ದಾವಣಗೆರೆ ತಾಲ್ಲೂಕು ಹೆಬ್ಬಾಳು ಗ್ರಾಮದ ವಾಸಿ ದಿ. ಅಂಗಡಿ ಕಲ್ಲಿಂಗಪ್ಪನವರ ಧರ್ಮಪತ್ನಿ ಶ್ರೀಮತಿ ರುದ್ರಮ್ಮ (89 ವರ್ಷ) ಇವರು ದಿನಾಂಕ 21.02.2025 ರ ಶುಕ್ರವಾರ ಬೆಳಿಗ್ಗೆ 9.30ಕ್ಕೆ ನಿಧನರಾದರು. ಸರ್ಕಾರಿ ಶುಶ್ರೂಷಕಾಧಿಕಾರಿಗಳ ಸಂಘದ ದಾವಣಗೆರೆ ಜಿಲ್ಲಾ ಘಟಕದ ಅಧ್ಯಕ್ಷ ಹೆಚ್.ಕೆ.ಕಲ್ಲೇಶ್ ಸೇರಿದಂತೆ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು, ಅಳಿಯಂದಿರು ಸೊಸೆಯಂದಿರು ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು- ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯು ದಿನಾಂಕ 22.02.2025 ರ ಶನಿವಾರ ಮಧ್ಯಾಹ್ನ 12 ಗಂಟೆಗೆ ಹೆಬ್ಬಾಳು ಗ್ರಾಮದ ಮೃತರ ಸ್ವಂತ ಜಮೀನಿನಲ್ಲಿ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.
ಅಂಗಡಿ ರುದ್ರಮ್ಮ
