ದಾವಣಗೆರೆ ಭಾರತ್ ಕಾಲೋನಿ 11ನೇ ಕ್ರಾಸ್ ವಾಸಿ ನಗರಸಭೆ ಮಾಜಿ ಉಪಾಧ್ಯಕ್ಷರಾದ ಶ್ರೀಮತಿ ಸೀತಮ್ಮ ನಾಗನಾಯ್ಕ ಅವರು ದಿನಾಂಕ: 14.2.2024ರ ಬುಧವಾರ ಮಧ್ಯಾಹ್ನ 1.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. 4 ಜನ ಪುತ್ರರು, 3 ಜನ ಪುತ್ರಿಯರು, ಅಳಿಯಂದಿರು, ಸೊಸೆಯಂದಿರು, ಮೊಮ್ಮಕ್ಕಳು, ಮರಿಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 15-2-2024ರ ಗುರುವಾರ ಮಧ್ಯಾಹ್ನ 1-30ಕ್ಕೆ ನಗರದ ಲೇಬರ್ ಕಾಲೋನಿಯಲ್ಲಿರುವ ಸಾರ್ವಜನಿಕ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಶ್ರೀಮತಿ ಸೀತಮ್ಮ ನಾಗನಾಯ್ಕ
