ದಾವಣಗೆರೆ ನಗರದ ಶಿವಕುಮಾರ ಸ್ವಾಮಿ ಬಡಾವಣೆ ವಾಸಿ ಶ್ರೀಮತಿ ನಿರ್ಮಲ ಮೇಡ್ಲೇರಿ ಇವರ ಪತಿ, ವಿಜಯ ಬ್ಯಾಂಕ್ ನಿವೃತ್ತ ನೌಕರರಾದ ಶ್ರೀ ಈರಣ್ಣ ಮೇಡ್ಲೇರಿ ಅವರು ದಿನಾಂಕ 05.01.2021ನೇ ಮಂಗಳವಾರ ಮಧ್ಯಾಹ್ನ 2.20ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ 67 ವರ್ಷ ವಯಸ್ಸಾಗಿತ್ತು. ಪತ್ನಿ, ಇಬ್ಬರು ಪುತ್ರರು, ಸೊಸೆಯಂದಿರು, ಮೊಮ್ಮಗಳು ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 06.01.2021ನೇ ಬುಧವಾರ ಬೆಳಿಗ್ಗೆ 10 ಗಂಟೆಗೆ ದಾವಣಗೆರೆ ನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 1, 2025