ಸ್ವಾಮಿ ವಿವೇಕಾನಂದ ಬಡಾವಣೆ, ದಾವಣಗೆರೆ ವಾಸಿ ಮೆಳ್ಳೇಕಟ್ಟೆ ಶ್ರೀಮತಿ ನೀಲಮ್ಮ ಇವರು ದಿನಾಂಕ : 7.3.2024 ರಂದು ಗುರುವಾರ ಬೆಳಿಗ್ಗೆ 10.30ಕ್ಕೆ ನಿಧನರಾಗಿರುತ್ತಾರೆ. ಮೃತರು ಓರ್ವ ಪುತ್ರ ಇಬ್ಬರು ಪುತ್ರಿಯರು, ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಪಾರ್ಥಿವ ಶರೀರವನ್ನು ವಿವೇಕಾನಂದ ಬಡಾವಣೆಯ ಮನೆಯಲ್ಲಿ ಬೆಳಿಗ್ಗೆ 8.30ರ ವರೆಗೆ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಮೃತರ ಅಂತ್ಯಕ್ರಿಯೆಯನ್ನು 8.3.2024ರ ಶುಕ್ರವಾರ ಬೆಳಿಗ್ಗೆ 10.30ಕ್ಕೆ ಮೆಳ್ಳೇಕಟ್ಟೆ ಗ್ರಾಮದ ತಮ್ಮ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
May 19, 2024