ದಾವಣಗೆರೆ ಸಿಟಿ ಶಾಮನೂರು ವಾಸಿ ರಾಮಾಂಜನೇಯ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀ ಎಸ್.ಜಿ. ಗೌಡ್ರು ಪ್ರಭುದೇವ ಅವರು ದಿನಾಂಕ 04.10.2024ರ ಶುಕ್ರವಾರ ಮಧ್ಯಾಹ್ನ 2.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 72 ವರ್ಷ ವಯಸ್ಸಾಗಿತ್ತು. ಪತ್ನಿ, ಮೂವರು ಪುತ್ರರು, ಸಹೋದರರು-ಸಹೋದರಿಯರು, ಸೊಸೆಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 05.10.2024ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಗ್ಲಾಸ್ ಹೌಸ್ ಹತ್ತಿರವಿರುವ ಶಾಮನೂರು ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
January 21, 2025