ದಾವಣಗೆರೆ ತಾಲ್ಲೂಕು ಹುಚ್ಚೇನಹಳ್ಳಿ ಗ್ರಾಮದ ನಿವೃತ್ತ ಶಿಕ್ಷಕರಾದ ಶ್ರೀ ಬಸವಲಿಂಗಪ್ಪ ಶರಣಪ್ಪನವರ ಧರ್ಮಪತ್ನಿ ಶ್ರೀಮತಿ ಸಾವಿತ್ರಮ್ಮ ಅವರು ದಿನಾಂಕ 22.02.2021ರ ಸೋಮವಾರ ತಡ ರಾತ್ರಿ 12.30ಕ್ಕೆ ನಿಧನರಾದರೆಂದು ತಿಳಿಸಲು ವಿಷಾದಿಸುತ್ತೇವೆ. ಮೃತರಿಗೆ ಸುಮಾರು 82 ವರ್ಷ ವಯಸ್ಸಾಗಿತ್ತು. ಪತಿ, ಓರ್ವ ಪುತ್ರ, ನಾಲ್ವರು ಪುತ್ರಿಯರು, ಸೊಸೆ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿರುವ ಮೃತರ ಅಂತ್ಯಕ್ರಿಯೆಯನ್ನು ದಿನಾಂಕ 23.02.2021ರ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಹುಚ್ಚೇನಹಳ್ಳಿಯಲ್ಲಿರುವ ಮೃತರ ಸ್ವಂತ ಜಮೀನಿನಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದವರು ತಿಳಿಸಿದ್ದಾರೆ.
February 28, 2025