ದಾವಣಗೆರೆ ಎಂ.ಸಿ. ಕಾಲೋನಿ `ಎ’ ಬ್ಲಾಕ್ ವಾಸಿ ಕೃಷಿ ಇಲಾಖೆ ನಿವೃತ್ತ ಉಪ ನಿರ್ದೇಶಕರೂ, ಹಿರಿಯ ನಾಗರಿಕರ ಸಂಘದ ಉಪಾಧ್ಯಕ್ಷರೂ, ಜಂಗಮ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾಗಿದ್ದ ಎಸ್.ಎಂ ಗುರುದೇವಮೂರ್ತಿ ಇವರು ದಿನಾಂಕ 2.02.2022ರ ಬುಧವಾರ ರಾತ್ರಿ 1.15ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 83 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 3.02.2022ರ ಗುರುವಾರ ಮಧ್ಯಾಹ್ನ 3.30ಕ್ಕೆ ಮೃತರ ಸ್ವಗ್ರಾಮ ದಾವಣಗೆರೆ ತಾಲ್ಲೂಕು ಲೋಕಿಕೆರೆ ಗ್ರಾಮದ
ಮೃತರ ಜಮೀನಿನಲ್ಲಿ ನೆರವೇರಿಸಲಾಯಿತು ಎಂದು ಕುಟುಂಬದವರು ತಿಳಿಸಿದ್ದಾರೆ.
January 25, 2025