಮರಣ ಸಂಚಿಕೆ  ಬಿಡುಗಡೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಶಾಮನೂರು ಶಿವಶಂಕರಪ್ಪ ಪಾರ್ವತಮ್ಮ ಕಲ್ಯಾಣ ಮಂಟಪದಲ್ಲಿ ಆಯೋಜಿಸಲಾಗಿದ್ದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಸಮ್ಮೇಳನದ ಸ್ಮರಣ ಸಂಚಿಕೆಯನ್ನೂ ಬಿಡುಗಡೆ ಮಾಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹುಬ್ಬಳ್ಳಿ ನಿರ್ದೇಶಕ ಬಸವರಾಜ ರಾಜಋಷಿ, ಶಾಸಕರಾದ ಶಾಮನೂರು ಶಿವಶಂಕರಪ್ಪ, ಕೆ.ಎಸ್. ಬಸವಂತಪ್ಪ, ಡಿ.ಜಿ. ಶಾಂತನಗೌಡ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಜಿಲ್ಲಾಧಿಕಾರಿ ಎಂ.ವಿ. ವೆಂಕಟೇಶ್, ಎಸ್ಪಿ ಉಮಾ ಪ್ರಶಾಂತ್, ಜಿ.ಪಂ. ಸಿಇಒ ಸುರೇಶ್ ಇಟ್ನಾಳ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಧ್ಯಕ್ಷ ಶಿವಾನಂದ ತಗಡೂರು, `ಜನತಾವಾಣಿ’ ಸಂಪಾದಕ ಎಂ.ಎಸ್. ವಿಕಾಸ್, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಇ.ಎಂ. ಮಂಜುನಾಥ,  ಪಾಲಿಕೆ ಆಯುಕ್ತೆ ರೇಣುಕಾ, ಇನ್‌ಸೈಟ್ಸ್ ಐಎಎಸ್ ಸಂಸ್ಥಾಪಕ ನಿರ್ದೇಶಕ ಜಿ.ಬಿ. ವಿನಯ್‌ಕುಮಾರ್, ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ ಕೆ. ಏಕಾಂತಪ್ಪ, ಹಿರಿಯ ಪತ್ರಕರ್ತ ಬಿ.ಎನ್. ಮಲ್ಲೇಶ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ. ಫಕೃದ್ಧೀನ್‌ ಮತ್ತಿತರರು ಉಪಸ್ಥಿತರಿದ್ದರು.

error: Content is protected !!