ದಾವಣಗೆರೆ ಎಲ್ಲಮ್ಮನಗರ 10ನೇ ಕ್ರಾಸ್ ವಾಸಿ, ವೇ|| ಶ್ರೀ|| ಗುರುಮೂರ್ತಯ್ಯ ಸ್ವಾಮಿ ಹಿರೇಮಠ ಅವರು ದಿನಾಂಕ 18-03-2024ರ ಸೋಮವಾರ ಮಧ್ಯಾಹ್ನ 2.30ಕ್ಕೆ ಲಿಂಗೈಕ್ಯರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 77 ವರ್ಷ ವಯಸ್ಸಾಗಿತ್ತು. ಇಬ್ಬರು ಪತ್ನಿಯರು, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 19-03-2024ರ ಮಂಗಳವಾರ ಮಧ್ಯಾಹ್ನ 12 ಗಂಟೆಗೆ ನಗರದ ವೀರಶೈವ ರುದ್ರಭೂಮಿಯಲ್ಲಿ ನೆೇರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 10, 2025