ದಾವಣಗೆರೆ ತಾಲ್ಲೂಕು ಬಾಡ ಗ್ರಾಮದ ವಾಸಿ ದಿ. ಬಿ.ಕೆ. ಬಸವಲಿಂಗಪ್ಪ ಇವರ ಧರ್ಮಪತ್ನಿ ಶ್ರೀಮತಿ ಕರಿಬಸಮ್ಮ ಇವರು ದಿನಾಂಕ 11.01.2024ರ ಗುರುವಾರ ಬೆಳಿಗ್ಗೆ 11.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 93 ವರ್ಷ ವಯಸ್ಸಾಗಿತ್ತು. ಏಳು ಜನ ಪುತ್ರರು, ಇಬ್ಬರು ಪುತ್ರಿಯರು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು, ಮರಿಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 12.1.2024ರ ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಬಾಡ ಗ್ರಾಮದ ಮೃತರ ತೋಟದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಕರಿಬಸಮ್ಮ
