ಸಾಮಾಜಿಕ ಸೇವಾ ಸಂಘಟನೆಗಳಲ್ಲಿ ಮುಂಚೂಣಿಯಲ್ಲಿದ್ದ ಎ.ಆರ್. ಉಜ್ಜನಪ್ಪ ಅವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನ ರಾದರು. ಅವರಿಗೆ ಸುಮಾರು 72 ವರ್ಷ ವಯಸ್ಸಾಗಿತ್ತು. ಎಂದಿನಂತೆ ಇಂದು ಮುಂಜಾನೆಯೂ ಸಹ ಬಾಪೂಜಿ ಇಂಜಿನಿಯರಿಂಗ್ ಕಾಲೇಜಿನ ಮೈದಾನದಲ್ಲಿ ವಾಯುವಿಹಾರ ಮಾಡುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೊಳಗಾದರು. ತತ್ಕ್ಷಣವೇ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯದಲ್ಲಿಯೇ ಕೊನೆಯುಸಿರೆಳೆದರು. ಪತ್ನಿ ಶ್ರೀಮತಿ ನಾಗಮ್ಮ, ಓರ್ವ ಪುತ್ರ, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು-ಬಳಗ, ಸ್ನೇಹಿತರನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯು ನಗರಕ್ಕೆ ಸಮೀಪದ ಬೋರಗೊಂಡನಹಳ್ಳಿಯಲ್ಲಿರುವ ಅವರ ಸ್ವಂತ ಜಮೀನಿನಲ್ಲಿ ಇಂದು ಸಂಜೆ ನಡೆಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 11, 2025