ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮದ ವಾಸಿ, ಬಿಜೆಪಿ ಮುಖಂಡರು, ಕಕ್ಕರಗೊಳ್ಳದ ಶ್ರೀ ಆಂಜನೇಯ ದೇವಸ್ಥಾನ ಟ್ರಸ್ಟ್ನ ಅಧ್ಯಕ್ಷರಾದ ಲಿಂ|| ಕಾಡಜ್ಜಿ ಸಿದ್ದಲಿಂಗಪ್ಪನವರು ದಿನಾಂಕ : 29.03.2024ರ ಶುಕ್ರವಾರ ಬೆಳಿಗ್ಗೆ 09.45ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 81 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 30.03.2024ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಮೃತರ ಸ್ವಗ್ರಾಮವಾದ ದಾವಣಗೆರೆ ತಾಲ್ಲೂಕು ಕಕ್ಕರಗೊಳ್ಳ ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
ಕಕ್ಕರಗೊಳ್ಳದ ಕಾಡಜ್ಜಿ ಸಿದ್ದಲಿಂಗಪ್ಪ
