ದಾವಣಗೆರೆ ಸಿಟಿ ವಿದ್ಯಾನಗರ, 3ನೇ ಮೇನ್, 2ನೇ ಬಸ್ ಸ್ಟಾಪ್, ಕಸ್ತೂರಬಾ ಮಹಿಳಾ ಸಮಾಜದ ಹತ್ತಿರದ ವಾಸಿ ದಿ.ಜಿ. ಸೋಮಶೇಖರ್ ಅವರ ಧರ್ಮಪತ್ನಿ ಶ್ರೀಮತಿ ಗಂಗಮ್ಮ (74)ಅವರು ದಿನಾಂಕ : 26.05.2024ರಂದು ಭಾನುವಾರ ಮಧ್ಯಾಹ್ನ 1 ಗಂಟೆಗೆ ನಿಧನರಾಗಿದ್ದಾರೆ. ಓರ್ವ ಪುತ್ರಿ ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ದಿನಾಂಕ 27.05.2024ರಂದು ಸೋಮವಾರ ಬೆಳಿಗ್ಗೆ 9 ರಿಂದ 10 ರವರೆಗೆ ನಗರದ ಬಾಪೂಜಿ ಆಸ್ಪತ್ರೆಯಲ್ಲಿ ಹಾಗೂ ಮಧ್ಯಾಹ್ನ 2 ರಿಂದ 5 ರವರೆಗೆ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುವುದು. ನಂತರ ಮೃತರ ದೇಹವನ್ನು ಆಸ್ಪತ್ರೆಗೆ ದೇಹದಾನ ಮಾಡಲಾಗುತ್ತದೆ ಎಂದು ಕುಟುಂಬದವರು ತಿಳಿಸಿದ್ದಾರೆ.
December 27, 2024