ದಾವಣಗೆರೆ ನಿಟ್ಟುವಳ್ಳಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹತ್ತಿರದ ವಾಸಿ ಭದ್ರಾ ಸಕ್ಕರೆ ಕಾರ್ಖಾನೆ ಹಾಗೂ ಶಾಮನೂರು ಶುಗರ್ ಲಿ.ನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದ ಎ.ಬಿ. ನಾಗರಾಜ್ ಇವರು ದಿನಾಂಕ 05.02.2024ರ ಸೋಮವಾರ ರಾತ್ರಿ 10 ಗಂಟೆಗೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 80 ವರ್ಷ ವಯಸ್ಸಾಗಿತ್ತು. ಪತ್ನಿ ಪ್ರೇಮ, ಸಹೋದರರು, ಮೂವರು ಪುತ್ರಿಯರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 06.02.2024ರ ಮಂಗಳವಾರ ಮಧ್ಯಾಹ್ನ 1.30ಕ್ಕೆ ನಗರದ ಗ್ಲಾಸ್ ಹೌಸ್ ಹಿಂಭಾಗದ ಶಾಮನೂರು ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಎ.ಬಿ. ನಾಗರಾಜ್
