ದಾವಣಗೆರೆ ಎಸ್.ಎಸ್. ಲೇ ಔಟ್ `ಎ’ ಬ್ಲಾಕ್, ಬಾಪೂಜಿ ಎಂ.ಬಿ.ಎ. ಕಾಲೇಜು ಎದುರು ಮನೆ ಸಂಖ್ಯೆ 1928/99ರ ವಾಸಿ ಶ್ರೀ ಸಿ.ಬಿ. ವೆಂಕಟಪ್ಪ ಅವರು ದಿನಾಂಕ 13-9-2024ರ ಶುಕ್ರವಾರ ಮಧ್ಯಾಹ್ನ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 91 ವರ್ಷ ವಯಸ್ಸಾಗಿತ್ತು. ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 14-9-2024ರ ಶನಿವಾರ ಬೆಳಿಗ್ಗೆ 11.30ಕ್ಕೆ ಗಾಂಧಿನಗರದ ಬಳಿಯ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
December 25, 2024