ಅನಾರೋಗ್ಯ ದಿಂದ ಬಳಲುತ್ತಿದ್ದ ಮಹಾನಗರ ಪಾಲಿಕೆಯ ಸಹಾಯಕ ಅಭಿಯಂತರ ಎನ್. ಮುರುಗೇಂ ದ್ರಪ್ಪ ಅವರು ಇಂದು ರಾತ್ರಿ 8.15ಕ್ಕೆ ನಿಧನರಾದರು.ಕಳೆದ ಒಂದು ವಾರದಿಂದ ಬಾಪೂಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತರಿಗೆ ಸುಮಾರು 50 ವರ್ಷ ವಯಸ್ಸಾಗಿತ್ತು. ಪತ್ನಿ, ಓರ್ವ ಪುತ್ರ, ಓರ್ವ ಪುತ್ರಿಯನ್ನು ಅವರು ಅಗಲಿದ್ದಾರೆ ಎಂದು ಕುಟುಂಬದವರು ತಿಳಿಸಿದ್ದಾರೆ.